ನ.15ರಂದು ಗುರುವಂದನೆ, ಶ್ರೀನಿವಾಸ ಕಲ್ಯಾಣ ಮಹೋತ್ಸವ: ಕೃಷ್ಣ ಎ.ಅಣ್ಣಯ್ಯ

KannadaprabhaNewsNetwork |  
Published : Nov 12, 2025, 01:45 AM IST
11ಕೆಎಂಎನ್ ಡಿ13 | Kannada Prabha

ಸಾರಾಂಶ

ಶ್ರೀಬಾಲಶನೇಶ್ವರಸ್ವಾಮಿ ಭಕ್ತ ಮಂಡಳಿಯ ಧರ್ಮದರ್ಶಿ ಶ್ರೀರವಿತೇಜ ಅವರ ನೇತೃತ್ವದಲ್ಲಿ ನಡೆಯುವ ಗುರುವಂದನಾ ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿಶ್ವ ಒಕ್ಕಲಿಗ ಮಹಾಸಂಸ್ಥಾನಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಗುರುವಂದನಾ ಕಾರ್ಯಕ್ರಮದ ಮೂಲಕ ಅಭಿನಂದಿಸಲಾಗುವುದು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಪಟ್ಟಣದ ಶ್ರೀಬಾಲಶನೇಶ್ವರಸ್ವಾಮಿ ಭಕ್ತಮಂಡಳಿಯಿಂದ ನ.15ರಂದು ಗುರು ವಂದನೆ, 4ನೇ ವರ್ಷದ ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ಹಾಗೂ ಶ್ರೀನಿವಾಸ್ ಕಲ್ಯಾಣ ಮಹೋತ್ಸವವನ್ನು ಏರ್ಪಡಿಸಲಾಗಿದೆ ಎಂದು ಪುರಸಭೆ ಸದಸ್ಯ, ಟಿಎಪಿಸಿಎಂಎಸ್ ನಿರ್ದೇಶಕ ಹಾರೋಹಳ್ಳಿ ಕೃಷ್ಣ ಎ.ಅಣ್ಣಯ್ಯ ತಿಳಿಸಿದರು.ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಬಾಲಶನೇಶ್ವರಸ್ವಾಮಿ ಭಕ್ತ ಮಂಡಳಿಯ ಧರ್ಮದರ್ಶಿ ಶ್ರೀರವಿತೇಜ ಅವರ ನೇತೃತ್ವದಲ್ಲಿ ನಡೆಯುವ ಗುರುವಂದನಾ ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿಶ್ವ ಒಕ್ಕಲಿಗ ಮಹಾಸಂಸ್ಥಾನಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಗುರುವಂದನಾ ಕಾರ್ಯಕ್ರಮದ ಮೂಲಕ ಅಭಿನಂದಿಸಲಾಗುವುದು ಎಂದರು.

ಕಾರ್ಯಕ್ರಮವನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಉದ್ಘಾಟಿಸುವರು. ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಗುರುವಂದನೆ ಕುರಿತು ಚಿತ್ರನಿರ್ದೇಶಕ ಎಸ್.ನಾರಾಯಣ್ ಮಾತನಾಡಲಿದ್ದಾರೆ. ಅಪರ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರಸ್ವಾಮಿ ಅವರು ಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಲಕ್ಷ ದೀಪೋತ್ಸವಕ್ಕೆ ಉಪವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್ ಚಾಲನೆ ನೀಡಲಿದ್ದಾರೆ. ತಾಪಂ ಇಒ ಎಂ.ಎಸ್.ವೀಣಾ ಹಾಗೂ ಭಾಗ್ಯವತಿ ಎಸ್.ನಾರಾಯಣ್ ಅವರು ಮಹಿಳೆಯರಿಗೆ ಬಾಗಿನ ಹಾಗೂ ಮಡಿಲಕ್ಕಿ ವಿತರಣೆ ಮಾಡಲಿದ್ದಾರೆ ಎಂದರು.

ಮೈಸೂರು ಮಹಾನಗರ ಪಾಲಿಕೆ ಸದಸ್ಯ ಭಾಗ್ಯಶ್ರೀ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು, ತಹಸೀಲ್ದಾರ್ ಬಸವರೆಡ್ಡಪ್ಪರೋಣದ, ಪುರಸಭೆ ಮುಖ್ಯಾಧಿಕಾರಿ ಸತೀಶ್‌ಕುಮಾರ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಯಶವಂತ್‌ಮಲ್ಲಿಗೆರೆ, ಎಂ.ಎಸ್.ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಧರ್ಮದರ್ಶಿ ಶ್ರೀರವಿತೇಜ ಅವರು ಕಳೆದ ನಾಲ್ಕು ವರ್ಷಗಳಿಂದ ವಿಶೇಷವಾಗಿ ಲಕ್ಷ ದೀಪೋತ್ಸವವನ್ನು ನಡೆಸಿಕೊಂಡು ಬರುತ್ತಿದ್ದು, ನೂರಾರು ಮಹಿಳೆಯರು ಭಾಗವಹಿಸಲಿದ್ದಾರೆ ಇದೇ ವೇಳೆ ಮಹಿಳೆಯರಿಗೆ ಮಡಿಲಕ್ಕಿ ವಿತರಣೆ ಜರುಗಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್, ಕನಕಯುವ ಬಳಗದ ಉಪಾಧ್ಯಕ್ಷ ಕೆ.ಬೆಟ್ಟಹಳ್ಳಿಸ್ವಾಮಿ, ಶಂಭೂಲಿಂಗಪ್ಪ, ಗೋವಿಂದಪ್ಪ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ