6ರಂದು ಗುಬ್ಬಿ ಪತ್ರಕರ್ತರ ಪದಗ್ರಹಣ ಸಮಾರಂಭ

KannadaprabhaNewsNetwork |  
Published : Apr 04, 2026, 01:15 AM IST
ಗುಬ್ಬಿಕಾರ್ಯನಿರತ ಪತ್ರಕರ್ತರ ಸಂಘದ ಗುಬ್ಬಿ ತಾಲ್ಲೂಕು ಘಟಕದ ಕಾರ್ಯಾಲಯ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಏ. 6 ರಂದು ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನಡೆಯಲಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಲ್.ಯೋಗೇಶ್ ತಿಳಿಸಿದರು. | Kannada Prabha

ಸಾರಾಂಶ

ಕಾರ್ಯನಿರತ ಪತ್ರಕರ್ತರ ಸಂಘದ ಗುಬ್ಬಿ ತಾಲೂಕು ಘಟಕದ ಕಾರ್ಯಾಲಯ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ 6 ರಂದು ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆಯಲಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಲ್.ಯೋಗೇಶ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ಕಾರ್ಯನಿರತ ಪತ್ರಕರ್ತರ ಸಂಘದ ಗುಬ್ಬಿ ತಾಲೂಕು ಘಟಕದ ಕಾರ್ಯಾಲಯ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ 6 ರಂದು ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆಯಲಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಲ್.ಯೋಗೇಶ್ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿನ ನೂತನ ಕಾರ್ಯಾಲಯದಲ್ಲಿ ನಡೆದ ಪೂರ್ವಭಾವಿ ಸಭೆ ನಂತರ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಂಘದ ಕಚೇರಿ ತೆರೆಯಲು ಈಗಾಗಲೇ ಕ್ರಮ ವಹಿಸಲಾಗಿದೆ. ಅದೇ ರೀತಿಯಲ್ಲಿ ಗುಬ್ಬಿಯಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿ ಕಟ್ಟಡವನ್ನು ಸಂಘದ ಕಚೇರಿಗೆ ಬಳಸಿಕೊಳ್ಳಲು ಅನುಮತಿ ಪಡೆದು 6 ಸೋಮವಾರ ಉದ್ಘಾಟನೆಗೊಳ್ಳಲಿದೆ ಎಂದರು. ಪತ್ರಕರ್ತರ ಸಕ್ರಿಯ ಚಟುವಟಿಕೆ ಮೂಲಕ ಸಂಘದ ಇರುವಿಕೆ ಗುರುತಿಸಲು ಕಚೇರಿ ಆರಂಭಿಸಿ ಒಗ್ಗಟ್ಟು ಪ್ರದರ್ಶನ ಮಾಡುವಂತೆ ಸಲಹೆ ನೀಡಿದರು.ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಡಿ.ಮಂಜುನಾಥ್ ಮಾತನಾಡಿ ಸಂಘದ ಕಚೇರಿ ಆರಂಭಿಸಿ ಪತ್ರಕರ್ತರ ಒಗ್ಗಟ್ಟು ಪ್ರದರ್ಶನ ಹಾಗೂ ಚುರುಕಿನ ಚಟುವಟಿಕೆಗೆ ಅಗತ್ಯ ಸವಲತ್ತು ಕಚೇರಿಯಲ್ಲಿ ಒದಗಿಸಲಾಗುವುದು. ನಮ್ಮಲ್ಲಿನ ಬಿಕ್ಕಟ್ಟು ಶಮನಗೊಳಿಸಿ ಒಗ್ಗಟ್ಟು ಪ್ರದರ್ಶನ ಜಿಲ್ಲಾ ಘಟಕದಿಂದ ನಡೆದಿದೆ. ಸಂಘದ ಎಲ್ಲಾ ನಿಯಮಾವಳಿಯಂತೆ ಗುಬ್ಬಿ ತಾಲೂಕು ಘಟಕ ಕೆಲಸ ಮಾಡಲಿದೆ ಎಂದರು. ಕಾರ್ಯಕ್ರಮವನ್ನು ಶಾಸಕ ಎಸ್.ಆರ್.ಶ್ರೀನಿವಾಸ್ ಹಾಗೂ ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉದ್ಘಾಟಿಸಲಿದ್ದಾರೆ. ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧ್ಯಕ್ಷ ಎಲ್.ಯೋಗೇಶ್ ಬೋಧಿಸಲಿದ್ದಾರೆ. ಪ್ರಮಾಣಪತ್ರವನ್ನು ಜಿಪಂ ಸಿಇಒಬಿ.ವಿ.ಅಶ್ವಿಜಾ ವಿತರಿಸಲಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ಸಂಜಯ್ ಮಾತನಾಡಿ ಕಚೇರಿ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭಕ್ಕೆ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಉಪವಿಭಾಗಾಧಿಕಾರಿ ನಹೀದಾ ಜಮ್ ಜಮ್, ತಹಸೀಲ್ದಾರ್ ಆರತಿ.ಬಿ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು, ತಾಪಂ ಇಒ ರಂಗನಾಥ್, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ ಭಾಗವಹಿಸಲಿದ್ದಾರೆ. ಜೊತೆಗೆ ಸಂಘದ ರಾಜ್ಯ ಪ್ರತಿನಿಧಿ ಚಿ.ನಿ.ಪುರುಷೋತ್ತಮ್ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಮಾರುತಿ ಗಂಗಹನುಮಯ್ಯ, ಮೆಳೆಕಲ್ಲಹಳ್ಳಿ ಯೋಗೀಶ್ ಸೇರಿದಂತೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಮರಹಾನ್ಕುಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ
ಹೋಟೆಲ್ ಕಾರ್ಮಿಕನ ಹತ್ಯೆ ಖಂಡಿಸಿ ಪ್ರತಿಭಟನೆ