ಹೊಸಪೇಟೆ: 12ನೇ ಶತಮಾನದಲ್ಲೇ ರಕ್ತ ಕ್ರಾಂತಿಯ ಬದಲು ವೈಚಾರಿಕ ಕ್ರಾಂತಿಯ ಮೂಲಕ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಶಿವಶರಣ ಹಡಪದ ಅಪ್ಪಣ್ಣನವರ ತತ್ವಗಳು ಮತ್ತು ಚಿಂತನೆಗಳು ಇಂದಿನ ಆಧುನಿಕ ಯುಗಕ್ಕೂ ಅತ್ಯಂತ ಪ್ರಸ್ತುತ ಎಂದು ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ತಿಳಿಸಿದರು.ನಗರದ ಅನಂತಶನಯನಗುಡಿ ರಾಯಣ್ಣ ಕಾಲೋನಿಯಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆಯಿಂದ ಶಿವಶರಣ ಹಡಪದ ಅಪ್ಪಣ್ಣನವರ 892ನೇ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
ಹಿಟ್ನಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಬಸ್ವರಾಜ್ ಟಿ.ಎಚ್. ಉಪನ್ಯಾಸ ನೀಡಿದರು. ಸಿದ್ದಲಿಂಗಸ್ವಾಮಿ ಕೊಟ್ಟೂರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣವರ, ಜಾಗತಿಕ ಲಿಂಗಾಯತ ಮಹಸಭೆ ಜಿಲ್ಲಾಧ್ಯಕ್ಷ ಮಾವಿನಹಳ್ಳಿ ಬಸವರಾಜ್, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಗೊಗ್ಗ ಚನ್ನಬಸವರಾಜ್, ಬಸವ ಬಳಗದ ಅಧ್ಯಕ್ಷ ಬಸವ ಕಿರಣ ಸ್ವಾಮಿ, ಹಡಪದ ಹಪ್ಪಣ್ಣ ಸಮಾಜದ ಜಿಲ್ಲಾಧ್ಯಕ್ಷ ಎಚ್.ಮಲ್ಲಪ್ಪ, ಕಾರ್ಯದರ್ಶಿ ಕೊಟ್ರೇಶಪ್ಪ ಎಚ್. ಗೌರವಾಧ್ಯಕ್ಷ ಈರಪ್ಪ ಎಚ್. ಮಲಪನಗುಡಿ ಸೇರಿದಂತೆ ಸಮುದಾಯದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.ಹೊಸಪೇಟೆ ನಗರದ ಅನಂತಶನಯನಗುಡಿ ರಾಯಣ್ಣ ಕಾಲೋನಿಯಲ್ಲಿ ಹಡಪದ ಅಪ್ಪಣ್ಣ ಜಯಂತಿಯನ್ನು ಜಿಲ್ಲಾಧಿಕಾರಿ ಇ. ಬಾಲಕೃಷ್ಣ ಉದ್ಘಾಟಿಸಿ ಮಾತನಾಡಿದರು.