ಹುಬ್ಬಳ್ಳಿ: ಇಲ್ಲಿನ ಶ್ರೀ ಸಿದ್ಧಾರೂಢ ಮಠದಲ್ಲಿ ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆದವು.
ಗುರುವಂದನಾ ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಕಾಡನಕೊಪ್ಪ ಪೂರ್ಣಾನಂದ ಆಶ್ರಮದ ನ್ಯಾಯವೇದಾಂತಾಚಾರ್ಯ ದಯಾನಂದ ಸರಸ್ವತಿ ಮಹಾಸ್ವಾಮೀಜಿ ಮಾತನಾಡಿ, ಪ್ರತಿಯೊಬ್ಬ ಮನುಷ್ಯನಿಗೂ ಗುರುವಿನ ಉಪದೇಶವಾಗಿ ಅವರಿಂದ ಜ್ಞಾನ ಸಂಪಾದನೆ ಪಡೆದು ತನ್ನ ಜೀವನವನ್ನು ಪರಿಪೂರ್ಣವಾಗಿ ನಡೆಸಬೇಕಾದರೆ ಗುರುಪದೇಶ ಮುಖ್ಯ ಘಟ್ಟವಾಗಿದೆ ಎಂದರು.
ನೇತೃತ್ವ ವಹಿಸಿದ್ದ ಚಿಕ್ಕನಂದಿಯ ಸಿದ್ಧಾರೂಢ ದರ್ಶನಪೀಠದ ಪೀಠಾಧ್ಯಕ್ಷ ಸಹಜಾನಂದ ಶ್ರೀಗಳು ಮಾತನಾಡಿ, ಗುರುವಿನ ಉಪದೇಶ ಆಗದ ಹೊರತು ಅವನು ಪರಿಪೂರ್ಣ ಮನುಷ್ಯನಾಗುವುದಿಲ್ಲ ಎಂದರು.ಶ್ರೀಮಠದ ಟ್ರಸ್ಟ್‌ನ ಚೇರಮನ್ ಚೆನ್ನವೀರ ಮುಂಗುರವಾಡಿ ಅಧ್ಯಕ್ಷತೆ ವಹಿಸಿದ್ದರು. ಶ್ರೀಗಳನ್ನು ಮಠದ ವತಿಯಿಂದ ಸನ್ಮಾನಿಸಲಾಯಿತು. ಧರ್ಮದರ್ಶಿ ಶಾಮಾನಂದ ಪೂಜೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಧರ್ಮದರ್ಶಿ ಎಸ್.ಐ. ಕೋಳಕೂರ ಕಾರ್ಯಕ್ರಮ ನಿರೂಪಿಸಿದರು.