ಇಂದು, ನಾಳೆ ಪಿಇಎಸ್ ಕಾಲೇಜಲ್ಲಿ ಹ್ಯಾಕ್ ಮಲೆನಾಡು: ನಾಗರಾಜ್

KannadaprabhaNewsNetwork |  
Published : Apr 17, 2026, 03:15 AM IST
ಪೋಟೋ: 16ಎಸ್‌ಎಂಜಿಕೆಪಿ01ಶಿವಮೊಗ್ಗದ ಪತ್ರಿಕಾಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಪಿಇಎಸ್ ಟ್ರಸ್ಟ್‌ನ ಕುಲಸಚಿವ ಡಾ. ಆರ್.ನಾಗರಾಜ್ ಮಾತನಾಡಿದರು.  | Kannada Prabha

ಸಾರಾಂಶ

ಪಿಇಎಸ್ ಎಂಜಿನಿಯರಿಂಗ್ ಕಾಲೇಜ್ ವತಿಯಿಂದ ‘ಹ್ಯಾಕ್ ಮಲೆನಾಡು-2026’ ಎಂಬ 24 ಗಂಟೆಗಳ ಬೃಹತ್ ‘ಹ್ಯಾಕಥಾನ್’ ಅನ್ನು ಏ.17 ಮತ್ತು 18ರಂದು ಕಾಲೇಜಿನ ಪ್ರೇರಣ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪಿಇಎಸ್ ಟ್ರಸ್ಟ್‌ನ ಕುಲಸಚಿವ ಡಾ.ಆರ್.ನಾಗರಾಜ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಪಿಇಎಸ್ ಎಂಜಿನಿಯರಿಂಗ್ ಕಾಲೇಜ್ ವತಿಯಿಂದ ‘ಹ್ಯಾಕ್ ಮಲೆನಾಡು-2026’ ಎಂಬ 24 ಗಂಟೆಗಳ ಬೃಹತ್ ‘ಹ್ಯಾಕಥಾನ್’ ಅನ್ನು ಏ.17 ಮತ್ತು 18ರಂದು ಕಾಲೇಜಿನ ಪ್ರೇರಣ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪಿಇಎಸ್ ಟ್ರಸ್ಟ್‌ನ ಕುಲಸಚಿವ ಡಾ.ಆರ್.ನಾಗರಾಜ್ ತಿಳಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಲೇಜಿನ ಎಐ ಟಾಸ್ಕ್‌ಫೋರ್ಸ್ ಮಹಾತ್ವಕಾಂಕ್ಷೆಯ ಉಪಕ್ರಮದಡಿ ಈ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ ಎಂದರು.

ಇದರಲ್ಲಿ ಎರಡು ವಿಭಾಗಗಳಿದ್ದು, ಮೊದಲನೆಯದು ಐಟಿ ಸೇವೆಗಳಲ್ಲಿ ಗ್ರಾಹಕ ಸರಕುಗಳು ಮತ್ತು ವಿಮರ್ಶೆಯ ಸಾರಾಂಶ ಹಾಗೂ ಎರಡನೆಯದು ಆರ್ಟಿಫಿಷಿಯಲ್ ಇಂಟಲಿಜೇನ್ಸ್. ಇಂದಿನ ತಂತ್ರಜ್ಞಾನ ಯುಗದಲ್ಲಿ ಕೃತಕ ಬುದ್ದಿಮತ್ತೆ ಮಾನವ ಜೀವನದ ಅವಿಭಾಜ್ಯ ಅಂಗವಾಗುತ್ತಿದೆ. ಕೃತಕ ಬುದ್ದಿಮತ್ತೆ ಕೆಲಸಗಳನ್ನು ವೇಗವಾಗಿ ಮತ್ತು ನಿಖರವಾಗಿ ನೆರವೇರಿಸುತ್ತದೆ. ವೈದ್ಯಕೀಯ ಕ್ಷೇತ್ರದಲ್ಲಿ ರೋಗ ನಿರ್ಣಯ, ಶಿಕ್ಷಣ ಕ್ಷೇತ್ರದಲ್ಲಿ ವೈಯಕ್ತಿ ಕಲಿಕೆ, ಕೃಷಿಯಲ್ಲಿ ಉತ್ಪಾದನೆ ಹೆಚ್ಚಿಸುವುದು ಮತ್ತು ಕೈಗಾರಿಕೆಗಳಲ್ಲಿ ಸ್ವಯಂಚಾಲಿತ ವ್ಯವಸ್ಥೆಗಳಲ್ಲಿ ಎಐ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಹ್ಯಾಕಥಾನ್‌ನ ಪ್ರಮುಖ ಉದ್ದೇಶ ನೈಜ ಜಗತ್ತಿನ ಸವಾಲುಗಳಿಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳುವುದಾಗಿದೆ. ನವೀನ ಆಲೋಚನೆಗಳು ಮತ್ತು ತಂತ್ರಜ್ಞಾನ ಆಧಾರಿತ ಪರಿಹಾರಗಳನ್ನು ಉತ್ತೇಜಿಸುವ ಉದ್ದೇಶದಿಂದ ಹ್ಯಾಕಥಾನ್ ನಡೆಯುತ್ತಿದ್ದು, ವಿದ್ಯಾರ್ಥಿಗಳು ಮತ್ತು ತಂತ್ರಜ್ಞಾನ ಆಸಕ್ತರು ತಮ್ಮ ಸೃಜನಾತ್ಮಕ ಯೋಜನೆಗಳನ್ನು ಪ್ರದರ್ಶಿಸಲು ವೇದಿಕೆಯಾಗಲಿದೆ ಎಂದರು.

ದೇಶದ ವಿವಿಧ ಕಡೆಗಳಿಂದ ಸುಮಾರು 60ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳಿಂದ ಆಯ್ದ 650 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಇದರಲ್ಲಿ ತಮ್ಮ ಕಾಲೇಜಿನಿಂದ 18 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ ಎಂದರು.

ಏ.17 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಟಿಸಿಎಸ್ ಡೆಲವೆರಿ ಸೆಂಟರ್‌ನ ಮುಖ್ಯಸ್ಥ ಸುನೀಲ್ ದೇಶಪಾಂಡೆ, ಶೈಕ್ಷಣಿಕ ಮೈತ್ರಿಯ ಪ್ರಾದೇಶಿಕ ಮುಖ್ಯಸ್ಥ ವಿ.ಪ್ರವೀಣ್ ಚಂದ್ರನ್, ಗಣ್ಯರಾದ ಸುಧಾಂಶು ಶೇಖರ್, ಪ್ರಮೋದ್ ಕುಮಾರ್ , ಯು.ವರುಣ್ ಹಾಜರಾಗಲಿದ್ದಾರೆ.ನಂತರ 24 ಗಂಟೆಗಳ ತಾಂತ್ರಿಕ ಸ್ಪರ್ಧೆಗಳು ಆರಂಭವಾಗಲಿದ್ದು, ವಿಜೇತ ತಂಡಗಳಿಗೆ ಒಟ್ಟು 1.75 ಲಕ್ಷ ನಗದು ಬಹುಮಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಏ.18 ಬೆಳಗ್ಗೆ 11 ಗಂಟೆಗೆ ಸ್ಪರ್ಧೆ ಮುಕ್ತಾಯವಾಗಲಿದ್ದು, ಮಧ್ಯಾಹ್ನ 2.30ಕ್ಕೆ ಸಮಾರೋಪ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಪಿಇಎಸ್ ಐಟಿಎಂನ ಪ್ರಾಂಶುಪಾಲ ಡಾ.ಡಿ.ಆರ್‌.ಸ್ವಾಮಿ, ಉಪ ಪ್ರಾಂಶುಪಾಲ ಡಾ. ಆರ್‌.ಶೇಖರ್, ಪ್ರೊ.ಡಾ.ಯು.ಅರ್ಜುನ್ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವಶಕ್ತಿಯಿಂದ ಬಸವ ಜಯಂತಿ 2026ಕ್ಕೆ ಹೊಸ ಚೈತನ್ಯ
ಅಪಘಾತದಲ್ಲಿ ಮೃತಪಟ್ಟಿದ್ದ ಯೋಧನ ಅಂತ್ಯಕ್ರಿಯೆ