2.70 ಕೋಟಿ ರು. ವೆಚ್ಚದಲ್ಲಿ ಕಾಮಗಾರಿಗಳಿಗೆ ಚಾಲನೆ

KannadaprabhaNewsNetwork | Published : Jan 25, 2025 1:01 AM

ಸಾರಾಂಶ

ಸೇವೆಯ ಉದ್ದೇಶದಿಂದಾಗಿ 1.50 ಕೋಟಿ ರು. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ

ಕನ್ನಡಪ್ರಭ ವಾರ್ತೆ ನಂಜನಗೂಡು

ತಾಲೂಕಿನ ಮಹಾದೇವ ತಾತ ಅವರ ಸಂಗಮ ಕ್ಷೇತ್ರ, ಕಪ್ಪಸೋಗೆ ಗ್ರಾಮ, ದೇಬೂರು, ಉಪ್ಪಿನಹಳ್ಳಿ ಗ್ರಾಮಗಳಲ್ಲಿ 2.70 ಕೋಟಿ ರು. ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

ತಾಲೂಕಿನ ಸಂಗಮ, ಕಪ್ಪಸೋಗೆ, ದೇಬೂರು, ಉಪ್ಪಿನಹಳ್ಳಿ ಗ್ರಾಮಗಳಲ್ಲಿ ಶುಕ್ರವಾರ 2.70 ಕೋಟಿ ವೆಚ್ಚದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಸಂಗಮ ಕ್ಷೇತ್ರದಲ್ಲಿ ಅವರು ಮಾತನಾಡಿದರು.

ತಾಲೂಕಿನ ಮಹಾದೇವತಾತ ರವರ ಸಂಗಮ ಪುಣ್ಯ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲದೆ ಸೇವೆಯ ಉದ್ದೇಶದಿಂದಾಗಿ 1.50 ಕೋಟಿ ರು. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಗಮ ಕ್ಷೇತ್ರದ ಅಭಿವೃದ್ಧಿಗಾಗಿ ಸಣ್ಣ ನೀರಾವರಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ನನಗೆ ಸೂಚನೆ ನೀಡುವ ಮೂಲಕ ಅವರು ಸೇವೆಯ ಬದ್ಧತೆಯನ್ನು ತೋರಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಸಣ್ಣ ನೀರಾವರಿ ಇಲಾಖೆ ಸಚಿವ ಬೋಸರಾಜುರವರು ಕ್ಷೇತ್ರಕ್ಕೆ 5 ಕೋಟಿ ರು. ಗಳನ್ನು ಬಿಡುಗಡೆ ಮಾಡಿದ್ದಾರೆ. 1.50 ಕೋಟಿ ಸಂಗಮ ಕ್ಷೇತ್ರಕ್ಕೆ, ಹುಲ್ಲಹಳ್ಳಿ ಗ್ರಾಮದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಸೋಪಾನಕಟ್ಟೆ ನಿರ್ಮಾಣ, ನಗರದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ತಡೆಗೋಡೆ ಮತ್ತು ಸೋಪಾನಕಟ್ಟೆ ನಿರ್ಮಾಣ, ತಾಲೂಕಿನ ದೇವರಾಯ ಶೆಟ್ಟಿಪುರ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ನಿಯೋಜಿಸಲಾಗಿದೆ. ಅಲ್ಲದೆ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ 25 ಕೋಟಿ ರು. ಗಳು ಮಂಜೂರಾಗಿದ್ದು, ಈಗಾಗಲೇ 8.5 ಕೋಟಿ ರು. ವೆಚ್ಚದಲ್ಲಿ ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಮತ್ತು ಚರಂಡಿ ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಈಗಾಗಲೇ ಕಾಮಗಾರಿಯೂ ಮುಕ್ತಾಯಗೊಂಡಿದೆ ಎಂದು ಅವರು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್, ಶ್ರೀಕಂಠನಾಯಕ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಕೆ. ಮಾರುತಿ, ಕಾಡಾ ಅಧ್ಯಕ್ಷ ಮರಿಸ್ವಾಮಿ, ಕಾಂಗ್ರೆಸ್ ಎಸ್ಸಿ ಬ್ಲಾಕ್ ಅಧ್ಯಕ್ಷ ಶಿವಣ್ಣ, ಭೂ ನ್ಯಾಯ ಮಂಡಳಿ ಸಮಿತಿ ಸದಸ್ಯ ಜಯರಾಮ್, ಹಾಡ್ಯ ಗ್ರಾಪಂ ಅಧ್ಯಕ್ಷ ಹರೀಶ್, ಮುಖಂಡರಾದ ರಾಜೇಶ, ರಾಜು, ಪರಶಿವಮೂರ್ತಿ, ಎಂ. ಮಾದಪ್ಪ, ಮಹೇಶ್, ಸಂಗರಾಜು, ಸೂರ್ಯಕುಮಾರ್, ಬಸವರಾಜು ಇದ್ದರು.

-------------

Share this article