ಕುವೆಂಪುನಗರ ಪೊಲೀಸರಿಂದ ಇಬ್ಬರು ಸರಗಳ್ಳರ ಬಂಧನ

KannadaprabhaNewsNetwork |  
Published : Nov 02, 2024, 01:42 AM IST
18 | Kannada Prabha

ಸಾರಾಂಶ

ಸರಗಳುವು ಪ್ರಕರಣ ದಾಖಲಿಸಿಕೊಂಡ ಕುವೆಂಪುನಗರ ಠಾಣೆ ಪೊಲೀಸರು ಸಿಸಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ಆರೋಪಿಗಳ ಜಾಡು ಹಿಡಿದಿದ್ದಾರೆ

ಕನ್ನಡಪ್ರಭ ವಾರ್ತೆ ಮೈಸೂರುಜೈಲಿನಿಂದ ಬಿಡುಗಡೆಯಾದ ಐದೇ ದಿನಕ್ಕೇ ಸರಗಳ್ಳತನ ಮಾಡಿದ ಇಬ್ಬರು ಖದೀಮರು ಕುವೆಂಪುನಗರ ಪೊಲೀಸರ ಅತಿಥಿಯಾಗಿದ್ದಾರೆ.ಬಂಧಿತರಿಂದ 90 ಸಾವಿರ ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಸುಜುಕಿ ಆಕ್ಸಿಸ್ ಸ್ಕೂಟರ್ ವಶಪಡಿಸಿಕೊಂಡಿದ್ದಾರೆ.ಚಾಮರಾಜನಗರದ ಮಂಜ ಅಲಿಯಾಸ್ ಕಳ್ ಮಂಜ (32) ಹಾಗೂ ಮೈಸೂರಿನ ಚಂದನ್ @ ಚಂದು (29) ಬಂಧಿತರು. ಸರಗಳುವು ಪ್ರಕರಣದಲ್ಲಿ ಸಾಕಷ್ಟು ಬಾರಿ ಜೈಲು ವಾಸ ಅನುಭವಿಸಿರುವ ಆರೋಪಿಗಳು ಅ. 25 ರಂದು ಬಿಡುಗಡೆ ಆಗಿದ್ದಾರೆ. ಕೇವಲ 5 ದಿನಗಳಲ್ಲಿ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದು ಹೋಗುತ್ತಿದ್ದ ವೃದ್ಧೆ ವಿಜಯಲಕ್ಷ್ಮಿ ಎಂಬವರ ಸರ ಕಸಿದು ಪರಾರಿಯಾಗಿದ್ದಾರೆ. ಕೃತ್ಯಕ್ಕೆ ಸುಜುಕಿ ಆಕ್ಸಿಸ್ ಸ್ಕೂಟರ್ ಬಳಸಿದ್ದಾರೆ.ಸರಗಳುವು ಪ್ರಕರಣ ದಾಖಲಿಸಿಕೊಂಡ ಕುವೆಂಪುನಗರ ಠಾಣೆ ಪೊಲೀಸರು ಸಿಸಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ಆರೋಪಿಗಳ ಜಾಡು ಹಿಡಿದಿದ್ದಾರೆ. ದಟ್ಟಗಳ್ಳಿಯ ಬಾರ್ ಒಂದರ ಸಮೀಪ ನಿಂತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಕೃತ್ಯಕ್ಕೆ ಬಳಸಿದ ಸ್ಕೂಟರ್ ಸಹ ಕಳುವು ಮಾಡಿರುವುದು ತೆನಿಖೆಯಲ್ಲಿ ತಿಳಿದುಬಂದಿದೆ. ಬಂಧಿತ ಆರೋಪಿಗಳು ಮೈಸೂರು ಜಿಲ್ಲೆಯಾದ್ಯಂತ ಸುಮಾರು 30ಕ್ಕೂ ಹೆಚ್ಚು ಸರಗಳುವು ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಿಳಿದು ಬಂದಿದೆ. ಕಳ್ಳತನ ಮಾಡಿದ ಸ್ಕೂಟರ್ ನಲ್ಲಿ ಸರಗಳವು ಮಾಡಿದ ಖದೀಮರ ಕೇವಲ 24 ಗಂಟೆಯೊಳಗೆ ಪೊಲೀಸರ ಅತಿಥಿಯಾಗಿದ್ದಾರೆ.ಡಿಸಿಪಿ ಎಸ್. ಜಾಹ್ನವಿ ಮಾರ್ಗದರ್ಶನದಲ್ಲಿ ಕೆ.ಆರ್. ವಿಭಾಗದ ಎಸಿಪಿ ರಮೇಶ್ ಕುಮಾರ್ ಉಸ್ತುವಾರಿಯಲ್ಲಿ ಕುವೆಂಪುನಗರ ಇನ್ ಸ್ಪೆಕ್ಟರ್ ಎಲ್. ಅರುಣ್, ಎಸ್ಐಗಳಾದ ಗೋಪಾಲ್ ಮತ್ತು ಮದನ್ ನೇತೃತ್ವದಲ್ಲಿ ಸಿಬ್ಬಂದಿ ಆನಂದ್, ಕೆ.ಟಿ. ಮಂಜುನಾಥ್, ಮಹೇಶ್ವರ, ಎಂ.ಪಿ. ಮಂಜುನಾಥ್, ಎಚ್.ವಿ. ಮಂಜು, ನಾಗೇಶ್, ಯಶವಂತ್, ಹಜರತ್ ಹಾಗೂ ಸುರೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!