
ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಶರಣರು 12ನೇ ಶತಮಾನದಲ್ಲಿ ತಮ್ಮ ವಚನಗಳ ಮೂಲಕ ಸಾಮಾಜಿಕ ಬದಲಾವಣೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಆ ನಿಟ್ಟಿನಲ್ಲಿ ಬಸವಣ್ಣನವರ ಜೊತೆಗೂಡಿ ಹಡಪದ ಅಪ್ಪಣ್ಣ ಅವರು ಸಮಾಜ ಸುಧಾರಣೆಗೆ ಪ್ರಯತ್ನಿಸಿದ್ದಾರೆ ಎಂದು ನುಡಿದರು.ಹಡಪದ ಅಪ್ಪಣ್ಣ ಅವರು 12ನೇ ಶತಮಾನದಲ್ಲಿ ಧಾರ್ಮಿಕ, ಸಾಮಾಜಿಕವಾಗಿ ಎಲ್ಲರನ್ನು ಮೇಲೆತ್ತುವಲ್ಲಿ ಶ್ರಮಿಸಿದ್ದಾರೆ. ಎಲ್ಲರಿಗೂ ಸಮಾನತೆ ಕಲ್ಪಿಸಲು ಶ್ರಮಿಸಿದ್ದಾರೆ. ಕಂದಾಚಾರವನ್ನು ಗಟ್ಟಿಯಾಗಿ ಪ್ರಶ್ನಿಸುವ ಮೂಲಕ ಅಸಮಾನತೆ ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದರು.
ಹಡಪದ ಅಪ್ಪಣ್ಣ ಅವರ ಇಷ್ಟದೇವರು ಬಸವಪ್ರಿಯ ಕೂಡಲ ಚೆನ್ನಬಸವಣ್ಣ ಎಂಬ ಅಂಕಿತ ನಾಮದ ಮೂಲಕ 250 ಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ. ಆ ದಿಸೆಯಲ್ಲಿ ವಚನ ಚಳುವಳಿಗೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಕೆ.ಜಯಲಕ್ಷ್ಮಿ ಅವರು ವಿವರಿಸಿದರು.
ಕೊಡಗು ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಕೆ.ಎಸ್.ದೊರೇಶ್ ಅವರು ಮಾತನಾಡಿ 12ನೇ ಶತಮಾನದಲ್ಲಿ ಬಸವಣ್ಣನವರ ಜೊತೆ ಎಲ್ಲಾ ಸಮಾಜದವರು ಸೇರಿ ಸಾಮಾಜಿಕ ಕ್ರಾಂತಿಯನ್ನು ಉಂಟು ಮಾಡಿದರು ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಮಾತನಾಡಿದರು. ಮಡಿಕೇರಿ ತಾಲೂಕು ಸವಿತಾ ಸಮಾಜ ಮಹಿಳಾ ಘಟಕದ ಅಧ್ಯಕ್ಷರಾದ ವಸಂತಿ ಆರ್.ಬಿ, ಶಿರಸ್ತೆದಾರರಾದ ದೇವರಾಜು, ಪ್ರಮುಖರಾದ ಸಂದೇಶ್ ಟಿ.ಜಿ., ಅವಿನಾಶ್ ಬೊಟ್ಲಪ್ಪ ಇತರರು ಇದ್ದರು.