ಲಕ್ಕಸಂದ್ರದ ಶ್ರೀಕ್ಷೇತ್ರದಲ್ಲಿ ಗುರುರಾಯರ ಆರಾಧನಾ ಸಂಭ್ರಮ

KannadaprabhaNewsNetwork |  
Published : Aug 13, 2025, 12:30 AM IST
ದೊಡ್ಡಬಳ್ಳಾಪುರ ತಾಲೂಕಿನ ಲಕ್ಕಸಂದ್ರ ಗ್ರಾಮದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆ ಅಂಗವಾಗಿ ನಡೆದ ರಥೋತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಲಕ್ಕಸಂದ್ರ ಶ್ರೀಕ್ಷೇತ್ರದಲ್ಲಿ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವ ಭಕ್ತಿಭಾವಪೂರ್ಣವಾಗಿ ನೆರವೇರಿತು.

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಲಕ್ಕಸಂದ್ರ ಶ್ರೀಕ್ಷೇತ್ರದಲ್ಲಿ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವ ಭಕ್ತಿಭಾವಪೂರ್ಣವಾಗಿ ನೆರವೇರಿತು.

ನಗರದ ಲಕ್ಕಸಂದ್ರದಲ್ಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಈ ಪವಿತ್ರ ಆರಾಧನೆಗೆ ಅನೇಕ ಭಕ್ತಾದಿಗಳು ಆಗಮಿಸಿದರು. ದಿನಪೂರ್ತಿ ನಡೆದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಕ್ತರು ಭಕ್ತಿಪೂರ್ಣವಾಗಿ ಪಾಲ್ಗೊಂಡರು.

ಕಾರ್ಯಕ್ರಮದ ಅಂಗವಾಗಿ ಗಣಹೋಮ, ಪಂಚಾಮೃತ ಅಭಿಷೇಕ, ಗೋ ಪೂಜೆ, ಹೋಮ, ದೀಪಾರಾಧನೆ, ನವಗ್ರಹ ಪೂಜೆ, ಚಕ್ರನ ಹೋಮ, ಮೋಕ್ಷಾಹುತಿ ಮತ್ತು ರಥ ಸಂಚಲನ ಜರುಗಿತು. ಕೃತಜ್ಞ ವಿದ್ಯಾ ಮೂರ್ತಿಗಳ ಅಧಿಷ್ಠಾನ ದೇವತೆಗಳ ಪೂಜಾ ಕಾರ್ಯಕ್ರಮ, ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮರಥೋತ್ಸವ, ನಿತ್ಯಾನ್ನ ಅಭಿಷೇಕ, ಪಂಚಾಮೃತ ಅಭಿಷೇಕ, ಗುರುಸ್ಮಾರಕ ಪಾರಾಯಣ ಹಾಗೂ ಅಲಂಕಾರಗಳು ನಡೆದವು. ಶ್ರೀ ಸೀತಾರಾಮ ಲಕ್ಷ್ಮಣ ಹನುಮಾನ್ ಸಮೇತ ಶ್ರೀ ಪ್ರಹ್ಲಾದ ರಾಯರ ಮಹಾ ರಥೋತ್ಸವ, ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಪಂಕ್ತಿಪ್ರಸಾದ ಹಾಗೂ ಅನ್ನದಾನ ಸೇವೆಯೊಂದಿಗೆ ಮಹಾಮಂಗಳಾರತಿ ನೆರವೇರಿತು.

ಆರಾಧನಾ ಮಹೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮೈಸೂರಿನ ಆಕಾಶ್ ದೀಕ್ಷಿತ್ ಮತ್ತು ಸಂಗಡಿಗರಿಂದ ದಾಸವಾಣಿ ಕಾರ್ಯಕ್ರಮ ಜರುಗಿತು.

ದೊಡ್ಡಬಳ್ಳಾಪುರದಲ್ಲಿ ಸಂಭ್ರಮ:

ದೊಡ್ಡಬಳ್ಳಾಪುರ ನಗರದ ಬ್ರಾಹ್ಮಣರ ಬೀದಿಯಲ್ಲಿರುವ ಶ್ರೀಗುರುರಾಘವೇಂದ್ರಸ್ವಾಮಿಗಳ ಮಠದಲ್ಲಿ ಆರಾಧನಾ ಮಹೋತ್ಸವ ಸಂಭ್ರಮದಿಂದ ನಡೆಯಿತು. ರಾಯರ ಬೃಂದಾವನಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾಜಬೀದಿ ಉತ್ಸವ ನಡೆದವು. ಸಹಸ್ರಾರು ಭಕ್ತಾದಿಗಳು ಆಗಮಿಸಿದ ರಾಯರ ಬೃಂದಾವನ ದರ್ಶನ ಪಡೆದರು.

ಬಾಶೆಟ್ಟಿಹಳ್ಳಿಯಲ್ಲಿ ಆರಾಧನೆ ವೈಭವ:

ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದಲ್ಲಿರುವ ಶ್ರೀ ಗುರುರಾಘವೇಂದ್ರಸ್ವಾಮಿಗಳ ಮಠದಲ್ಲಿ ಮಧ್ಯಾರಾಧನಾ ಮಹೋತ್ಸವ ಸೋಮವಾರ ವೈಭವದಿಂದ ನಡೆಯತು. ರಾಯರ ಬೃಂದಾವನಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾಜಬೀದಿ ಉತ್ಸವ ನಡೆದವು. ಸಹಸ್ರಾರು ಭಕ್ತಾದಿಗಳು ಆಗಮಿಸಿದ ರಾಯರ ಬೃಂದಾವನ ದರ್ಶನ ಪಡೆದರು.

11ಕೆಡಿಬಿಪಿ6-

ದೊಡ್ಡಬಳ್ಳಾಪುರ ತಾಲೂಕಿನ ಲಕ್ಕಸಂದ್ರ ಗ್ರಾಮದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆ ಅಂಗವಾಗಿ ನಡೆದ ರಥೋತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು.

(ಈ ಫೋಟೋವನ್ನು ಪ್ಯಾನಲ್‌ ಸಿಂಗಲ್‌ ಕಾಲಂನಲ್ಲಿ ಬಳಸಿ)11ಕೆಡಿಬಿಪಿ7-

ದೊಡ್ಡಬಳ್ಳಾಪುರ ತಾಲೂಕಿನ ಲಕ್ಕಸಂದ್ರ ಗ್ರಾಮದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆ ಅಂಗವಾಗಿ ರಾಯರ ಬೃಂದಾವನಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.

PREV

Recommended Stories

ಧರ್ಮಸ್ಥಳ ಕೇಸ್‌ : ಅರ್ಧ ಕೋಟಿ ವ್ಯಯ?
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ