ಕನ್ನಡಪ್ರಭ ವಾರ್ತೆ ಮಂಡ್ಯ
ಸೆ.೧೪ರಂದು ಸಂಜೆ ೪ ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೆರವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಪಿ.ರವಿಕುಮಾರ್ ವಹಿಸುವರು. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಪ್ರಾಸ್ತಾವಿಕ ಮಾತನಾಡುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಲವಂತರಾವ್ ಪಾಟೀಲ್ ಮುಖ್ಯ ಅತಿಥಿಗಳಾಗಿ, ಕೂಚಿಪುಡಿ-ಕಥಕ್ಕಳಿ ಪ್ರತಿಪಾದಕ, ಕಲಾ ವಿಮರ್ಶಕ ಮುಂಬೈನ ವಿಜಯ್‌ಶಂಕರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಅಂದು ಶ್ರೀನಟರಾಜ ಕಲಾನಿಕೇತನ್ ನಿರ್ದೇಶಕ ಪ್ರಕಾಶ್ ಐಯರ್ ಅವರಿಗೆ ಗುರುದೇವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸೆ.೧೫ರಂದು ಸಂಜೆ ೪ ಗಂಟೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಖಜಾಂಚಿ ಬಿ.ಎಂ.ಅಪ್ಪಾಜಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಪಾಂಡವಪುರ ತಹಸೀಲ್ದಾರ್ ಎಸ್.ಸಂತೋಷ್ ಶುಭನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ನಗರಸಭೆ ಮಾಜಿ ಉಪಾಧ್ಯಕ್ಷೆ ಇಂದಿರಾ ಸತೀಶ್‌ಬಾಬು, ಜನಪದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಗೊರವಾಲೆ ಚಂದ್ರಶೇಖರ್ ಭಾಗವಹಿಸುವರು ಎಂದರು.ಕಾರ್ಯಕ್ರಮದಲ್ಲಿ ಬೆಳಕು ವಿನ್ಯಾಸಕ, ನಿರೂಪಕ ಎಂ.ಎಲ್.ರಾಜನ್, ತಬಲ ಕಲಾವಿದ ಪಂಡಿತ್ ಭೀಮಾಶಂಕರ್ ಬಿದನೂರ್ ಭಾಗವಹಿಸುವರು ಎಂದರು.
ಮೂರು ದಿನಗಳ ಕಾಲ ನಿತ್ಯ ಸಂಜೆ ೪ ರಿಂದ ಸಂಜೆ ೭..೪೦ರವರೆಗೆ ನೃತ್ಯ ಕಲಾವಿದರಿಂದ ಸಮೂಹ ಭರತನಾಟ್ಯ, ವಾಲ್ಮೀಕಿ ನೃತ್ಯನಾಟಕ, ಯುಗಳ ಭರತನಾಟ್ಯ, ಏಕವ್ಯಕ್ತಿ ಭರತನಾಟ್ಯ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ನೃತ್ಯಾಸಕ್ತಿಯಿಂದ ಎಷ್ಟೋ ಹೆಣ್ಣು ಮಕ್ಕಳು ಕಲಿಯಲು ಬರುತ್ತಾರೆ. ಎಸ್ಸೆಸ್ಸೆಲ್ಸಿಗೆ ಬರುತ್ತಿದ್ದಂತೆ ಶಿಕ್ಷಣದ ಮೇಲೆ ಪರಿಣಾಮ ಬಿರಬಹುದೆಂಬ ಕಾರಣಕ್ಕೆ ನೃತ್ಯದಿಂದ ದೂರ ಸರಿಯುತ್ತಿದ್ದಾರೆ. ನೃತ್ಯ ಎನ್ನುವುದೊಂದು ಕಲೆ. ಕಲೆಯನ್ನು ರೂಢಿಸಿಕೊಂಡು ಆಳವಾದ ಅಧ್ಯಯನ, ಕಲಿಕೆಯಲ್ಲಿ ತೊಡಗಿದಾಗ ಜೀವನದಲ್ಲಿ ಉನ್ನತ ಸಾಧನೆ ಮಾಡಬಹುದಲ್ಲದೆ, ಉತ್ತಮ ಜೀವನವನ್ನೂ ಕಟ್ಟಿಕೊಳ್ಳಬಹುದು ಎಂದರು.