ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಆತಗೂರು ಹೋಬಳಿ ವ್ಯಾಪ್ತಿಯ ಹುಳುಗನಹಳ್ಳಿಯ ಉದ್ಯಮಿ ಹಾಗೂ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ನಂದೀಶ್ ಗೌಡ ಅವರು ತಮ್ಮ ತಂದೆ ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್ ಹೆಸರಿನಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಸುಮಾರು 20 ಲಕ್ಷ ರುಪಾಯಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಗುರುವಾರ ಚಾಲನೆ ನೀಡಿದರು.
ಗ್ರಾಮದಲ್ಲಿ ಈಗಾಗಲೇ ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್‌ನಿಂದ ನರೇಗಾ ಯೋಜನೆಯೊಂದಿಗೆ 12 ಲಕ್ಷ ರು. ವೆಚ್ಚದಲ್ಲಿ ಕಲ್ಯಾಣಿ ನಿರ್ಮಾಣ ಮಾಡಲಾಗಿದೆ. ಅಲ್ಲದೇ, ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ, ಮೂಲಭೂತ ಸೌಲಭ್ಯಗಳು ಹಾಗೂ ಗ್ರಾಮೀಣ ಮಕ್ಕಳು ಶಾಲೆಗೆ ಕಡ್ಡಾಯವಾಗಿ ಹಾಜರಾಗಲು ಆಟೋ ಸೌಲಭ್ಯ ಮತ್ತು ಸಮವಸ್ತ್ರ ವಿತರಿಸುವ ಮೂಲಕ ಸಾಮಾಜಿಕ ಸೇವಾ ಕಾರ್ಯಗಳು ನಿರಂತರವಾಗಿ ನಡೆಯುತ್ತಿದೆ. ಈಗ ಸಮುದಾಯ ಭವನ ನಿರ್ಮಾಣಕ್ಕೆ ಆರ್ಥಿಕ ಸಂಪನ್ಮೂಲ ಕ್ರೂಡಿ ಕರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಶಾಸಕ ಕೆ.ಎಂ. ಉದಯ್ ಸೇರಿದಂತೆ ಜನಪ್ರತಿನಿಧಿಗಳಿಗೆ ಮನವಿ ಮಾಡಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ನಂದೀಶ್ ಗೌಡ ತಿಳಿಸಿದರು.ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ರಮೇಶ್, ಚಿಕ್ಕೋನು, ಕೃಷ್ಣ, ಚೆಲುವರಾಜು, ರಾಮಲಿಂಗಯ್ಯ, ರಾಜಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.ತಿಥಿ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರ
ತಾಲೂಕಿನ ಮಾರಸಿಂಗನಹಳ್ಳಿಯಲ್ಲಿ ಚನ್ನಮ್ಮನವರ ಉತ್ತರ ಕ್ರಿಯಾದಿ ಭೂಶಾಂತಿ ಅಂಗವಾಗಿ ಭಾನುವಾರ (ಫೆ.೨೨)ದಂದು ಬೆಳಗ್ಗೆ ೮.೩೦ ಗಂಟೆಗೆ ರಕ್ತದಾನ ಶಿಬಿರ ನಡೆಯಲಿದೆ.
ನೆಲದನಿ ಬಳಗದ ಟಿ.ಪ್ರತಾಪ್ ಇದೇ ಸಂದರ್ಭದಲ್ಲಿ ೪೫ ನೇ ಬಾರಿಗೆ ರಕ್ತದಾನ ಮಾಡಲಿದ್ದಾರೆ. ಇವರು ತಮ್ಮ ಮದುವೆಯ ಸಂದರ್ಭದಲ್ಲಿಯೂ ರಕ್ತದಾನ ಮಾಡಿದ್ದು, ಮೃತ ಚನ್ನಮ್ಮನವರ ಮೊಮ್ಮೊಗನಾಗಿದ್ದಾರೆ. ಇವರು ನೆಲದನಿ ಬಳಗದ ಜೊತೆಯಲ್ಲಿ ರಕ್ತದಾನ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.