ಸಾಮೆತ್ತಡ್ಕದಲ್ಲಿ ನಗರ ಆರೋಗ್ಯ ಕೇಂದ್ರ ಕಟ್ಟಡಕ್ಕೆ ಗುದ್ದಲಿ ಪೂಜೆ

KannadaprabhaNewsNetwork |  
Published : Nov 09, 2025, 03:30 AM IST
ಫೋಟೋ: ೮ಪಿಟಿಆರ್-ಗುದ್ದಲಿಶಾಸಕರು ನಗರ ಆರೋಗ್ಯ ಕೇಂದ್ರ ಕಟ್ಟಡಕ್ಕೆ ಗುದ್ದಲಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಸಾಮೆತ್ತಡ್ಕದಲ್ಲಿ ೧ ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನಡೆಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ಜನರಿಗೆ ತುರ್ತು ಸೇವೆ ನೀಡುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಗತ್ಯವಿದ್ದು, ಶಾಲಾ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಆರೋಗ್ಯ ಕೇಂದ್ರಕ್ಕೆ ಸ್ವಂತ ಕಟ್ಟಡವಾಗುತ್ತಿದೆ. ಜಾಗ ನೀಡಿ, ಅನುದಾನ ಬಿಡುಗಡೆಯಾಗಿ ಸಮಯವಾದರೂ ಕಾಮಗಾರಿ ತಡಮಾಡುವುದು ಸರಿಯಲ್ಲ ಎಂದು ಶಾಸಕ ಅಶೋಕ ಕುಮಾರ್ ರೈ ಹೇಳಿದರು.ಅವರು ಶನಿವಾರ ನಗರದ ಸಾಮೆತ್ತಡ್ಕದಲ್ಲಿ ೧ ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಸರ್ಕಾರವು ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ಆರೋಗ್ಯ ಕ್ಷೇತ್ರಕ್ಕಾಗಿ ಕೋಟ್ಯಂತರ ರುಪಾಯಿ ಅನುದಾನಗಳನ್ನು ಬಿಡುಗಡೆಗೊಳಿಸುತ್ತಿವೆ ಎಂದರು.ಹಿರಿಯರಾದ ಸಾಮೆತ್ತಡ್ಕ ಗೋಪಾಲಕೃಷ್ಣ ಭಟ್ ಮಾತನಾಡಿ, ಪುತ್ತೂರು ನಗರದ ಬೇಡಿಕೆಯಾಗಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಮೆತ್ತಡ್ಕದಲ್ಲಿ ನಿರ್ಮಾಣವಾಗಲು ಶಾಸಕರ ಪ್ರಯತ್ನ ಬಹಳವಾಗಿದೆ. ಅವರು ಜಾಗವನ್ನು ಮಂಜೂರುಗೊಳಿಸಿ, ಸರ್ಕಾರದಿಂದ ಅನುದಾನವನ್ನೂ ಮಂಜೂರುಗೊಳಿಸುವಲ್ಲಿ ಶ್ರಮ ವಹಿಸಿದ್ದಾರೆ. ಮುಂದೆ ಇಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಸ್ಥಳೀಯರು ಸೇರಿದಂತೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ವೈದ್ಯಾಧಿಕಾರಿ ಡಾ. ಸುಶ್ಮಿತಾ, ಎಂಜಿನಿಯರ್ ಸುಧಾಕರ, ಪಕ್ಷದ ಪ್ರಮುಖರಾದ ಮುರಳೀಧರ ರೈ ಮಠಂತಬೆಟ್ಟು, ಸಾಜ ಶಿವರಾಮ ಆಳ್ವ, ಪ್ರಸನ್ನ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!