ಕನ್ನಡಪ್ರಭ ವಾರ್ತೆ ಮಂಗಳೂರು/ಮೂಲ್ಕಿ
ಜು.17 ರಂದು ಮಂಗಳೂರು ಪುರಭವನದಲ್ಲಿ ಮಧ್ಯಾಹ್ನ 1 ರಿಂದ 3ರ ತನಕ ಮೃತರ ಸಾರ್ವಜನಿಕ ಅಂತಿಮ ದರ್ಶನ ನಡೆಯಲಿದ್ದು, ಬಳಿಕ ಅವರ ಇಚ್ಛೆಯಂತೆ ದೇಹದಾನ ಮಾಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕನ್ನಡ, ತುಳುರಂಗ ಭೂಮಿಯಲ್ಲಿ ನೂರಾರು ಅತ್ಯುತ್ತಮ ಯಶಸ್ವಿ ನಾಟಕಗಳನ್ನು ರಚಿಸಿ ನಿರ್ದೇಶಿಸಿದ್ದ ಸದಾನಂದ ಸುವರ್ಣ, ಘಟಶ್ರಾದ್ಧ, ಕುಬಿ ಮತ್ತು ಇಯಾಲದಂಥ ಸದಭಿರುಚಿಯ ಸಿನೆಮಾ, ಗುಡ್ಡೆದ ಭೂತದಂಥ ಧಾರಾವಾಹಿ, ಕೋರ್ಟ್ ಮಾರ್ಷಲ್ ನಾಟಕ, ಶಿವರಾಮ ಕಾರಂತರ ಕುರಿತು ಆಪ್ತ ನೋಟ ನೀಡುವ ಸಾಕ್ಷ್ಯಚಿತ್ರ, ಧಾರಾವಾಹಿಗಳನ್ನು ರಚಿಸಿದ್ದರು.ಇವರ ನಿರ್ದೇಶನದ ಘಟಶ್ರಾದ್ಧ ಚಲನಚಿತ್ರಕ್ಕೆ 18 ಪ್ರಶಸ್ತಿಗಳು ಲಭಿಸಿತ್ತು. ಭಾರತದಲ್ಲಿ ಕಳೆದ ಶತಮಾನದಲ್ಲಿ ತಯಾರಾದ ಉತ್ಕೃಷ್ಟ 100 ಚಲನಚಿತ್ರಗಳಲ್ಲಿ ಒಂದಾದ ಹೆಗ್ಗಳಿಕೆ ಪಡೆದಿದೆ. ಅನೇಕ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ.
ಮುಂಬೈಯಲ್ಲಿ ಕನ್ನಡ ರಂಗಭೂಮಿಗೆ ಚೈತನ್ಯ ತುಂಬಿದ ಅವರು, ಸಾಹಿತ್ಯದಲ್ಲೂ ಆಸಕ್ತಿ ಹೊಂದಿದ್ದರು. ಸಣ್ಣ ಕತೆ, ಕಾದಂಬರಿಗಳನ್ನು ಕೂಡ ಬರೆದಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ತಬರನ ಕತೆ, ಮನೆ, ಕ್ರೌರ್ಯ ಚಿತ್ರಗಳನ್ನು ನಿರ್ಮಿಸಿದ್ದರು. 1989ರಲ್ಲಿ ತೇಜಸ್ವಿ ಅವರ ಸಣ್ಣ ಕತೆ ಆಧಾರಿತ ಕುಬಿ ಹಾಗೂ ಇಯಾಲ ಸುವರ್ಣ ಅವರ ನಿರ್ದೇಶನದ ಮೊದಲ ಚಿತ್ರವಾಗಿದೆ. ಗುಡ್ಡದ ಭೂತ ಅವರ ನಿರ್ದೇಶನದ ಜನಪ್ರಿಯ ಕಿರುತೆರೆ ಧಾರವಾಹಿಯಾಗಿದ್ದು ಶಿವರಾಮ ಕಾರಂತ, ಶ್ರೀ ನಾರಾಯಣ ಗುರು, ತುಳುನಾಡು ಒಂದು ಇಣುಕುನೋಟ ಎಂಬ ಸಾಕ್ಷ್ಯಚಿತ್ರವನ್ನೂ ಸುವರ್ಣ ನಿರ್ದೇಶಿಸಿದ್ದರು.
ತುಳು ಅಕಾಡೆಮಿ ಸಂತಾಪ: ಹಿರಿಯ ರಂಗಕರ್ಮಿ, ಸಿನಿಮಾ ನಿರ್ಮಾಪಕ ಸದಾನಂದ ಸುವರ್ಣರ ನಿಧನಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಸಂತಾಪ ಸೂಚಿಸಿದ್ದಾರೆ.