ಕಾಯಂಗೆ ಆಗ್ರಹಿಸಿ ಮುಂದುವರಿದ ಅತಿಥಿ ಉಪನ್ಯಾಸಕರ ಪ್ರತಿಭಟನೆ

KannadaprabhaNewsNetwork |  
Published : Dec 15, 2023, 01:30 AM IST
ಖಾಯಂಗೆ ಆಗ್ರಹಿಸಿ ೩ನೇ ದಿನಕ್ಕೆ ಕಾಲಿಟ್ಟ ಅತಿಥಿ ಉಪನ್ಯಾಸಕರ ಪ್ರತಿಭಟನೆಡಿಸಿಗೆ ಮನವಿ | Kannada Prabha

ಸಾರಾಂಶ

ಕಳೆದ ಹಲವಾರು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಮುಖ್ಯ ಬೇಡಿಕೆಯಾದ ಕಾಯಂಗೆ ಆಗ್ರಹಿಸಿ ಡೀಸಿ ಕಚೇರಿ ಮುಂದೆ ನಡೆಸಲಾಗುತ್ತಿರುವ ಪ್ರತಿಭಟನಾ ಧರಣಿಯು ೩ನೇ ದಿನಕ್ಕೆ ಕಾಲಿಟ್ಟಿದ್ದು, ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ಅತಿಥಿ ಉಪನ್ಯಾಸಕರ ಮುಷ್ಕರದಿಂದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಳೆದ ಒಂದು ವಾರದಿಂದ ತರಗತಿಗಳು ನಡೆದಿರುವುದಿಲ್ಲ. ಪರೀಕ್ಷೆ ಪ್ರಾರಂಭವಾಗುವ ಸೂಚನೆ ನೀಡಿದ್ದು, ಇದು ವಿದ್ಯಾರ್ಥಿಗಳಲ್ಲಿ ತೀವ್ರ ಕಳವಳಕ್ಕೆ ಕಾರಣವಾಗಿದೆ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಕಳೆದ ಹಲವಾರು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಮುಖ್ಯ ಬೇಡಿಕೆಯಾದ ಕಾಯಂಗೆ ಆಗ್ರಹಿಸಿ ಡೀಸಿ ಕಚೇರಿ ಮುಂದೆ ನಡೆಸಲಾಗುತ್ತಿರುವ ಪ್ರತಿಭಟನಾ ಧರಣಿಯು ೩ನೇ ದಿನಕ್ಕೆ ಕಾಲಿಟ್ಟಿದ್ದು, ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು.

ಅತಿಥಿ ಉಪನ್ಯಾಸಕರ ಮುಷ್ಕರದಿಂದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಳೆದ ಒಂದು ವಾರದಿಂದ ತರಗತಿಗಳು ನಡೆದಿರುವುದಿಲ್ಲ. ಪರೀಕ್ಷೆ ಪ್ರಾರಂಭವಾಗುವ ಸೂಚನೆ ನೀಡಿದ್ದು, ಇದು ವಿದ್ಯಾರ್ಥಿಗಳಲ್ಲಿ ತೀವ್ರ ಕಳವಳಕ್ಕೆ ಕಾರಣವಾಗಿದೆ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ ಎಂದರು. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಳೆದ ೧೫-೨೦ ವರ್ಷಗಳಿಂದ ಯಾವುದೇ ಸೌಲಭ್ಯಗಳಿಲ್ಲದೆ, ಖಾಯಂಮಾತಿ ಇಲ್ಲದೆ ತಾತ್ಕಾಲಿಕ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಮಗೆ ಬದುಕು ನಡೆಸುವುದು ದುಸ್ತರವಾದ ಸಂಗತಿಯಾಗಿದೆ. ನಾವುಗಳು ಕಾಯಂಮಾತಿಗೆ ಹಲವಾರು ವರ್ಷಗಳ ಹೋರಾಟ ಮಾಡಿದರು ಯಾವುದೇ ಶಾಶ್ವತ ಪರಿಹಾರ ನೀಡದೆ, ಕೇವಲ ತಾತ್ಕಾಲಿಕ ಪರಿಹಾರವನ್ನು ನೀಡುವ ಮೂಲಕ ನಮ್ಮ ಬದುಕುಗಳನ್ನು ಹಿಂದಿನ ಎಲ್ಲಾ ಸರ್ಕಾರಗಳು ಕಸಿದುಕೊಳ್ಳುತ್ತಾ ಬಂದಿವೆ ಎಂದರು.

ಪ್ರಸ್ತುತ ಆಡಳಿತ ಸರ್ಕಾರ ಅತಿಥಿ ಉಪನ್ಯಾಸಕರ ಕಾಯಂಮಾತಿಗೆ ಕಾರ್ಯಯೋಜನೆ ರೂಪಿಸಲಾಗುವುದು ಎಂದು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದರು. ಸರ್ಕಾರ ೬ ತಿಂಗಳುಗಳ ಕಾಲ ಆಡಳಿತ ನಡೆಸಿದರೂ ಇಲ್ಲಿಯವರೆಗೆ ಯಾವುದೇ ತೀರ್ಮಾನಗಳನ್ನ ತೆಗೆದುಕೊಂಡಿರುವುದಿಲ್ಲ. ಪ್ರಸ್ತುತ ಬೆಳಗಾವಿ ಅಧಿವೇಶನದಲ್ಲಿ ಕಾಯಂಮಾತಿ ಕಾರ್ಯಯೋಜನೆಯನ್ನು ರೂಪಿಸಲಾಗುತ್ತದೆಂದು ಘೋಷಿಸಬೇಕೇಂದು ಜಿಲ್ಲಾಧಿಕಾರಿಗಳ ಮೂಲಕ ಕಾಲೇಜು ಶಿಕ್ಷಣ ಇಲಾಖೆ, ಹಾಗೂ ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಆಂದೋಲನವನ್ನು ನೀಡುತ್ತೇವೆ ಎಂದು ಅತಿಥಿ ಉಪನ್ಯಾಸಕರು ಹೇಳಿದರು.

ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರಾದ ಸುನೀತಾ, ಸುರೇಶ್, ಮಹಮ್ಮದ್ ಆರೀಫ್ ಕಾರ್ಲೇ, ಅರಸೀಹಳ್ಳಿ ಮಂಜುನಾಥ್, ದರಣೇಂದ್ರ, ಚೇತನ್, ಕುಮಾರ್, ಮಂಜೇಗೌಡ, ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಕ್ಕೆ ನಿಧಿ ನೀಡಿದ್ದ ಲಕ್ಕುಂಡಿ ಪ್ರಜ್ವಲ್‌ಗೆ ಸರ್ಕಾರದಿಂದ ಸಿಕ್ತು ಬಂಪರ್ ಗಿಫ್ಟ್
ಕಾಂಗ್ರೆಸ್‌ನಿಂದ ಗೆದ್ದಿದ್ದ ಸುಬ್ಬಾರೆಡ್ಡಿ ಶಾಸಕತ್ವಕ್ಕೆ ‘ಸುಪ್ರೀಂ’ ರಕ್ಷಣೆ