ಕನ್ನಡಪ್ರಭ ವಾರ್ತೆ ಕಲಬುರಗಿ
ಶನಿವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಗುಲ್ಬರ್ಗ ವಿ.ವಿ.ಯ ಗಣಿತ ವಿಭಾಗದ ಭಾಸ್ಕರ್ ಹಾಲ್‍ನಲ್ಲಿ ಅಫಜಲಪೂರ, ಪರೀಕ್ಷಾ ಕೇಂದ್ರದಲ್ಲಿ ಚಿತ್ತಾಪುರ, ಗುಲಬರ್ಗಾ ಗ್ರಾಮೀಣ ಹಾಗೂ ಪರೀಕ್ಷಾ ಕೇಂದ್ರದ ಸೆಲುಲಾರ್ ಹಾಲ್‍ನಲ್ಲಿ ಜೇವರ್ಗಿ, ಇಂಡೋರ್ ಸ್ಟೇಡಿಯಂನಲ್ಲಿ ಗುರುಮಠಕಲ್ ಮತ್ತು ಗುಲಬರ್ಗಾ ಉತ್ತರ, ಕನ್ನಡ ವಿಭಾಗದ ಹರಿಹರ ಸಭಾಂಗಣದಲ್ಲಿ ಸೇಡಂ ಹಾಗೂ ಸಸ್ಯಶಾಸ್ತ್ರ ವಿಭಾಗದ ಬೋಸ್ ಸಭಾಂಗಣದಲ್ಲಿ ಗುಲಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿದೆ.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 14 ಟೇಬಲ್‍ಗಳನ್ನು ಮತ ಎಣಿಕೆಗೆ ಹಾಕಲಾಗಿದೆ. ಪ್ರತಿ ಟೇಬಲ್‍ಗೆ ಓರ್ವ ಎಣಿಕೆ ಮೇಲ್ವಿಚಾರಕರು, ಓರ್ವ ಎಣಿಕೆ ಸಹಾಯಕರು ಹಾಗೂ ಓರ್ವ ಮೈಕ್ರೋ ವೀಕ್ಷಕರನ್ನು ನೇಮಿಸಲಾಗಿದೆ ಎಂದರು.ಪ್ರತಿ ವಿದಾನಸಭಾ ಕ್ಷೇತ್ರವಾರು ಮತ ಎಣಿಕೆ 14 ಟೇಬಲ್‍ಗಳಿಗೆ 14 ಕೌಂಟಿಂಗ್ ಏಜೆಂಟ್‍ಗಳನ್ನು ಆಯಾ ಅಭ್ಯರ್ಥಿಗಳು ನೇಮಿಸಲು ಅವಕಾಶ ನೀಡಿದ್ದು, ಸದರಿ ಕೌಂಟಿಂಗ್ ಏಜೆಂಟ್‍ಗಳು ಪೆನ್, ಸಿಂಪಲ್ ಕ್ಯಾಲ್ಕುಲೇಟರ್ ಹಾಗೂ ಪೇಪರ್ ಮಾತ್ರ ತರಲು ಅವಕಾಶ ನೀಡಲಾಗಿದೆ.
ಮೊಬೈಲ್ ಫೋನ್ ಬ್ಯಾನ್: ಮತ ಎಣಿಕೆ ಕೇಂದ್ರಕ್ಕೆ ಹಾನಿಕಾರಕ ಸೇವನೆಗಳಾದ ವಿವಿಧ ರೀತಿಯ ತಂಬಾಕು, ಗುಟಕಾ, ಬೀಡಿ, ಸಿಗರೇಟ್, ಬೆಂಕಿ ಪೊಟ್ಟಣ, ಲೈಟರ್ ಹಾಗೂ ಮದ್ಯಪಾನಗಳು, ವಿದ್ಯುನ್ಮಾನ ಯಂತ್ರಗಳಾದ ಸ್ಮಾರ್ಟ್ ವಾಚ್, ಮೊಬೈಲ್ ಫೋನ್ ಹಾಗೂ ಲ್ಯಾಪ್‌ಟಾಪ್ ಹಾಗೂ ಮಾರಕಾಸ್ತ್ರಗಳಾದ ಗನ್, ಖಡ್ಗ, ಚಾಕು, ಚೂರಿ ಇತರೆ ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಮೀನಾಕ್ಷಿ ಆರ್ಯ ಇದ್ದರು.