ಕನ್ನಡಪ್ರಭ ವಾರ್ತೆ ಸೊರಬ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಾ.ಜ್ಞಾನೇಶ್ ಸ್ನೇಹ ಬಳಗದ ವತಿಯಿಂದ ಅವರ ಹುಟ್ಟು ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಬೃಹತ್ ರಕ್ತದಾನ ಶಿಬಿರ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಅಭಿನಂದನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಾಲೂಕಿನ ಇತಿಹಾಸದಲ್ಲಿ ಮೊದಲ ಬಾರಿಗೆ ಈ ಮಟ್ಟದ ರಕ್ತ ಸಂಗ್ರಹವಾಗಲು ಕಾರಣವಾದ ಡಾ.ಜ್ಞಾನೇಶ್ ಅವರ ಸ್ನೇಹಿತರು, ಹಿತೈಷಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು ರಕ್ತದಾನ ಶಿಬಿರದಲ್ಲಿ ಕೈಜೋಡಿಸಿದ್ದಾರೆ. ಅವರನ್ನು ಸ್ನೇಹ ಬಳಗ ಹೃದಯಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತದೆ ಎಂದು ಹೇಳಿದರು.
ಮಹತ್ವಪೂರ್ಣ ರಕ್ತದಾನ ಶಿಬಿರದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ, ಜಡೆ ಮಠದ ಡಾ.ಮಹಾಂತ ಸ್ವಾಮೀಜಿ, ಶಾಂತಪುರ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಹಿರೇಮಾಗಡಿ ಮಠದ ಶಿವಮೂರ್ತಿ ಸ್ವಾಮೀಜಿ, ಲಕ್ಕವಳ್ಳಿ ಜೈನ ಮಠದ ವೃಷಭಸೇನ ಭಟ್ಟಾರಕ ಸ್ವಾಮೀಜಿ, ಆಗಮಿಸಿ ನಮ್ಮ ಮನ ಸಂತೋಷಪಡಿಸಿದ್ದಾರೆ ಎಂದು ತಿಳಿಸಿದರು.ಸ್ನೇಹ ಬಳಗದ ವಿನಯ್ ಶೆರ್ವಿ ಮಾತನಾಡಿ, ವೃತ್ತಿ ಜೀವನದಷ್ಟೇ ಸಮಾಜದ ಒಳಿತಿಗಾಗಿ ಸಮಯ ನೀಡಿ ಸೇವೆ ಮಾಡುತ್ತಿರುವ ಡಾ.ಜ್ಞಾನೇಶ್ ಅವರು ಮಠ, ಮಾನ್ಯಗಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದಾರೆ. ಎಲ್ಲಾ ವರ್ಗದ ಜನರ ಜೊತೆಗೆ ಉತ್ತಮ ಸ್ನೇಹ ಸಂಪಾದಿಸಿದ ಹಿನ್ನೆಲೆಯಲ್ಲಿ ಅವರ ಹುಟ್ಟುಹಬ್ಬದಲ್ಲಿ ರಕ್ತದಾನ ಶಿಬಿರವು ದಾಖಲೆಯ ರೂಪದಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು