ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಕೌಡ್ಲೆ ಗ್ರಾಮದ ಸಿಎಂಸಿಸಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ವಿಜ್ಞಾನ ತಂತ್ರಜ್ಞಾನ ಮುಂದುವರಿದ ಈ ಕಾಲದಲ್ಲಿ ವಿಶ್ವವೇ ಒಂದು ಗ್ರಾಮವಂತಾಗಿದೆ. ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಹೆತ್ತವರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ ಎಂದರು.
ಇಂತಹ ಪರಿಸ್ಥಿತಿಯಲ್ಲಿ ಹಿರಿಯ ವಿದ್ಯಾರ್ಥಿಗಳೆಲ್ಲರು ಒಟ್ಟುಗೂಡಿ ಗುರುಗಳಿಗೆ ಗೌರವ ವಂದನೆ ಸಲ್ಲಿಸುತ್ತಿರುವುದು ಶ್ಲಾಘನೀಯ. ಶಿಕ್ಷಕರಿಗೆ ಗೌರವ ಸಲ್ಲಿಸುವ ಜತೆಗೆ ತಮ್ಮ ಹಳೆಯ ದಿನಗಳನ್ನು ಮೆಲಕು ಹಾಕುವಂತಹ ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಇಂತಹ ಕಾರ್ಯಕ್ರಮ ಇದೀಗ ಅಗತ್ಯವಿದೆ ಎಂದರು.ನಿಕಟಪೂರ್ವ ಮುಖ್ಯಶಿಕ್ಷಕ ಉಮೇಶ್ ಇಟಗಿ ಮಾತನಾಡಿದರು. 2000 ರಿಂದ 2025ರವರೆಗೆ ಶಾಲೆಯಲ್ಲಿ ವ್ಯಾಸಂಗ ಮಾಡಿದ ನೂರಾರು ಹಿರಿಯ ವಿದ್ಯಾರ್ಥಿಗಳು ಶಿಕ್ಷಕರಾದ ಪಿ.ಶಶಿಕಲಾ, ಎಂ.ನಂಜಪ್ಪ, ಎಂ.ಎಸ್.ಸವಿತಾ, ಬಿ.ವಿಜಯ್, ಸುರೇಶ್ ನಾಯ್ಕ, ಸರಿತಾ, ಶೇಖರಯ್ಯ ಕೋಡಿಮಠ್, ಹೀರಲಾಲ್, ಶಿವಪ್ಪ, ಶ್ರೀಧರ್, ಶ್ರೀಕಾಂತ್, ನಾಗೇಶ್ ಸೇರಿ ಇತರ ಶಿಕ್ಷಕರಿಗೆ ಗುರುವಂನೆ ಸಲ್ಲಿಸಿದರು.
ಮಂಡ್ಯ: ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2026 ರ ಅಂಗವಾಗಿ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ ಪೂರ್ವಭಾವಿಯಾಗಿ ಕೃಷಿ ಇಲಾಖೆ ವತಿಯಿಂದ ಡಿ.31 ರಂದು ನಗರದ ಗಾಂಧಿಭವನದಲ್ಲಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ಪ್ರದರ್ಶಿಸುವ ಖಾದ್ಯಗಳ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿ.30 ರೊಳಗೆ ಇ-ಮೇಲ್ ವಿಳಾಸ ಅಥವಾ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೊಠಡಿ ಸಂಖ್ಯೆ 50, 1ನೇ ಮಹಡಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಆವರಣ, ಮಂಡ್ಯ ವಿಳಾಸಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ: 8277933611, 9535739394, 9980083269 ಮತ್ತು 9483593315 ಗಳನ್ನು ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.