ಹೆಚ್.ಕೆ ಕುಮಾರ್ ಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

KannadaprabhaNewsNetwork |  
Published : Sep 05, 2025, 01:00 AM IST
ಚಿತ್ರ : ಕುಮಾರ್ | Kannada Prabha

ಸಾರಾಂಶ

ಗೋಣಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆಚ್‌ ಕೆ ಕುಮಾರ್‌ ಉತ್ತಮ ಶಿಕ್ಷಕ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಗೋಣಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ ಕುಮಾರ್ ಉತ್ತಮ ಶಿಕ್ಷಕರ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಕಳೆದ ಮೂರು ವರ್ಷಗಳಿಂದ ಗೋಣಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಶಾಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿ, ಮಕ್ಕಳ ಶಿಕ್ಷಣದ ಉನ್ನತೀಕರಣಕ್ಕೆ ಶ್ರಮಿಸುತ್ತಿದ್ದಾರೆ.ಕಳೆದ ಬಾರಿ ನಡೆದ ಶತಮಾನೋತ್ಸವ ಸಂಭ್ರಮವನ್ನು ಅತ್ಯುತ್ತಮವಾಗಿ ಆಯೋಜಿಸುವ ಮೂಲಕ ರಾಜ್ಯಮಟ್ಟದಲ್ಲಿ ಗಮನ ಸೆಳೆಯಲಾಗಿತ್ತು.ಶಾಲೆಯಲ್ಲಿ, ಸಮಸ್ಯೆಯಾಗಿ ಕಾಡುತ್ತಿದ್ದ ಕುಡಿಯುವ ನೀರು, ಶುಚಿತ್ವ, ಕೊಠಡಿಗಳ ನವೀಕರಣ ಸೇರಿದಂತೆ ಹಲವಾರು ಕಾರ್ಯ ಯೋಜನೆಗಳನ್ನ ರೂಪಿಸುವ ಮೂಲಕ ಸರ್ಕಾರಿ ಶಾಲೆಯ ಮಕ್ಕಳ ಓದಿಗೆ ಪೂರಕ ವಾತಾವರಣ ನಿರ್ಮಿಸುವಲ್ಲಿ ಕುಮಾರ್ ಬಹುಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ. ಇವರು ಕುಶಾಲನಗರದ ನಿವಾಸಿಯಾಗಿದ್ದಾರೆ.

ಜಿಲ್ಲಾ ಪ್ರಶಸ್ತಿ : ಪ್ರಸಕ್ತ (2025-26) ಸಾಲಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಿಸಲಾಗಿದೆ.

ಮಡಿಕೇರಿ ತಾಲೂಕಿನ ಮೊಣಕಾಲ್ಮುರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಕೆ.ಆರ್.ಶಾಲಿನಿ, ಅರೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಎ.ಡಿ.ಮೀನಾಕ್ಷಿ, ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಎಂ.ವನಜ, ಸೋಮವಾರಪೇಟೆ ತಾಲೂಕಿನ ಬಡುಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಕೆ.ವಿ.ಜಾನ್ಸಿ, ಕೂಡಿಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಎಸ್.ಎ.ಯೋಗೇಶ್, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು(ಪ್ರೌಢ ಶಾಲಾ ವಿಭಾಗ) ಮುಖ್ಯ ಶಿಕ್ಷಕರಾದ ಅಬ್ದುಲ್ ರಬ್ ಎಂ.ಎಸ್., ವಿರಾಜಪೇಟೆ ತಾಲೂಕಿನ ಎಮ್ಮೆಗುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಎ.ಕೆ.ಮಾಚಮ್ಮ, ಚೆನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಸುಷಾ ಕೆ.ಕೆ., ದೇವಣಗೇರಿ ಬಿ.ಸಿ.ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಎಚ್.ಡಿ.ಲೋಕೇಶ್ ಅವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇಂದು ಶಿಕ್ಷಕರ ದಿನಾಚರಣೆ:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ಸೆ. 5 ರಂದು ಬೆಳಗ್ಗೆ 10 ಗಂಟೆಗೆ ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಮೈಸೂರು ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದ ಉಪನ್ಯಾಸಕರಾದ ಎಸ್.ಪಿ.ನಾಗರಾಜು, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಬಿ.ಕೆ.ಅರುಣ್ ಕುಮಾರ್, ಇತರರು ಪಾಲ್ಗೊಳ್ಳಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ