ಕನ್ನಡಪ್ರಭ ವಾರ್ತೆ ಮಂಡ್ಯ
ನಂತರ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಡವರು, ರೈತರು ಹಾಗೂ ಸಾಮಾನ್ಯ ಜನರ ಬಗ್ಗೆ ಅಪಾರ ಕಾಳಜಿ ಹೊಂದಿರುವ ನಾಯಕರು. 94 ವರ್ಷ ವಯಸ್ಸಿನಲ್ಲಿಯೂ ಜನರ ಸಮಸ್ಯೆಗಳ ಬಗ್ಗೆ ಚಿಂತಿಸುವ ಅವರ ಸೇವಾ ಮನೋಭಾವ ಎಲ್ಲರಿಗೂ ಮಾದರಿಯಾಗಿದೆ ಎಂದರು.
ಮಂಡ್ಯ ಜಿಲ್ಲೆ ದೇವೇಗೌಡರ ಕುಟುಂಬಕ್ಕೆ ರಾಜಕೀಯ ಶಕ್ತಿ, ಪ್ರೀತಿ ಹಾಗೂ ಆಶೀರ್ವಾದ ನೀಡಿದೆ. ಕುಮಾರಸ್ವಾಮಿ ಅವರನ್ನು 3.5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಲೋಕಸಭೆಗೆ ಆಯ್ಕೆ ಮಾಡಿ ಕಳುಹಿಸಿದ ಜಿಲ್ಲೆಯ ಜನರ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ರೈತರ ಸುಮಾರು 25 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದು, ಶಿಕ್ಷಣ, ವಿದ್ಯುತ್ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಹಲವು ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.
ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿಯಾಗಿದ್ದು, ಶಿಕ್ಷಣವೇ ಭವಿಷ್ಯ ರೂಪಿಸುವ ಶಕ್ತಿಯಾಗಿದೆ. ಆದ್ದರಿಂದ ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಏಳೂರಮ್ಮ ದೇವಾಲಯ ನಿರ್ಮಾಣ ಕಾರ್ಯದಲ್ಲಿ ಗ್ರಾಮದ ಹಿರಿಯರು, ಮಹಿಳೆಯರು, ಯುವಕರು ಹಾಗೂ ಭಕ್ತರು ಒಗ್ಗಟ್ಟಿನಿಂದ ಕೈಜೋಡಿಸಬೇಕು. ದಾನಿಗಳು ಮತ್ತು ಗ್ರಾಮಸ್ಥರ ಸಹಭಾಗಿತ್ವದಲ್ಲಿ ದೇವಾಲಯವನ್ನು ಸುಂದರವಾಗಿ ನಿರ್ಮಿಸೋಣ. ದೇವಾಲಯದ ನಿರ್ಮಾಣಕ್ಕೆ ಅಗತ್ಯವಿರುವ ಸಹಕಾರವನ್ನು ತಮ್ಮ ಕೈಲಾದ ಮಟ್ಟಿಗೆ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ, ಮುಖಂಡರಾದ ಮಹಾದೇವ, ಎಂ.ಮಾದೇಗೌಡ, ಚೆನ್ನೇಗೌಡ, ಪಾರ್ಥ ಸೇರಿದಂತೆ ಗ್ರಾಮದ ಹಿರಿಯರು, ಮಹಿಳೆಯರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ದಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.