ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ರಾಜಕಾರಣದಲ್ಲಿ ಸಿಗುವ ಅಧಿಕಾರ ಕ್ಷಣಿಕವಾದುದು. ಉನ್ನತ ಶಿಕ್ಷಣ ಪಡೆಯುವುದರಿಂದ ಸಿಗುವ ಅಧಿಕಾರ ಬದುಕಿನಲ್ಲಿ ಶಾಶ್ವತವಾದುದು. ಹಾಗಾಗಿ ಪೋಷಕರು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬೇಕು ಎಂದು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.ಇಲ್ಲಿನ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ವರ್ಷಾವಧಿ ಮಹೋತ್ಸವದ ಅಂಗವಾಗಿ ಶನಿವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಯಾಗಿ ಮಹಾಲಸಾ ನಾರಾಯಣ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ರಮೇಶ್ ಭಟ್ ಎಂ. ಭಾಗವಹಿಸಿ ಮಾತನಾಡಿದರು. ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಲೋಕೇಶ್ ಆಚಾರ್, ಎಂ.ಬಿ. ಕಂಬಾರ್ ಧಾರ್ಮಿಕ ಉಪನ್ಯಾಸ ನೀಡಿದರು.ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ವಿಭಾಗದ ಮುಖ್ಯಸ್ಥ ಡಾ. ಕೆ.ವಿ ಸುರೇಶ್ ಆಚಾರ್ಯ, ಅಯನ್ ಶಿಲ್ಪಿ ವೈ. ದಾಮೋದರ ಆಚಾರ್ಯ ಎರ್ಲಪಾಡಿ, ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಯಮುನಾ ಯೋಗಿತ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.
ದರೆಗುಡ್ಡೆ ಗ್ರಾಮ ಕೂಡುವಳಿಕೆ ಮೊಕ್ತೇಸರ ರವೀಂದ್ರ ಆಚಾರ್ಯ, ಜ್ಯೋತಿಷ್ಯ ವಿದ್ವಾಂಸ ಡಾ. ವೀರಭದ್ರ ಆಚಾರ್ಯ ಪುರೋಹಿತ್ ಬೆಂಗಳೂರು ಹಾಗೂ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಬಹುಮಾನ ವಿಜೇತ ರಿಷಬ್ ಎಚ್. ಎಂ ಅವರನ್ನು ಗೌರವಿಸಲಾಯಿತು.ಕ್ಷೇತ್ರದ ಆಡಳಿತ ಮೊಕ್ತೇಸರ ಎಂ.ಕೆ ಬಾಲಕೃಷ್ಣ ಆಚಾರ್ಯ ಉಳಿಯ ಅಧ್ಯಕ್ಷತೆ ವಹಿಸಿದ್ದರು. ಕಾಳಿಕಾಂಬಾ ಸೇವಾ ಸಮಿತಿ ಅಧ್ಯಕ್ಷ ಶ್ರೀನಾಥ ಆಚಾರ್ಯ, ಕಾಳಿಕಾಂಬಾ ಮಹಿಳಾ ಸಮಿತಿ ಅಧ್ಯಕ್ಷೆ ಶಾಂತಲಾ ಸಿತಾರಾಮ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮೊಕ್ತೇಸರ ಶಿವರಾಮ ಆಚಾರ್ಯ ಉಳಿಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೊಕ್ತೇಸರ ಯೋಗೀಶ್ ಆಚಾರ್ಯ ವಂದಿಸಿದು. ಜಗದೀಶ ಆಚಾರ್ಯ ಬೇಲಾಡಿ, ಪತ್ರಕರ್ತ ಧನಂಜಯ ಮೂಡುಬಿದಿರೆ ಕಾರ್ಯಕ್ರಮ ನಿರ್ವಹಿಸಿದರು.