ಮುಂಡರಗಿಯಲ್ಲಿ ಇಂದು ಗುರುವಂದನೆ, ಹಿರಿಯ ವಿದ್ಯಾರ್ಥಿಗಳ ಸಮಾಗಮ

KannadaprabhaNewsNetwork |  
Published : Apr 20, 2025, 01:46 AM IST
ಸುದ್ದಿಗೋಷ್ಠಿಯಲ್ಲಿ ಪ್ರಾ.ಡಿ.ಸಿ.ಮಠ ಹಾಗೂ ನಾಗೇಶ ಹುಬ್ಬಳ್ಳಿ ಮಾತನಾಡಿದರು. | Kannada Prabha

ಸಾರಾಂಶ

ಜ. ಅನ್ನದಾನೀಶ್ವರ ವಿದ್ಯಾ ಸಮಿತಿಯ ಶತಮಾನೋತ್ಸವ ಸಂಭ್ರಮದಡಿಯಲ್ಲಿ ಕ.ರಾ. ಬೆಲ್ಲದ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ಅರ್ಥಶಾಸ್ತ್ರ ಸ್ನಾತಕೋತ್ತರ ಅಧ್ಯಯನ ವಿಭಾಗ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಗುರುವಂದನೆ, ಹಿರಿಯ ವಿದ್ಯಾರ್ಥಿಗಳ ಸಮಾಗಮ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಏ.20ರಂದು ಬೆಳಗ್ಗೆ 10ಕ್ಕೆ ಕಾಲೇಜು ಆವರಣದಲ್ಲಿ ಜರುಗಲಿದೆ ಎಂದು ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ನಾಗೇಶ ಹುಬ್ಬಳ್ಳಿ, ಕಾಲೇಜಿನ ಪ್ರಾ.ಡಾ. ಡಿ.ಸಿ. ಮಠ ಜಂಟಿಯಾಗಿ ತಿಳಿಸಿದ್ದಾರೆ.

ಮುಂಡರಗಿ: ಸ್ಥಳೀಯ ಜ. ಅನ್ನದಾನೀಶ್ವರ ವಿದ್ಯಾ ಸಮಿತಿಯ ಶತಮಾನೋತ್ಸವ ಸಂಭ್ರಮದಡಿಯಲ್ಲಿ ಕ.ರಾ. ಬೆಲ್ಲದ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ಅರ್ಥಶಾಸ್ತ್ರ ಸ್ನಾತಕೋತ್ತರ ಅಧ್ಯಯನ ವಿಭಾಗ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಗುರುವಂದನೆ, ಹಿರಿಯ ವಿದ್ಯಾರ್ಥಿಗಳ ಸಮಾಗಮ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಏ.20ರಂದು ಬೆಳಗ್ಗೆ 10ಕ್ಕೆ ಕಾಲೇಜು ಆವರಣದಲ್ಲಿ ಜರುಗಲಿದೆ ಎಂದು ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ನಾಗೇಶ ಹುಬ್ಬಳ್ಳಿ, ಕಾಲೇಜಿನ ಪ್ರಾ.ಡಾ. ಡಿ.ಸಿ. ಮಠ ಜಂಟಿಯಾಗಿ ತಿಳಿಸಿದ್ದಾರೆ. ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 40 ವರ್ಷದಿಂದ ನಡೆದು ಬಂದಿರುವ ಕಾಲೇಜಿನಲ್ಲಿ ಅನೇಕ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡಿ ಅನೇಕ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರೆಲ್ಲರನ್ನು ಒಂದುಗೂಡಿಸಿ, ಅವರಲ್ಲಿಯೇ ವಿಶೇಷ ಸಾಧನೆ ಮಾಡಿದ 75ಕ್ಕೂ ಹೆಚ್ಚು ಹಿರಿಯವಿದ್ಯಾರ್ಥಿಗಳನ್ನು ಸತ್ಕರಿಸಲಾಗುವುದು. ಕಾಲೇಜಿನ ನಿವೃತ್ತ ಪ್ರಾಧ್ಯಾಪಕರನ್ನು, ಎಲ್ಲ ಸಿಬ್ಬಂದಿಗಳನ್ನು ಸನ್ಮಾನಿಸಲಾಗುವುದು ಎಂದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಜ.ನಾಡೋಜ ಡಾ. ಅನ್ನದಾನೀಶ್ವರ ಸ್ವಾಮೀಜಿ ವಹಿಸುವರು. ನೇತೃ-ತ್ವವನ್ನು ಉತ್ತರಾಧಿಕಾರಿ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ವಹಿಸುವರು. ಕ.ರಾ. ಬೆಲ್ಲದ ಕಾಲೇಜು ಮೇಲ್ವಿಚಾರಣಾ ಸಮಿತಿ ಕಾರ್ಯಾಧ್ಯಕ್ಷ ಪ್ರೊ. ಆರ್.ಎಲ್. ಪೊಲೀಸ್ ಪಾಟೀಲ ಅಧ್ಯಕ್ಷತೆ ವಹಿಸುವರು. ಜ.ಅ.ವಿದ್ಯಾ ಸಮಿತಿ ಆಡಳಿತಾಧಿಕಾರಿ ಡಾ. ಬಿ.ಜಿ. ಜವಳಿ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಧಾರವಾಡ ಹಿರಿಯ ಸಿವಿಲ್ ನ್ಯಾ. ಪಿ.ಎಫ್.ದೊಡ್ಡಮನಿ, ಹುಬ್ಬಳ್ಳಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಯಮನೂರಪ್ಪ.ಕೆ ಹಾಗೂ ಹರಪನಹಳ್ಳಿ ಡಿ.ವೈ.ಎಸ್.ಪಿ. ವೆಂಕಟಪ್ಪ ನಾಯಕ ಭಾಗವಹಿಸುವರು. ಸಮಾರಂಭದಲ್ಲಿ ಒಟ್ಟು 700ಕ್ಕೂ ಹೆಚ್ಚು ಹಿರಿಯ ವಿದ್ಯಾರ್ಥಿಗಳು ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮದ ನಂತರ ಹಿರಿಯ ವಿದ್ಯಾರ್ಥಿಗಳಿಂದ ಮತ್ತು ಈಗಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.ಈ ವೇಳೆ ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಮಂಜುನಾಥ ಇಟಗಿ, ರಾಘವೇಂದ್ರ ಕುರಿಯವರ, ವೀರೇಶ ಸಜ್ಜನರ, ಮಂಜುನಾಥ ಮುಧೋಳ, ಸಿಬ್ಬಂದಿಗಳಾದ ಡಾ. ಸಂತೋಷ ಹಿರೇಮಠ, ಡಾ. ಸಚಿನ ಉಪ್ಪಾರ, ಡಾ. ಮನೋಜ ಕೋಪರ್ಡೆ, ಡಾ. ಕುಮಾರ.ಜೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ