ಕಸ ಗುಡಿಸಿ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು

KannadaprabhaNewsNetwork |  
Published : Dec 13, 2023, 01:00 AM IST
ಕಸ ಗುಡಿಸಿ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು | Kannada Prabha

ಸಾರಾಂಶ

ಸೇವೆ ಕಾಯಮಾತಿ ಮತ್ತು ಸೇವಾ ಭದ್ರತೆಗೆ ಆಗ್ರಹಿಸಿ ಪ್ರತಿಭಟನಾ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು ಪೊರಕೆ ಹಿಡಿದು ಜಿಲ್ಲಾಧಿಕಾರಿಗಳ ಕಚೇರಿಯನ್ನು ಸ್ವಚ್ಛಗೊಳಿಸುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.ಅತಿಥಿ ಉಪನ್ಯಾಸಕರ ಪ್ರತಿಭಟನೆ 20.ನೇ ದಿನಕ್ಕೆ ಕಾಲಿಟ್ಟಿದ್ದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪೊರಕೆ ಹಿಡಿದು ಸರ್ಕಾರಿ ಕಚೇರಿಯ ಕಸ ಗುಡಿಸುವ ಮೂಲಕ ತಮ್ಮ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಅತಿಥಿ ಉಪನ್ಯಾಸಕರು ಒತ್ತಾಯಿಸಿದರು.

ಸೇವೆ ಕಾಯಮಾತಿ, ಸೇವಾ ಭದ್ರತೆಗೆ ಆಗ್ರಹಡೀಸಿ ಕಚೇರಿ ಸ್ವಚ್ಛಗೊಳಿಸುವ ಮೂಲಕ ಆಕ್ರೋಶಕನ್ನಡಪ್ರಭ ವಾರ್ತೆ, ತುಮಕೂರು

ಸೇವೆ ಕಾಯಮಾತಿ ಮತ್ತು ಸೇವಾ ಭದ್ರತೆಗೆ ಆಗ್ರಹಿಸಿ ಪ್ರತಿಭಟನಾ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು ಪೊರಕೆ ಹಿಡಿದು ಜಿಲ್ಲಾಧಿಕಾರಿಗಳ ಕಚೇರಿಯನ್ನು ಸ್ವಚ್ಛಗೊಳಿಸುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಅತಿಥಿ ಉಪನ್ಯಾಸಕರ ಪ್ರತಿಭಟನೆ 20.ನೇ ದಿನಕ್ಕೆ ಕಾಲಿಟ್ಟಿದ್ದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪೊರಕೆ ಹಿಡಿದು ಸರ್ಕಾರಿ ಕಚೇರಿಯ ಕಸ ಗುಡಿಸುವ ಮೂಲಕ ತಮ್ಮ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಅತಿಥಿ ಉಪನ್ಯಾಸಕರು ಒತ್ತಾಯಿಸಿದರು.

ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ. ಧರ್ಮವೀರ.ಕೆ.ಎಚ್, ಮಾತನಾಡಿ ೨೦.ದಿನಗಳಿಂದ ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಬೀದಿಬದಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು ಸರ್ಕಾರ ಸ್ಪಂದಿಸದೆ, ವಿದ್ಯಾರ್ಥಿಗಳಿಗೂ ಅನ್ಯಾಯ ಮಾಡುತ್ತಾ, ನಮ್ಮ ನ್ಯಾಯಯುತ ಧ್ವನಿಗೂ ಅನ್ಯಾಯವೆಸಗುತಿದೆ ಸರ್ಕಾರ ಕಚೇರಿಯ ಸ್ವಚ್ಛ ಮಾಡುವ ಮೂಲಕ ನಮ್ಮ ಬೇಡಿಕೆಯನ್ನು ಈಡೇರಿಸಬೇಕೆಂದು ಸರ್ಕಾರಕ್ಕೆ ಆಗ್ರಿಹಿಸುತ್ತಿದ್ದೇವೆ ಎಂದರು.

ಹತ್ತಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ, ಲಕ್ಷಾಂತರ ಮಕ್ಕಳ ಭವಿಷ್ಯವನ್ನು ರೂಪಿಸಿದ್ದೇವೆ, ಆದರೆ ನಮ್ಮ ಜೀವನಕ್ಕೊಂದು ಭದ್ರತೆ ಇಲ್ಲದಂತಾಗಿ, ನಮ್ಮ ಭವಿಷ್ಯವೇ ಮಂಕು ಕವಿದಿದೆ. ಎಷ್ಟೋ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ, ಆದ್ದರಿಂದ ಕೂಡಲೇ ಕಾಯಾಮಾತಿಗೆ ಕ್ರಮ ಕೈಗೊಳ್ಳಬೇಕು. ಅತಿಥಿ ಉಪನ್ಯಾಸಕರ ಗೈರು ಹಾಜರಾಗುತ್ತಿದ್ದಿರುವುದರಿಂದ ರಾಜ್ಯಾದ್ಯಂತ ಓದುತ್ತಿರುವ ಲಕ್ಷಾಂತರ ಮಕ್ಕಳಿಗೆ ತರಗತಿಗಳು ನಡೆಯುತ್ತಿಲ್ಲ, ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿನ್ನಡೆಯಾಗುತ್ತಿದೆ, ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೇರೆ ಉದ್ಯೋಗಗಳಿಗೂ ಹೋಗಲು ಸಾಧ್ಯವಾಗುತ್ತಿಲ,ಸರ್ಕಾರಿ ನೇಮಕಾತಿಗೆ ನಿಗದಿ ಪಡಿಸಿದ ವಯೋಮಿತಿ ಮೀರಿರುವುದರಿಂದ ಕಾಯಾಮಾತಿ ಮಾಡಬೇಕೆಂದು ಒತ್ತಾಯಿಸಿದರು.

ಅತಿಥಿ ಉಪನ್ಯಾಸಕಿ ಡಾ. ಜಲಜಾಕ್ಷಿ ಮಾತನಾಡಿ ಪಂಜಾಬ್, ತೆಲಂಗಾಣ, ತಮಿಳುನಾಡು, ದೆಹಲಿ, ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಿದ್ದು. ರಾಜ್ಯ ಸರ್ಕಾರ ನಮ್ಮನ್ನು ಕಾಯಾಮಾತಿ ಮಾಡಿ ಆದೇಶ ಹೊರಡಿಸಿದರೆ ನಮಗೆ ಕೊಡಬೇಕಾದ ವೇತನವನ್ನು ಯುಜಿಸಿಯೇ ಬರಿಸುತ್ತದೆ. ರಾಜ್ಯ ಸರ್ಕಾರ ಕೇವಲ ಶೇ. ೨೫ ವೇತನವನ್ನು ಮಾತ್ರ ಕೊಡಬೇಕಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಒರೆಯಾಗುವುದಿಲ್ಲ. ಸಿದ್ದರಾಮಯ್ಯನವರು ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭಾಗ್ಯ ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರಾದ ಅಂಭಿಕಾ.ಕೆ.ಆರ್, ಸವಿತ, ವಿನೂತಾ, ಡಾ. ಶಿವಣ್ಣ ತಿಮ್ಮಲಾಪುರ, ಡಾ. ಮಲ್ಲಿಕಾರ್ಜನಯ್ಯ,ಎಂ.ಟಿ, ಶಂಕರ ಹಾರೋಗೆರೆ, ಗಿರೀಶ್,ನಟರಾಜು, ಶಶಿಧರ್, ಮಾದೇವಯ್ಯ, ವೇದಮೂರ್ತಿ, ಕಿರಣ ಕುಮಾರ್, ಜಯರಾಮು, ನಟರಾಜು, ಶಿಲ್ಪ,ಶ್ವೇತ,ನಾಗೇಂದ್ರ ಸೇರಿದಂತೆ ನೂರಾರು ಅತಿಥಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು