ಜನರ ಸೇವೆಗೆ ಪ್ರಧಾನ ಆದ್ಯತೆ: ಗುರುರಾಜ್ ಶೆಟ್ಟಿ ಗಂಟಿಹೊಳೆ

KannadaprabhaNewsNetwork |  
Published : Oct 05, 2026, 02:45 AM IST
ಶಾಸಕ ಗುರುರಾಜ್ ಗಂಟಿಹೊಳೆ ಅಧಿಕಾರಿಗಳೊಂದಿಗೆ  ಜನರ ಅಹವಾಲು ಆಲಿಸಿದರು  | Kannada Prabha

ಸಾರಾಂಶ

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರಿರುವಲ್ಲಿಗೆ ಹೋಗಬೇಕು, ಜನರು ಸಲ್ಲಿಸಿದ ಅಹವಾಲುಗಳನ್ನು ನಿರಂತರ ಪರಿಶೀಲಿಸಿಬೇಕು, ಜನರ ಸೇವೆಗೆ ಪ್ರಧಾನ ಆದ್ಯತೆ ನೀಡಿ, ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.

ಬೈಂದೂರು: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರಿರುವಲ್ಲಿಗೆ ಹೋಗಬೇಕು, ಜನರು ಸಲ್ಲಿಸಿದ ಅಹವಾಲುಗಳನ್ನು ನಿರಂತರ ಪರಿಶೀಲಿಸಿಬೇಕು, ಜನರ ಸೇವೆಗೆ ಪ್ರಧಾನ ಆದ್ಯತೆ ನೀಡಿ, ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.

ಬೈಂದೂರು ತಾಲೂಕು ಬೀಜೂರು ಗ್ರಾಮದ ಮುರ್ಗೋಳಿಹಕ್ಲು ನಂದಿಕೇಶ್ವರ ಸಭಾಭವನದಲ್ಲಿ, ಬೈಂದೂರು ತಾಲೂಕು ಪ್ರಜಾಸೇವಾ ಇಲಾಖೆ ವತಿಯಿಂದ ಬಿಜೂರು ಗ್ರಾಪಂ ವ್ಯಾಪ್ತಿಯ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೊಂದು ಜನಪರ ಕಾಳಜಿಯುತ ಕಾರ್ಯಕ್ರಮ ಆಗಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳು ಜನರ ಸಮಸ್ಯೆ /ಅಹವಾಲು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಈ ಕಾರ್ಯಕ್ರಮವು ಸಮರ್ಪಕವಾಗಿ ಜನರಿಗೆ ತಲುಪಿದಾಗ ಮಾತ್ರ ಯಶಸ್ವಿಯಾಗುತ್ತದೆ ಎಂದರು.

ಈ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 54 ಅರ್ಜಿಗಳು ಸಲ್ಲಿಕೆಯಾಗಿದ್ದು, ಸ್ಥಳದಲ್ಲಿಯೇ ವಿಲೇ ಮಾಡಲಾಯಿತು.

ಜನರ ಸಮಸ್ಯೆಗೆ ಪರಿಹಾರ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ನಾಗರಿಕರು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಕಚೇರಿಗೆ ಬಹಳಷ್ಟು ಅಲೆದಾಡುವುದನ್ನು ತಪ್ಪಿಸಿ, ಸರ್ಕಾರ ಅವರ ಮನೆ ಬಾಗಿಲಿಗೆ ತೆರಳಿ, ಕಾಲ ಮಿತಿಯೊಳಗೆ ಅವರ ಅಹವಾಲುಗಳಿಗೆ ಗುಣಾತ್ಮಕ ಪರಿಹಾರ ಕಲ್ಪಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದರು.

ಬೈಂದೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಅಭಿಯಾನದ ಲಾಭ ಪಡೆದುಕೊಳ್ಳುವಂತೆ ಜನರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಪಂ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೊಳ್ಳಿ, ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್, ನಂದಿಕೇಶ್ವರ ಯುವಕ ಸಮಾಜದ ಅಧ್ಯಕ್ಷ ಶ್ರೀನಿವಾಸ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

ಬೈಂದೂರು ಬಿಇಓ ಗಣೇಶ್ ನಾಯ್ಕ್ ಸ್ವಾಗತಿಸಿ, ಉಪ್ಪುಂದ ಪಪೂ ಕಾಲೇಜಿನ ಪ್ರೌಢಶಾಲಾ ಶಿಕ್ಷಕ ಕೇಶವ ನಾಯಕ್ ನಿರೂಪಿಸಿ, ಬೈಂದೂರು ತಹಶೀಲ್ದಾರ್ ರಾಮಚಂದ್ರಪ್ಪ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌ ಆಕ್ಷೇಪಣೆಯಲ್ಲಿ ನಕಲಿ ಮರಣ ಪ್ರಮಾಣಪತ್ರ ಸಲ್ಲಿಕೆ
ಯುವಕರಲ್ಲಿ ನಾಯಕತ್ವ ಬೆಳೆಸಲು ಯುವ ಸಂಘ ಯೋಜನೆ