ಹುಬ್ಬಳ್ಳಿಗೆ ಹಜ್ ಭವನ ಘೋಷಣೆ: ಸಲೀಂ ಅಹ್ಮದ್‌ಗೆ ಅಭಿನಂದನೆ

KannadaprabhaNewsNetwork |  
Published : Mar 09, 2026, 02:00 AM IST
ರಾಜ್ಯ ಬಜೆಟ್‌ನಲ್ಲಿ ಹುಬ್ಬಳ್ಳಿಯಲ್ಲಿ ಹಜ್ ಭವನ ನಿರ್ಮಾಣದ ಘೋಷಣೆ ಮಾಡಲು ಶ್ರಮಿಸಿದ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರನ್ನು ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ಅನೇಕ ಧರ್ಮಗುರುಗಳು ಸನ್ಮಾನಿಸಿದರು. | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್‌ನಲ್ಲಿ ಹುಬ್ಬಳ್ಳಿಯಲ್ಲಿ ಹಜ್ ಭವನ ನಿರ್ಮಾಣದ ಘೋಷಣೆ ಮಾಡಲು ಶ್ರಮಿಸಿದ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಧರ್ಮಗುರುಗಳು, ಕಾರ್ಯಕರ್ತರು, ಅಭಿಮಾನಿಗಳು ಸನ್ಮಾನಿಸಿದರು.

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್‌ನಲ್ಲಿ ಹುಬ್ಬಳ್ಳಿಯಲ್ಲಿ ಹಜ್ ಭವನ ನಿರ್ಮಾಣದ ಘೋಷಣೆ ಮಾಡಲು ಶ್ರಮಿಸಿದ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರನ್ನು ಭಾನುವಾರ ನಗರದ ಪ್ರವಾಸಿ ಮಂದಿರದಲ್ಲಿ ಅನೇಕ ಧರ್ಮಗುರುಗಳು, ಕಾರ್ಯಕರ್ತರು, ಅಭಿಮಾನಿಗಳು ಸನ್ಮಾನಿಸಿದರು.

ಕಿತ್ತೂರು ಕರ್ನಾಟಕದ ಬಹುದಿನಗಳ ಕನಸಾಗಿದ್ದ ಹುಬ್ಬಳ್ಳಿಯ ಹಜ್ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಪ್ರಮುಖ ಕಾರಣಿಕರ್ತರು. ಇದೊಂದು ಮಹತ್ವದ ಐತಿಹಾಸಿಕ ಘೋಷಣೆ ಆಗಿದ್ದು ಪೀಠಾಧಿಪತಿಗಳು, ಧರ್ಮಗುರುಗಳು, ಧಾರ್ಮಿಕ ನಾಯಕರುಗಳು ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳ ಮುಖಂಡರುಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ತಾಜುದ್ದೀನ್ ಪೀರಾ, ಭಾಷಾಪೀರ್ ದರ್ಗಾದ ಸಜ್ಜಾದ್ ನಸೀನ್ ಧರ್ಮಗುರು, ಉತ್ತರ ಕರ್ನಾಟಕ ಅಂಜುಮನ್ ಇಸ್ಲಾಂ ಸಮಿತಿ ಅಧ್ಯಕ್ಷ ಹಮೀದ್ ಕೊಪ್ಪದ್ ಮುಂತಾದವರು ಮಾತನಾಡಿದರು.

ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ತಮ್ಮ ‌ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿ ಹುಬ್ಬಳ್ಳಿಗೆ ಹಜ್ ಭವನ ನಿರ್ಮಾಣಕ್ಕೆ ‌ಮುಂದಾಗಿದ್ದಾರೆ. ಕಿತ್ತೂರು ಕರ್ನಾಟಕಕ್ಕೆ ಇದು ಬಹಳ ದಿನಗಳ ಕಾಲದ ಬೇಡಿಕೆಯಾಗಿತ್ತು. ಪವಿತ್ರ ಹಜ್ ಯಾತ್ರೆಗೆ ಹೋಗಲು ಯಾತ್ರಾರ್ಥಿಗಳಿಗೆ ಇದು ಬಹಳಷ್ಟು ಅನುಕೂಲ ಆಗಲಿದೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌.ಡಿ‌. ಮಕಾಂದರ, ಶಹಜಮಾನ್ ಮುಜಾಹಿದ್, ರಶೀದ್ ಎಂ‌. ಶೇಖ್, ಪಠಾಣ, ಇನಾಯತ್ ಖಾನ್ ಪಠಾಣ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುತ್ತೂಟ್ ಫಿನ್‌ಕಾರ್ಪ್‌ನ ವಡಗಾಂವ ಶಾಖೆಯಲ್ಲಿ ಮಹಿಳಾ ದಿನಾಚರಣೆ
‘ಥ್ಯಾಂಕ್ಸ್‌ ಅಪ್ಪ’ ಕಾದಂಬರಿ ಪ್ರತಿ ಮನೆಯಲ್ಲೂ ಇರಲಿ: ನ್ಯಾ.ಸಂತೋಷ್‌