ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಹಾಗೂ ವಿಶ್ವವಿದ್ಯಾಲಯದ ನಾವಿನ್ಯತೆ ಮಂಡಳಿ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಹ್ಯಾಕಥಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ನಾವೀನ್ಯತೆ, ಕೃತಕ ಬುದ್ಧಿಮತೆ (ಎಐ) ತಂತ್ರಜ್ಞಾನ, ಸಾಫ್ಟ್‌ವೇರ್ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಕೌಶಲ್ಯಗಳನ್ನು ಬೆಳೆಸುವ ಇಂತಹ ಕಾರ್ಯಕ್ರಮಗಳು ಭವಿಷ್ಯದ ತಂತ್ರಜ್ಞಾನ ಸವಾಲುಗಳನ್ನು ಎದುರಿಸಲು ನೆರವಾಗುತ್ತವೆ. ವಿದ್ಯಾರ್ಥಿಗಳು ತಮ್ಮ ಹೊಸ ಕಲ್ಪನೆಗಳನ್ನು ಅಭಿವೃದ್ಧಿಪಡಿಸಿ ನವೋದ್ಯಮಗಳಾಗಿ ರೂಪಿಸಿಕೊಳ್ಳುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ಶಿಕ್ಷಣ ತಜ್ಞ ಡಾ.ಸಂಜು ಥಾಮಸ್ ಅವರು ಅಂತಾರಾಷ್ಟ್ರೀಯ ಶಿಕ್ಷಣ, ಉನ್ನತ ಶಿಕ್ಷಣಕ್ಕಾಗಿ ವಿಶ್ವವಿದ್ಯಾಲಯಗಳ ಆಯ್ಕೆ, ವಿದ್ಯಾರ್ಥಿವೇತನ ಹಾಗೂ ಜಾಗತಿಕ ಅವಕಾಶಗಳ ಕುರಿತು ಮಾಹಿತಿ ನೀಡಿದರು.
ಅಮೆರಿಕದ ನ್ಯೂಯಾರ್ಕ್‌ನ ಓಪನ್ ಥೀಸಿಸ್ ಸಂಸ್ಥೆಯ ಸಿಇಒ ಮಿನ್ಸುಂಗ್ ಹ್ಯುನ್ ಅವರು ಎಐ ಆಧಾರಿತ ಸಾಫ್ಟ್‌ವೇರ್ ಅಭಿವೃದ್ಧಿ, ವೈಬ್ ಕೋಡಿಂಗ್ ಹಾಗೂ ಆಧುನಿಕ ತಂತ್ರಜ್ಞಾನಗಳ ಬಳಕೆಯ ಕುರಿತು ಉಪನ್ಯಾಸ ನೀಡಿದರು.
ಡಾ.ಶ್ರೀಧರ್ ಸರಸ್ವತಿ, ಆದಿಚುಂಚನಗಿರಿ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ.ಸಿ.ಕೆ.ಸುಬ್ಬರಾಯ, ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದ ಪ್ರಾಂಶುಪಾಲೆ ಡಾ.ಬಿ.ಎನ್.ಶೋಭ, ಇನ್‌ಸ್ಟಿಟ್ಯೂಷನ್ ಇನ್ನೋವೇಷನ್ ಕೌನ್ಸಿಲ್‌ನ ನಿರ್ದೇಶಕ ಡಾ.ಕೆ.ಬಿ.ಗಿರೀಶ್, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ.ಎಸ್.ಎಚ್.ಮಂಜುನಾಥ್, ಸಾರ್ವಜನಿಕ ಸಂಪರ್ಕಾಧಿಕಾರಿ ವೈ.ಪಿ.ಧರ್ಮೇಂದ್ರ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕವರ್ಗ ಮತ್ತು ನೂರಾರು ವಿದ್ಯಾರ್ಥಿಗಳು ಇದ್ದರು.