ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಗುಂಪು ಹಾಗೂ ವೈಯಕ್ತಿಕ ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಭಾಲ್ಕಿ
ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಗುಂಪು ಹಾಗೂ ವೈಯಕ್ತಿಕ ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕಿಯರ ವಿಭಾಗ: ಬಾಲಕಿಯರ ವಿಭಾಗದಲ್ಲಿ ವಾಲಿಬಾಲ್, ಬಾಸ್ಕೆಟ್‌ಬಾಲ್, ಫುಟ್‌ಬಾಲ್, ಬಾಲ್ ಬ್ಯಾಡ್ಮಿಂಟನ್, ಚದುರಂಗ ಹಾಗೂ ಯೋಗ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ವೈಯಕ್ತಿಕ ಸ್ಪರ್ಧೆಗಳಲ್ಲಿ 100 ಮೀ. ಅಕ್ಷರ ಓಟದಲ್ಲಿ ಪ್ರಥಮ, ವೈಷ್ಣವಿ 100 ಮೀ. ಓಟದಲ್ಲಿ ದ್ವಿತೀಯ, ವಿಭೂತಿ 200 ಮೀ. ಹಾಗೂ 1500 ಮೀ. ಓಟದಲ್ಲಿ ಪ್ರಥಮ, ಅನುಷ್ಕಾ 800 ಮೀ. ಓಟದಲ್ಲಿ ದ್ವಿತೀಯ, ಅಕ್ಷತಾ ಎತ್ತರ ಜಿಗಿತದಲ್ಲಿ ದ್ವಿತೀಯ ಹಾಗೂ ಸಾಕ್ಷಿ ಭಲ್ಲೆ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 4X100 ಮೀ. ರಿಲೇಯಲ್ಲಿ ವಿಭೂತಿ ಮತ್ತು ತಂಡ ಹಾಗೂ 4 X 400 ಮೀ. ರಿಲೇಯಲ್ಲಿ ವೈಷ್ಣವಿ ಮತ್ತು ತಂಡ ದ್ವಿತೀಯ ಸ್ಥಾನ ಶಟಲ್ ಬ್ಯಾಟ್ಮಿಂಟನ್‌ನಲ್ಲಿ ದ್ವಿತೀಯ ಸ್ಥಾನ ಗಳಿಸಿವೆ.
ಬಾಲಕರ ವಿಭಾಗ: ಬಾಲಕರ ವಿಭಾಗದಲ್ಲಿ ಫುಟ್‌ಬಾಲ್ ಹಾಗೂ ಬಾಸ್ಕೆಟ್ ಬಾಲ್‌ನಲ್ಲಿ ಪ್ರಥಮ, ಬಾಲ್ ಬ್ಯಾಡ್ಮಿಂಟನ್ ಮತ್ತು ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ ಹಾಗೂ ಖೋ-ಖೋದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ವೈಯಕ್ತಿಕ ಸ್ಥಾನಗಳಲ್ಲಿ ವೇದಾಂತ್ 100 ಮೀ. ಓಟದಲ್ಲಿ ದ್ವಿತೀಯ, ವೈಭವ್ 400 ಮೀ. ಓಟದಲ್ಲಿ ದ್ವಿತೀಯ, ಸಾಯಿನಾಥ್ 800 ಮೀ. ಓಟ ಹಾಗೂ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಆದಿತ್ಯ ಗುಂಡು ಎಸೆತ ಮತ್ತು ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಅಭಿಷೇಕ್ ಚಕ್ರ ಎಸೆತದಲ್ಲಿ ದ್ವಿತೀಯ ಹಾಗೂ ದೇವರಾಜ್ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಶಿವಶಂಕರ್ ಎತ್ತರ ಜಿಗಿತದಲ್ಲಿ ಪ್ರಥಮ, ದೇವರಾಜ್ 65 ಕೆ.ಜಿ. ಕುಸ್ತಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಚದುರಂಗದಲ್ಲಿ ಪ್ರಥಮ ಸ್ಥಾನ ಹಾಗೂ ಓಂ ಪ್ರಕಾಶ್ ಮತ್ತು ತಂಡ ಯೋಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. 4 X100 ಮೀ. ಹಾಗೂ 4 X 400 ಮೀ. ರಿಲೇ ಸ್ಪರ್ಧೆಗಳಲ್ಲಿ ಚಂದ್ರಷ್ಯ ಮತ್ತು ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಅವರ ನಿರಂತರ ಪರಿಶ್ರಮ, ಶಿಸ್ತು, ಕ್ರೀಡಾಸ್ಫೂರ್ತಿ ಹಾಗೂ ತರಬೇತುದಾರ ಶಿಕ್ಷಕರ ಮಾರ್ಗದರ್ಶನ ಕಾರಣವಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಬಸವರಾಜ್ ಮೋಳಕೆರೆ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಎಲ್ಲಾ ಕ್ರೀಡಾಪಟುಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು ಮತ್ತು ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಹಂತದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಸಂಸ್ಥೆಗೆ ಕೀರ್ತಿ ತರುವಂತೆ ಶುಭ ಹಾರೈಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.