ಹಗರಿಬೊಮ್ಮನಹಳ್ಳಿ: ಎಲ್ಲ ಸದಸ್ಯರ ವಿಶ್ವಾಸದೊಂದಿಗೆ ಪಟ್ಟಣದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಪುರಸಭೆ ನೂತನ ಅಧ್ಯಕ್ಷೆ ರೇಷ್ಮಾಬಾನು ಸಿಕಂದರ್ ತಿಳಿಸಿದರು.
ಮಾಜಿ ಶಾಸಕ ಭೀಮಾನಾಯ್ಕ ನಮ್ಮ ಹೈಕಮಾಂಡ್. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುವೆ. ಎಲ್ಲ ಸದಸ್ಯರ ಸಹಕಾರದೊಂದಿಗೆ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದೇನೆ. ಪಟ್ಟಣದ ಎಲ್ಲ ವಾರ್ಡ್‌ಗಳ ಸಮಸ್ಯೆಗಳ ಕುರಿತು ಸಮೀಕ್ಷೆ ನಡೆಸಲಾಗುತ್ತದೆ. ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿ ಸದಸ್ಯರ ಸಮನ್ವಯದೊಂದಿಗೆ ನಾಗರಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಅಗತ್ಯ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್, ಉಪಾಧ್ಯಕ್ಷೆ ನೇತ್ರಾವರಿ ಸೆರೆಗಾರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸಾಹಿರಾಬಾನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋರಿ ಗೋಣಿಬಸಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಯಶೋದಾ ಮಂಜುನಾಥ್, ಪುರಸಭೆ ಮಾಜಿ ಅಧ್ಯಕ್ಷ ಮರಿರಾಮಣ್ಣ, ಮಾಜಿ ಅಧ್ಯಕ್ಷೆ ಕವಿತಾ ಹಾಲ್ದಾಳ್, ಮಾಜಿ ಉಪಾಧ್ಯಕ್ಷೆ ಅಂಬಿಕಾ ದೇವೇಂದ್ರಪ್ಪ, ಸದಸ್ಯರಾದ ಪವಾಡಿ ಹನಮಂತಪ್ಪ, ಉಪ್ಪಾರ ಬಾಳಪ್ಪ, ತ್ಯಾವಣಿಗಿ ಕೊಟ್ರೇಶ್, ಮುಖಂಡರಾದ ಹೆಗ್ಡಾಳು ರಾಮಣ್ಣ, ಸಿಕಂದರ್, ಅಲ್ಲಾಭಕ್ಷಿ, ಬಾಳಕೃಷ್ಣ ಬಾಬು, ಬಾರೀಕರ ಬಾಪೂಜಿ, ಸೆರೆಗಾರ್ ಹುಚ್ಚಪ್ಪ, ಗುಂಡ್ರು ಹನಮಂತಪ್ಪ ಇದ್ದರು.ಪುರಸಭೆ ಕಾಂಗ್ರೆಸ್ ಸದಸ್ಯರಾದ ಗಣೇಶ್, ನೆಲ್ಲು ಇಸ್ಮಾಯಿಲ್, ಡಿ.ಎಂ.ಅಜೀಜುಲ್ಲಾ ಪದಗ್ರಹಣ ಸಮಾರಂಭದಿಂದ ದೂರ ಉಳಿದು ಅಚ್ಚರಿ ಮೂಡಿಸಿದ್ದರು.