ಕನ್ನಡಪ್ರಭ ವಾರ್ತೆ ಬೀಳಗಿ
ಒಳಮೀಸಲಾತಿ ವರ್ಗಿಕರಣ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನಂತೆ ಮೀಸಲಾತಿ ಜಾರಿಗೊಳ್ಳಿಸುವಂತೆ ಒತ್ತಾಯಿಸಿ ಮಾದಿಗ, ಸಮಗಾರ, ಮಚಗಾರ, ಡೋಹರ ಹಾಗೂ ಡಕ್ಕಲಿಗ ಜಾತಿ ಉಪಜಾತಿ ಸಂಘಟನೆಗಳ ಒಕ್ಕೂಟ ಬೀಳಗಿ ಘಟಕದಿಂದ ಶಾಸಕ ಜೆ.ಟಿ.ಪಾಟೀಲರಿಗೆ ಮನವಿ ಸಲ್ಲಿಸಲಾಯಿತು.ಸಂಘಟನೆಯವರು ತಮಟೆ ಬಾರಿಸುತ್ತಾ ಆಗಮಿಸಿ ಕಾಂಗ್ರೆಸ್ ಪಕ್ಷದ ಕಾರ್ಯಾಲಯಕ್ಕೆ ತೆರಲಿ ಕಾಂಗ್ರೆಸ್ ಪಕ್ಷದ ತಾಲೂಕಾಧ್ಯಕ್ಷ ಹಣಮಂತ ಕಾಖಂಡಕಿಯವರ ಮೂಲಕ ಶಾಸಕರಿಗೆ ಮನವಿ ಸಲ್ಲಿಸಿ, ಮುಖಂಡ ಸೋಮು ಚೂರಿ ಮಾತನಾಡಿ, ಮಾಧುಸ್ವಾಮಿ ರವರ ಸಮಿತಿ ಏಕೆ (ಆದಿ ಕರ್ನಾಟಕ) ಏಡಿ (ಆದಿ ದ್ರಾವಿಡ) ಸಮಸ್ಯೆಗೆ ಪರಿಹಾರ ಒದಗಿಸಿದೆ. 2011ರ ಜನಗಣತಿ ಅಂಕಿಅಂಶಗಳ ಆಧಾರದಲ್ಲಿ ವರ್ಗೀಕರಣ ಮಾಡಿದೆ. ಈಗ ಮತ್ತೆ ನಾಗಮೋಹನ್ ದಾಸ್ ಆಯೋಗಕ್ಕೆ ಅದೇ ಕೆಲಸ ಕೊಡಲಾಗಿದೆ. ಸರ್ಕಾರದ ಈ ನಿಧಾನಗತಿ ನಿರ್ಲಕ್ಷ್ಯ ಧೋರಣೆ ನೋಡಿದರೆ ಇವರಿಗೆ ಅವಕಾಶ ವಂಚಿತ ದಲಿತ ಸಮುದಾಯಗಳಿಗೆ ಒಳಮೀಸಲಾತಿ ಕೊಡುವ ಮನಸ್ಸಿಲ್ಲ ಎಂಬುದು ಸ್ಪಷ್ಟ್ಟವಾಗುತ್ತದೆ. ಒಳಮೀಸಲಾತಿ ಜಾರಿ ಆಗುವರೆಗೆ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ಕೊಟ್ಟಿತ್ತು. ಆದರೆ ಈ ಭರವಸೆ ಜಾರಿಯಾಗಿಲ್ಲ. ನೇಮಕಾತಿ ಘೋಷಣೆಗಳು ವಿವಿಧ ಇಲಾಖೆಯಿಂದ ಬರುತ್ತಲೆ ಇದೆ. ಇದು ಖಂಡನಾರ್ಹವಾಗಿದೆ ಎಂದರು.
ಕಾಂಗ್ರೆಸ್ ಸರ್ಕಾರದ ಈ ಒಳಮೀಸಲಾತಿ ವಿರೋಧಿ ಧೋರಣೆ ಖಂಡಿಸಿ ಡಿ.16ರಂದು ಸೋಮವಾರ ಬೆಳಗಾವಿಯಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶಕ್ಕೆ ಕರೆ ಕೊಡಲಾಗಿದೆ. ಹರಿಯಾಣದ ಬಿಜೆಪಿ ಸರ್ಕಾರ ತೀರ್ಪು ಬಂದ ಮೊದಲ ವಾರದಲ್ಲೆ ಒಳಮೀಸಲಾತಿ ಜಾರಿಮಾಡಿದೆ. ಆದರೆ ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಪಕ್ಷದ ಸರ್ಕಾರ ಬದ್ಧತೆ ತೋರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಧಿಕಾರಕ್ಕೆ ಬಂದ ಮೊದಲ ವಾರದಲ್ಲೇ ಒಳಮೀಸಲಾತಿ ಜಾರಿ ಮಾಡುತ್ತೇವೆಂದು ಹೇಳಿ ಅಧಿಕಾರ ಹಿಡಿದ ಕಾಂಗ್ರೆಸ್ ನಾಯಕರು ಮಾದಿಗ ಜನತೆಗೆ ವಿಶ್ವಾಸದ್ರೋಹ ಎಸಗಿದ್ದಾರೆ. ನೀವು ಶಾಸಕರಾಗಿ ಆಯ್ಕೆ ಆಗುವಲ್ಲಿ ನಮ್ಮ ಸಮಾಜದ ಬೆಂಬಲ ನಿರ್ಣಾಯಕವಾಗಿದೆ. ನೀವು ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ವಿಷಯ ಪ್ರಸ್ಥಾಪಿಸಿ ಬೆಂಬಲ ಸೂಚಿಸಬೇಕೆಂದು ನಮ್ಮ ವಿನಂತಿ. ಹಾಗೆಯೇ ಬೆಳಗಾವಿಯ ಹಕ್ಕೊತ್ತಾಯ ಸಮಾವೇಶದಲ್ಲಿ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದರು.ಮಾದಿಗ ಸಮಾಜದ ಮುಖಂಡ ಸಿದ್ದು ಮಾದರ, ಪಡಿಯಪ್ಪ ಕಳ್ಳಿಮನಿ, ಶಿವಾನಂದ ಮಾದರ, ರವಿ ಮಂಟೂರ, ಆನಂದ ಮಂಟೂರ, ನಾಗೇಶ ಸಿಡ್ಲನ್ನವರ, ಆಶೋಕ ಚಲವಾದಿ, ಮಹೇಶ ಮಾದರ, ರಮೇಶ ಅನಗವಾಡಿ, ಮಹೇಶ ನಾಗರಾಳ, ಆನಂದ ಗಲಗಲಿ ಇತರರು ಇದ್ದರು.