ಶೋಷಿತ ವರ್ಗಗಳ ಆಶಾಕಿರಣ ಎಚ್.ಸಿ.ಮಹದೇವಪ್ಪ-ಜೆ. ಯೋಗೇಶ್

KannadaprabhaNewsNetwork |  
Published : Apr 22, 2026, 01:45 AM IST
21ಸಿಎಚ್‌ಎನ್‌56ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಸೋಮವಾರ ಡಾ.ಎಚ್.ಸಿ. ಮಹದೇವಪ್ಪ ಹುಟ್ಟು ಹಬ್ಬದ ನಿಮಿತ್ತ ಸೋಲಿಗ ಮಹಿಳೆಯರಿಗೆ ವಸ್ತ್ರಗಳನ್ನು ವಿತರಣೆ ಮಾಡಲಾಯಿತು. | Kannada Prabha

ಸಾರಾಂಶ

ಶೋಷಿತ ವರ್ಗಗಳ ಆಶಾಕಿರಣವಾಗಿ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ದಶಕಗಳಿಂದಲೂ ಸೇವೆ ಮಾಡುತ್ತಾ ಬಂದಿದ್ದಾರೆ ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್ ಬಣ್ಣಿಸಿದರು.

ಯಳಂದೂರು: ಶೋಷಿತ ವರ್ಗಗಳ ಆಶಾಕಿರಣವಾಗಿ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ದಶಕಗಳಿಂದಲೂ ಸೇವೆ ಮಾಡುತ್ತಾ ಬಂದಿದ್ದಾರೆ ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್ ಬಣ್ಣಿಸಿದರು.

ಅವರು ಸೋಮವಾರ ತಾಲೂಕಿನ ಬಿಳಿಗಿರಿರಂಗನಬೆಟ್ಟದ ಗಂಗಾಧರೇಶ್ವರಸ್ವಾಮಿ ದೇಗುಲದ ಆವರಣದಲ್ಲಿ ಕಾಂಗ್ರೆಸ್ ಮುಖಂಡರ ವತಿಯಿಂದ ಹಮ್ಮಿಕೊಂಡಿದ್ದ ಎಚ್.ಸಿ. ಮಹದೇವಪ್ಪರವರ 73ನೇ ಜನ್ಮದಿನಾಚರಣೆ ನಿಮಿತ್ತ ಸೋಲಿಗ ಮಹಿಳೆಯರಿಗೆ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಹದೇವಪ್ಪ ಶಾಸಕರಾಗಿ, ಮಂತ್ರಿಯಾಗಿ ರಾಜ್ಯಕ್ಕೆ ಅತ್ಯುನ್ನತ ಕೊಡುಗೆಗಳನ್ನು ನೀಡಿದ್ದಾರೆ. ರಾಜಕೀಯ ಸದೃಢತೆಯನ್ನು ಹೊಂದಿ, ಸಮಾಜದಲ್ಲಿ ಅತಿ ತುಳಿತಕ್ಕೆ ಒಳಗಾದ ಸಮುದಾಯಗಳ ಆರ್ಥಿಕ, ಶೈಕ್ಷಣಿಕ, ಅಭಿವೃದ್ಧಿಗೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ. ಇವರ ಪುತ್ರ ಸುನೀಲ್‌ ಬೋಸ್ ಕೂಡ ಚಾಮರಾಜನಗರದ ಸಂಸದರಾಗಿ ಅನೇಕ ಜನಪರ ಕೆಲಸಗಳನ್ನು ಮಾಡುತ್ತಿದ್ದಾರೆ. ಸೋಲಿಗರ ಅಭಿವೃದ್ಧಿಗೆ ಹೆಚ್ಚು ಕಾಳಜಿ ಹೊಂದಿರುವ ಇವರು ಮುಂದಿನ ದಿನಗಳಲ್ಲಿ ಇಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉತ್ಸುಕರಾಗಿದ್ದಾರೆ. ಆದಷ್ಟು ಬೇಗ ಇಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನದ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು ಮಾತನಾಡಿ, ಮಹದೇವಪ್ಪ ಸಂವಿಧಾನದ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಸಂವಿಧಾನದ ಪೀಠಿಕೆಯನ್ನು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹೇಳಿಸುವ ಮೂಲಕ ನಮ್ಮ ದೇಶದ ಸಂವಿಧಾನದ ಅರಿವನ್ನು ಪ್ರಾಥಮಿಕ ಹಂತದಲ್ಲೇ ನೀಡುವ ಕೆಲಸವನ್ನು ಮಾಡಿದ್ದಾರೆ. ಸಂವಿಧಾನ ಆಶಯದಂತೆ ಆಡಳಿತ ಮಾಡುತ್ತಿರುವ ಒಬ್ಬ ಮುತ್ಸದ್ಧಿ ರಾಜಕಾರಣಿಯಾಗಿದ್ದಾರೆ. ಅಲ್ಲದೆ 6 ಬಾರಿ ಶಾಸಕರಾಗಿ, 4 ಬಾರಿ ಸಚಿವರಾಗಿ ಅನೇಕ ಜನಾನುರಾಗಿ ಕೆಲಸಗಳನ್ನು ಮಾಡುತ್ತಿದ್ದಾರೆ. ಇವರು ಆರೋಗ್ಯ ಮಂತ್ರಿಗಳಾಗಿದ್ದಾಗ ಎಲ್ಲಾ ಬಿಪಿಎಲ್ ಹೊಂದಿರುವ ಕಾರ್ಡುದಾರರಿಗೂ ಉಚಿತ ಆರೋಗ್ಯ ಸೇವೆಗಳನ್ನು ಆರಂಭಿಸಿದ್ದರು. ಆಸ್ಪತ್ರೆಗಳ ಸುಧಾರಣೆಯ ಕ್ರಾಂತಿಯೂ ಅಲ್ಲಿಂದಲೇ ಆರಂಭವಾಯಿತು. ಅಲ್ಲದೆ ಲೋಕೋಪಯೋಗಿ ಸಚಿವರಾಗಿದ್ದಾಗ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಮಾಡಿದ್ದರು. ಈಗ ಸಮಾಜ ಕಲ್ಯಾಣ ಸಚಿವರಾಗಿ ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿ ಇಲ್ಲಿನ ಮಕ್ಕಳಿಗೆ ಉತ್ತಮ ಊಟೋಪಚಾರ ಸೇರಿದಂತೆ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿಗಳ ಆಪ್ತರಾಗಿದ್ದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲೂ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ನಂತರ ಸೋಲಿಗ ಮಕ್ಕಳು, ಮಹಿಳೆಯರು ಕೇಕ್ ಕತ್ತರಿಸಿದರು. ಸೋಲಿಗ ಮಹಿಳೆಯರಿಗೆ ಸೀರೆಗಳನ್ನು ವಿತರಣೆ ಮಾಡಿ, ಅನ್ನದಾನವನ್ನು ಮಾಡಲಾಯಿತು.

ಜಿಪಂ ಮಾಜಿ ಉಪಾಧ್ಯಕ್ಷೆ ಕೇತಮ್ಮ, ಮುಖಂಡರಾದ ವೆಂಕಟೇಶ್, ಕಮಲಮ್ಮ, ಮಾದಮ್ಮ, ಗುರುಲಿಂಗಯ್ಯ, ಮಲ್ಲೇಶ್, ರವಿಕುಮಾರ್, ಶಿವಮಲ್ಲು, ಕಾರನಕೇತೇಗೌಡ ಸೇರಿದಂತೆ ಅನೇಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಮಾನುಜಾಚಾರ್ಯರ 1009ನೇ ತಿರುನಕ್ಷತ್ರ ಮಹೋತ್ಸವ ನಿಮಿತ್ತ ಮಹಾರಥೋತ್ಸವ
ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಎಚ್.ಟಿ.ಮಂಜು ಕೈ ಬಲಪಡಿಸಿ: ನಿಖಿಲ್ ಕುಮಾರಸ್ವಾಮಿ