ಕಾರ್ಕಳ: ರಾಷ್ಟ್ರ ಮಟ್ಟದ ಎಂ.ಬಿ.ಬಿ.ಎಸ್. ಹಾಗೂ ಇತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಎನ್‌ಟಿಎ ನಡೆಸಿದ ನೀಟ್-2026 ಪರೀಕ್ಷೆಯಲ್ಲಿ 720ಕ್ಕೆ 680 ಅಂಕ ಗಳಿಸಿ, ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಮೇಧಾಂಶ್ ಎನ್. ಬಿ. ಅವರನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಹಾಗೂ ಜ್ಞಾನಸುಧಾ ಬಳಗ ಸನ್ಮಾನಿಸಿತು.
ಅದೇ ಸಂದರ್ಭದಲ್ಲಿ 99.9720985 ಪರ್ಸಂಟೈಲ್ ಹಾಗೂ 720ಕ್ಕೆ 670 ಅಂಕ ಗಳಿಸಿ ರಾಷ್ಟ್ರಮಟ್ಟದ ಜನರಲ್ ಮೆರಿಟ್ ವಿಭಾಗದಲ್ಲಿ 519ನೇ ರ‍್ಯಾಂಕ್ (ಕೆಟಗರಿ ವಿಭಾಗದಲ್ಲಿ 327ನೇ ರ‍್ಯಾಂಕ್) ಪಡೆದ ಮನೋಜ್ ಎಂ., ಹಾಗೂ 99.9629481 ಪರ್ಸಂಟೈಲ್ ಪಡೆದು ರಾಷ್ಟ್ರಮಟ್ಟದ ಜನರಲ್ ಮೆರಿಟ್ ವಿಭಾಗದಲ್ಲಿ 701ನೇ ರ‍್ಯಾಂಕ್ (ಕೆಟಗರಿ ವಿಭಾಗದಲ್ಲಿ 425ನೇ ರ‍್ಯಾಂಕ್) ಗಳಿಸಿದ ಅನಿರುದ್ಧ್ ಆರ್. ಉಡುಪ ಅವರನ್ನೂ ಸನ್ಮಾನಿಸಲಾಯಿತು. ಇವರಿಬ್ಬರಿಗೂ ತಲಾ 2 ಲಕ್ಷ ರು. ಪ್ರೋತ್ಸಾಹಧನ ಘೋಷಿಸಲಾಯಿತು.ಈ ಬಾರಿಯ ನೀಟ್-2026 ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 528 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು 600ಕ್ಕೂ ಹೆಚ್ಚು ಅಂಕ, 59 ವಿದ್ಯಾರ್ಥಿಗಳು 550ಕ್ಕೂ ಹೆಚ್ಚು ಅಂಕ ಹಾಗೂ 133 ವಿದ್ಯಾರ್ಥಿಗಳು 500ಕ್ಕೂ ಹೆಚ್ಚು ಅಂಕ ಗಳಿಸಿದ್ದಾರೆ. ಅಲ್ಲದೆ, 260 ವಿದ್ಯಾರ್ಥಿಗಳು 90 ಪರ್ಸಂಟೈಲ್‌ಗಿಂತ ಹೆಚ್ಚು ಅಂಕ ಗಳಿಸಿರುವುದು ಸಂಸ್ಥೆಯ ಮತ್ತೊಂದು ವಿಶೇಷ ಸಾಧನೆಯಾಗಿದೆ.ಅಭಿನಂದನಾ ಕಾರ್ಯಕ್ರಮದಲ್ಲಿ ಮೇಧಾಂಶ್ ಅವರ ಪೂರ್ವ ಶಾಲೆಯಾದ ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಅನಿತಾ ಪಿ. ರಾಜ್ ಉಪಸ್ಥಿತರಿದ್ದು, ಅವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳ ಪೋಷಕರು, ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಟ್ರಸ್ಟಿಗಳಾದ ಅನಿಲ್ ಕುಮಾರ್ ಜೈನ್ ಹಾಗೂ ವಿದ್ಯಾವತಿ ಎಸ್. ಶೆಟ್ಟಿ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ನಿರ್ವಹಣಾಧಿಕಾರಿ ದಿನೇಶ್ ಎಂ. ಕೊಡವೂರ್, ಪಿಆರ್‌ಒ ಜ್ಯೋತಿ ಪದ್ಮನಾಭ ಭಂಡಿ, ವಿದ್ಯಾರ್ಥಿಗಳ ಆಪ್ತ ಸಮಾಲೋಚಕ ಡಾ. ಪ್ರಸನ್ನ ಹೆಗ್ಡೆ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಡೀನ್‌ಗಳು, ವಿಭಾಗ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಸಂಸ್ಥೆಯ ಹಿತೈಷಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ನಿರೂಪಿಸಿ ವಂದಿಸಿದರು.