ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ತಾಪಂ ಕಚೇರಿ ಎದುರು ಆಗಮಿಸಿದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಕೂಡಲೇ ರಸ್ತೆ ಹಾಗೂ ಬೀದಿ ದೀಪಗಳನ್ನು ಸರಿಪಡಿಸಬೇಕೆಂದು ಆಗ್ರಹಿಸಿದರು.
ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಭರತ್‌ರಾಜ್ ಮಾತನಾಡಿ, ಹಲವು ವರ್ಷಗಳಿಂದ ರಸ್ತೆಗೆ ಗುಂಡಿ ಬಿದ್ದು ಸಾರ್ವಜನಿಕರು ಓಡಾಟಕ್ಕೆ ತೊಂದರೆಯಾಗುತ್ತಿದ್ದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ಕೈಗೊಂಡಿಲ್ಲ ಎಂದು ದೂರಿದರು.ರಸ್ತೆ ದುರಸ್ತಿಗೊಳಿಬೇಕೆಂದು ಆಗ್ರಹಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ರಸ್ತೆಯನ್ನು ಸರಿಪಡಿಸಿ ಬೀದಿ ದೀಪಗಳನ್ನು ಅಳವಡಿಸಬೇಕೆಂದು ಒತ್ತಾಯಿಸಿದರು.
ತಾಲೂಕು ಪ್ರಧಾನ ಕಾರ್ಯದರ್ಶಿ ಲಿಂಗರಾಜುಮೂರ್ತಿ ಮಾತನಾಡಿ, ರಸ್ತೆ ಸಂಪೂರ್ಣ ಗುಂಡಿ ಬಿದ್ದು ಕೆಸರಿನ ಗದ್ದೆಯಂತಾಗಿದೆ. ಜೊತೆಗೆ ರಸ್ತೆಯುದ್ದಕ್ಕೂ ಬೀದಿ ದೀಪಗಳ ಲ್ಲಿದೆ ಗಾರ್ಮೆಂಟ್ಸ್ ಫ್ಯಾಕ್ಟರಿ ಸೇರಿದಂತೆ ಇತರೆ ಕೆಲಸಕ್ಕೆ ಹೋಗುವ ಮಹಿಳೆಯರು ಕತ್ತಲಲ್ಲಿ ಈ ಕೆಸರ ಗುಂಡಿ ರಸ್ತೆಯಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.ಅಧಿಕಾರಿಗಳು ತಾಪಂ ಇಒ ಶ್ರೀನಿವಾಸ್ ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆ ಎಇಇ ಮಹಾದೇವಸ್ವಾಮಿ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆಯಲಾಯಿತು.
ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘಟನೆ ತಾಲೂಕು ಅಧ್ಯಕ್ಷೆ ಸುಶೀಲಾ, ಮುಖಂಡರಾದ ಗುರುಸ್ವಾಮಿ, ಶಿವಮಲ್ಲಯ್ಯ, ಜಯಶೀಲ, ಗ್ರಾಮದ ಯುವ ಮುಖಂಡರಾದ ಪ್ರಕಾಶ್, ಹೇಮಂತ್, ಸತೀಶ್, ರತ್ನಮ್ಮ ಸೇರಿದಂತೆ ಇತರರು ಇದ್ದರು.