ಗುಂಡ್ಲುಪೇಟೆಯ ನೂರತ್ತು ಕೆರೆ, ಕಟ್ಟೆಗಳ ಯೋಜನೆ ಅನುದಾನಕ್ಕೆ ಸಿಎಂ ಒಪ್ಪಿಗೆ: ಶಾಸಕ ಗಣೇಶ್‌ ಪ್ರಸಾದ್‌

KannadaprabhaNewsNetwork |  
Published : Aug 15, 2024, 01:48 AM IST
14ಜಿಪಿಟಿ2ಗುಂಡ್ಲುಪೇಟೆ ತಾಲೂಕಿನ ಕಮರಹಳ್ಳಿ ಕೆರೆಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್ ಬಾಗಿನ ಅರ್ಪಿಸಿದರು. | Kannada Prabha

ಸಾರಾಂಶ

ತಾಲೂಕಿನ ನೂರತ್ತು ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದು, ಮುಂದಿನ ಬಜೆಟ್‌ನಲ್ಲಿ ಘೋಷಿಸುವ ಭರವಸೆ ಸಿಕ್ಕಿದೆ ಎಂದು ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಕಮರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರೊಂದಿಗೆ ಗಂಗೆಗೆ ಪೂಜೆ ಸಲ್ಲಿಸಿ, ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ತಾಲೂಕಿನ ನೂರತ್ತು ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದು, ಮುಂದಿನ ಬಜೆಟ್‌ನಲ್ಲಿ ಘೋಷಿಸುವ ಭರವಸೆ ಸಿಕ್ಕಿದೆ ಎಂದು ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಹೇಳಿದರು.

ತಾಲೂಕಿನ ಬೇಗೂರು ಬಳಿಯ ಕಮರಹಳ್ಳಿ ಕೆರೆ ಮಳೆಗೆ ಕೋಡಿ ಬಿದ್ದ ಹಿನ್ನೆಲೆ ಶಾಸಕರು ಕಮರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರೊಂದಿಗೆ ಗಂಗೆಗೆ ಪೂಜೆ ಸಲ್ಲಿಸಿ, ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿ, ಕಳೆದ ಸರ್ಕಾರದ ಅವಧಿಯಲ್ಲಿ ನೂರತ್ತು ಕೆರೆ, ಕಟ್ಟೆಗಳಿಗೆ ಅನುಮೋದನೆ ನೀಡಿತ್ತು ಎಂದರು. ಅನುದಾನ ಇಲ್ಲದ ಕಾರಣ ನಾನು ಶಾಸಕನಾದ ಬಳಿಕ ಸಿಎಂ, ಡಿಸಿಎಂ ಹಾಗೂ ಸಣ್ಣ ನೀರಾವರಿ ಇಲಾಖೆ ಸಚಿವರಿಗೂ ನೂರತ್ತು ಕೆರೆ, ಕಟ್ಟೆಗಳಿಗೆ ನೀರು ತುಂಬಿಸಲು ಅನುದಾನ ಅಗತ್ಯವಿದೆ. ಅನುದಾನ ಕೊಡಿ ಎಂದು ಮನವಿ ಮಾಡಿದ್ದೇನೆ ಮುಂದಿನ ಬಜೆಟ್‌ನಲ್ಲಿ ಅನುದಾನ ಬಿಡುಗಡೆಯ ಭರವಸೆ ಸಿಕ್ಕಿದೆ ಎಂದರು. ಬೇಗೂರು ಭಾಗದ 12 ಕೆರೆಗಳಿಗೆ ನೀರು ತುಂಬಿಸಬೇಕು ಎಂದು ದಿ.ಎಚ್.ಎಸ್. ಮಹದೇವಪ್ರಸಾದ್‌ ಇಚ್ಛಾಶಕ್ತಿಯ ಫಲವಾಗಿ ಕೆರೆಗಳಿಗೆ ನೀರು ಬಂತು ಎಂದರು.

ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್. ನಂಜುಂಡಪ್ರಸಾದ್‌, ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಿ.ಎಂ.ಮುನಿರಾಜು, ಗ್ರಾಪಂ ಅಧ್ಯಕ್ಷೆ ಮಂಗಳಮ್ಮ, ಕಮರಹಳ್ಳಿ ಗ್ರಾಮದ ಗೌಡಿಕೆ ಮಹದೇವಪ್ಪ, ಎಪಿಎಂಸಿ ಸದಸ್ಯ ಆರ್.ಎಸ್.ನಾಗರಾಜು, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಮಾಜಿ ಸದಸ್ಯ ನೀಲಕಂಠಪ್ಪ, ಮುಖಂಡರಾದ ಹಾಲಹಳ್ಳಿ ಶಿವಪ್ಪ, ಗೌಡಿಕೆ ರಾಜಪ್ಪ, ಬೇಗೂರು ಗ್ರಾಪಂ ಉಪಾಧ್ಯಕ್ಷ ಬಿ.ಆರ್.ಮಹದೇವಸ್ವಾಮಿ, ಗ್ರಾಪಂ ಸದಸ್ಯರು, ಮುಖಂಡರು ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಕನಿಷ್ಠ ಆದಾಯ ಮಿತಿ 3 ಲಕ್ಷ ರು.ಗೆ ಏರಿಕೆ: ಮುನಿಯಪ್ಪ
ಏ.1ರಿಂದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ