ಕೃಷಿ ಸಂಸ್ಕೃತಿಯೊಳಗೆ ಹುದುಗಿರುವ ತುಳುವ ಸಂಸ್ಕೃತಿಯ ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೆಸರುಗದ್ದೆ ಕ್ರೀಡಾಕೂಟದಂತಹ ಕಾರ್ಯಕ್ರಮಗಳು ಪೂರಕವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಬಂಟ್ವಾಳ : ಕೃಷಿ ಸಂಸ್ಕೃತಿಯೊಳಗೆ ಹುದುಗಿರುವ ತುಳುವ ಸಂಸ್ಕೃತಿಯ ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೆಸರುಗದ್ದೆ ಕ್ರೀಡಾಕೂಟದಂತಹ ಕಾರ್ಯಕ್ರಮಗಳು ಪೂರಕವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಆ.8 ರಂದು ಜರುಗಲಿರುವ ಒಡಿಯೂರು ಸ್ವಾಮೀಜಿ ಜನ್ಮದಿನೋತ್ಸವ - ಗ್ರಾಮೋತ್ಸವ - ಗುರುವಂದನಾ ಕಾರ್ಯಕ್ರಮದ ಅಂಗವಾಗಿ ಭಾನುವಾರ ಬನಾರಿಯಲ್ಲಿ ನಡೆದ ಕೆಸರ್‌ದ ಕಂಡೊಡೊಂಜಿ ದಿನ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.ಉದ್ಘಾಟನಾ ಸಮಾರಂಭದಲ್ಲಿ ಒಡಿಯೂರು ಶ್ರೀಗಳ ಜನ್ಮದಿನೋತ್ಸವ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ ತಾಳಿಪ್ಪಾಡಿಗುತ್ತು, ಪ್ರಧಾನ ಕೋಶಾಧಿಕಾರಿ ಅಶೋಕ್ ಕುಮಾರ್ ಬಿಜೈ, ಉಪಾಧ್ಯಕ್ಷ ಕೆ.ಎನ್.ವೆಂಕಟ್ರಮಣ ಹೊಳ್ಳ, ಸಂಘಟನ ಕಾರ್ಯದರ್ಶಿ ಶಶಿಧರ ಶೆಟ್ಟಿ ಜಮ್ಮದಮನೆ, ಉಪಾಧ್ಯಕ್ಷ ಗಣಪತಿ ಭಟ್ ಸೇರಾಜೆ, ಉಪಾಧ್ಯಕ್ಷೆ ಹರಿಣಾಕ್ಷಿ ಜೆ.ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರಾದ ರವೀಂದ್ರ, ದೀಪಕ್ ಎಸ್.ಕೆ., ರಮೇಶ್ ಶೆಟ್ಟಿ ಅನೆಯಾಲಗುತ್ತು, ಶ್ರೀ ಗುರುದೇವ ಪ್ರೌಢಶಾಲೆ ಮುಖ್ಯ ಶಿಕ್ಷಕಿ ರೇಣುಕಾ ಎಸ್. ರೈ, ಒಡಿಯೂರು ಶ್ರೀ ವಿ ಸೌ ಸ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲು ಮೊದಲಾದವರು ಉಪಸ್ಥಿತರಿದ್ದರು.
ಯಶವಂತ ವಿಟ್ಲ ಸ್ವಾಗತಿಸಿದರು. ಮಾತೇಶ ಭಂಡಾರಿ ವಂದಿಸಿದರು. ದೇವಿಪ್ರಸಾದ್ ಶೆಟ್ಟಿ ಬೆಜ್ಜ ಕಾರ್ಯಕ್ರಮ ನಿರೂಪಿಸಿದರು.ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸ್ಪರ್ಧೆಗಳು ನಡೆದವು. ಇದೇ ಸಂದರ್ಭದಲ್ಲಿ ಗ್ರಾಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.