ಕನ್ನಡಪ್ರಭ ವಾರ್ತೆ ಶಿವಮೊಗ್ಗ
ರಾಜ್ಯದಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು ಬರಗಾಲ ಮತ್ತು ಬೆಲೆ ಏರಿಕೆಯ ಇಂದಿನ ದಿನಮಾನಗಳಲ್ಲಿ ಜನಸಾಮಾನ್ಯರ ಕೈಹಿಡಿದಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಅಭಿಪ್ರಾಯಪಟ್ಟರು.ತಾಲೂಕಿನ ಸಿರಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಗೆರೆ ಮಾರಿಕಾಂಬಾ ದೇವಸ್ಥಾನ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಗ್ರಾಮಾಂತರ ಕಾರ್ಯ ಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ, ಮಹಿಳೆಯರಿಗೆ ವಾರ್ಷಿಕ ₹1 ಲಕ್ಷ ಕುಟುಂಬ ನಿರ್ವಹಣೆ ಭತ್ಯೆ ಸೇರಿದಂತೆ, ಅನೇಕ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳು ಶೇ.100ರಷ್ಟು ನಮ್ಮ ಕೈಹಿಡಿಯಲಿವೆ. ಇವುಗಳಿಂದ ಬಿಜೆಪಿಯವರು ಸೇರಿದಂತೆ ಎಲ್ಲ ವರ್ಗದ ಜನರಿಗೂ ಅನುಕೂಲ ಆಗಿದ್ದು, ಆರ್ಥಿಕ ಶಕ್ತಿ ಸಿಕ್ಕಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರಾಸರಿ 60ಸಾವಿರ ಕುಟುಂಬಗಳು ಒಂದಿಲ್ಲೊಂದು ಯೋಜನೆಯ ಫಲಾನುಭವಿಗಳಾಗಿವೆ. ಫಲಾನುಭವಿ ಗಳೆಲ್ಲರಿಗೂ ಕಾಂಗ್ರೆಸ್ ಬಗ್ಗೆ ಕೃತಜ್ಞತೆ ಇರುವುದು ನನಗೆ ಶ್ರೀರಕ್ಷೆಯಾಗಲಿದೆ ಎಂದರು.ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಮಾತನಾಡಿ, ತಳಮಟ್ಟದಲ್ಲೆಲ್ಲೂ ನರೇಂದ್ರ ಮೋದಿ ಅಲೆ ಇಲ್ಲ. ಇರುವುದೆಲ್ಲವೂ ರಾಜ್ಯ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳು ಮತ್ತು ಕಾಂಗ್ರೆಸ್ ಅಲೆ ಎಂದ ಅವರು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಅವರಿಗೆ ಬೆಂಬಲಿಸಬೇಕು ಎಂದು ಕೋರಿದರು.
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಈ ಭಾಗಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರು ಅತಿ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಕೂಡ ಇಲ್ಲಿನ ರೈತರ ನೆರವಿಗೆ ನಿಂತಿದ್ದರು. ಅದೇ ಹಾದಿಯಲ್ಲಿ ಗೀತಾ ಅವರು ಕೂಡ ಸಾಗಲಿದ್ದಾರೆ. ಆದ್ದರಿಂದ, ಈ ಚುನಾವಣೆಯಲ್ಲಿ ಮತ ನೀಡಿ ಹರಸಬೇಕು ಎಂದರು.ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕರಿಯಣ್ಣ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಎಲ್ಲಾ ಜಾತಿ - ಧರ್ಮಗಳಿಗೆ ಅನುಕೂಲವಾಗಿದೆ. ಕಡುಬಡವರು ಬದುಕು ರೂಪಿಸಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆ ಋಣ ತೀರಿಸಲು ಸಿಕ್ಕ ಅವಕಾಶವಿದು. ಆದ್ದರಿಂದ, ಇಲ್ಲಿ ಗೀತಕ್ಕ ಅವರಿಗೆ ಮತ ನೀಡಬೇಕು ಎಂದರು
ಭೋವಿ ನಿಗಮ ಅಧ್ಯಕ್ಷ ಎಸ್.ರವಿಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಂತವೀರ ನಾಯ್ಕ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಆರ್.ನಾಗರಾಜ,ಲೋಕೇಶಪ್ಪ, ನಿರಂಜನ್, ಧೀರರಾಜ ಹೊನ್ನವಿಲೆ, ಇಕ್ಕೇರಿ ರಮೇಶ್, ಗಿರೀಶ್, ಉಡ್ಡಪ್ಪ, ಮಸ್ಕರ್ ರಾಜಪ್ಪ, ಕೆ.ಪಿ.ಗಣಪತಿ, ಅಣ್ಣಪ್ಪ, ಕಲೀಂ, ಕೆ.ಆರ್.ಲೋಕೇಶ್, ಶ್ರೀನಿವಾಸ, ಕೆ.ಸಿ.ನಾಗರಾಜ, ನೂರುಲ್ಲಾ, ದೊಡಪ್ಪ, ಶಂಕರಪ್ಪ, ಕೃಷ್ಣ ಮೂರ್ತಿ ಇದ್ದರು.ಕಾಂಗ್ರೆಸ್ ಅಭ್ಯರ್ಥಿಗೆ ಪರ
ಅಖಾಡಕ್ಕೆ ಸಂಗಮೇಶ್ವರ್ಭದ್ರಾವತಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಅವರಿಗೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚಿನ ಮತಗಳನ್ನು ತಂದು ಕೊಡುವ ನಿಟ್ಟಿನಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಹೆಚ್ಚಿನ ಶ್ರಮವಹಿಸಿದ್ದು, ಅಭ್ಯರ್ಥಿಪರ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ.ಕಳೆದ ಕೆಲವು ವರ್ಷಗಳಿಂದ ಸಂಗಮೇಶ್ವರ್ ಅವರ ಆರೋಗ್ಯ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಂಜೆ ವೇಳೆ ಮಾತ್ರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಇದೀಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಪರ ಹೆಚ್ಚಿನ ಪ್ರಚಾರ ಕಾರ್ಯದಲ್ಲಿ ತೊಡಗಿ ಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಗ್ರಾಮಾಂತರ ಭಾಗದಲ್ಲಿ ಪ್ರಚಾರ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಕುಟುಂಬ ವರ್ಗದವರು, ಹಿತೈಷಿಗಳು, ಅಭಿಮಾನಿಗಳು ಹಾಗು ಪಕ್ಷದ ಮುಖಂಡರು, ಕಾರ್ಯಕರ್ತರು ಸಂಗಮೇಶ್ವರ್ ಅವರಿಗೆ ಮತ್ತಷ್ಟು ಹುಮ್ಮಸ್ಸು ತುಂಬುವ ಮೂಲಕ ಎದುರಾಳಿಗಳಿಗೆ ತಕ್ಕ ಉತ್ತರ ನೀಡಲು ಮುಂದಾಗಿದ್ದಾರೆ.