ಕನ್ನಡಪ್ರಭ ವಾರ್ತೆ ಯಾದಗಿರಿ
ಗುರುಮಠಕಲ್ ಮತಕ್ಷೇತ್ರದ ಮಲ್ಹಾರ ಗ್ರಾಮದಲ್ಲಿ ಮಂಗಳವಾರ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಿಂದ ಬಂಡವಾಳ ವೆಚ್ಚದಡಿಯಲ್ಲಿ, ₹80 ಲಕ್ಷ ವೆಚ್ಚದಲ್ಲಿ ಸೇತುವೆ ದುರಸ್ತಿ ಹಾಗೂ ಕೆಕೆಆರ್‌ಡಿಬಿ ಯೋಜನೆಯಡಿ ಮಲ್ಹಾರ ಗ್ರಾಮದಿಂದ ಸಾವೂರು ಗ್ರಾಮದವರೆಗೆ ₹1.95 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಅಡಿಗಲ್ಲು ಹಾಗೂ ಕ್ಷೇತ್ರದ ಜಿನಕೇರಾ ಗ್ರಾಮದಲ್ಲಿ ಕೆಕೆಆರ್ ಡಿಬಿಯ ಮ್ಯಾಕ್ರೋ ಯೋಜನೆಯ ₹55 ಲಕ್ಷ ವೆಚ್ಚದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6 ನೂತನ ವರ್ಗ ಕೋಣೆಗಳ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸಹಿತ 4.17 ಕೋಟಿ ರು. ವೆಚ್ಚಗಳ ಬೃಹತ್ ಕಾಮಗಾರಿಗಳ ಚಾಲನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಬೀದಿ ದೀಪದ ಕೆಳಗೆ ಕುಳಿತು ಅಭ್ಯಾಸ ಮಾಡಿ ವಿಶ್ವಕ್ಕೆ ಶ್ರೇಷ್ಠ ಸಂವಿಧಾನ ನೀಡಿದರು. ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಂ ಬಡತನದಿಂದಲೇ ಬೆಳೆದು ದೇಶಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಮಕ್ಕಳು ಅಂಥ ನಾಯಕರನ್ನು ಮಾದರಿಯನ್ನಾಗಿ ಇಟ್ಟುಕೊಳ್ಳಬೇಕು ಎಂದರು.ಹಳ್ಳಿಗಳಲ್ಲಿ ಸರಕಾರದಿಂದ ಬರುವ ಯೋಜನೆಗಳ ಸೌಲಭ್ಯಗಳನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು. ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಶಾಲೆಗೆ ಹೆಚ್ಚುವರಿ ಕೋಣೆ ನಿರ್ಮಾಣಕ್ಕೆ 15 ಲಕ್ಷ ರೂ.ಅನುದಾನ ಬಿಡುಗಡೆಗೊಳಿಸಲು ಪ್ರಯತ್ನಿಸಲಾಗುವುದು. ಸಾವೂರು ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣವಾಗಿದೆ. ಆದರೆ ನೀರಿನ ಸಂಪರ್ಕ ಎಂದು ಗ್ರಾಮಸ್ಥರು ಆರೋಪಿಸಿದರು. ತಕ್ಷಣ ನೀರಿನ ಸಂಪರ್ಕ ಕಲ್ಪಿಸಬೇಕು. 5 ಲಕ್ಷ ಸಾವೂರು, 5 ಲಕ್ಷ ಜಿನಕೇರಾ, 3 ಲಕ್ಷ ಜಿನಿಕೇರಾ ತಾಂಡಕ್ಕೆ ಭರವಸೆ ನೀಡಿದರು.
ಆತ್ಮಹತ್ಯೆ ಮಾಡಿಕೊಂಡ ಶಂಕ್ರಪ್ಪ ದೇವಲ, ಭೀಮಪ್ಪ ನಾರಾಯಣ ಕುಟುಂಬಸ್ಥರಿಗೆ ಕೃಷಿ ಇಲಾಖೆಯಿಂದ ₹5 ಲಕ್ಷ ಚೆಕ್ ಗಳನ್ನು ಶಾಸಕರು ಹಸ್ತಾಂತರಿಸಿದರು.
ವಿವಿಜಿ ರಾಮ್ ಜೀ ಯೋಜನೆಯಡಿ ಉದ್ಯೋಗ ಖಾತ್ರಿ ಕೆಲಸಗಳನ್ನು ಅಧಿಕಾರಿಗಳು ತಾಂತ್ರಿಕ ಸಮಸ್ಯೆಯಿಂದ ಜಾಬ್ ಕಾರ್ಡ್ ಡಿಲೀಟ್ ಆದ ಕಾರಣ ನಿಲ್ಲಿಸಿದ್ದಾರೆ. ಕೂಡಲೇ ಜನತೆ ಕೂಲಿ ಕೆಲಸ ಕೊಡುವಂತೆ ಸೂಚಿಸಿದ್ದೇನೆ ಎಂದು ಶಾಸಕ ಶರಣಗೌಡ ಕಂದಕೂರ ಹೇಳಿದರು.