ವಚನ ಸಾಹಿತ್ಯಕ್ಕೆ ಹಳಕಟ್ಟಿ ಕೊಡುಗೆ ಅಪಾರ

KannadaprabhaNewsNetwork |  
Published : Jul 04, 2024, 01:02 AM IST
ಅಳ್ನಾವರ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಫ.ಗು.ಹಳಕಟ್ಟಿ ಜಯಂತಿ ಸಮಾರಂಭದಲ್ಲಿ ಅಧಿಕಾರಿಗಳು,ಜನಪ್ರತಿನಿಧಿಗಳು ಪಾಲ್ಘೋಂಡಿದ್ದರು. | Kannada Prabha

ಸಾರಾಂಶ

ಫ.ಗು. ಹಳಕಟ್ಟಿ ಅವರು ವಚನ ಸಾಹಿತ್ಯ ಬೆಳೆಸುವ ಜತೆಗೆ ಕರ್ನಾಟಕ ಏಕೀಕರಣದಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. ಅಂದಿನ ದಿನದಲ್ಲಿ ಅನೇಕ ಗ್ರಂಥಗಳನ್ನು ರಚಿಸಿದ್ದರು ಮತ್ತು ಎರಡು ಪತ್ರಿಕೆ ಪ್ರಾರಂಭಿಸಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತಿದೆ.

ಅಳ್ನಾವರ:

ವಚನ ಸಾಹಿತ್ಯ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆಯನ್ನು ವಚನ ಪಿತಾಮಹಾ ಡಾ. ಫ.ಗು. ಹಳಕಟ್ಟಿ ಅವರು ನೀಡಿದ್ದಾರೆ ಎಂದು ತಹಸೀಲ್ದಾರ್‌ ಬಸವರಾಜ ಬೆಣ್ಣೆಶಿರೂರ ಹೇಳಿದರು.

ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಫ.ಗು. ಹಳಕಟ್ಟಿ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿ, ಸಮಾಜಕ್ಕಾಗಿ ಶ್ರಮಿಸಿದ ಅನೇಕ ಮಹನೀಯರ ಪೈಕಿ ಹಳಕಟ್ಟಿ ಅವರು ವಚನ ಸಾಹಿತ್ಯಕ್ಕೆ ನೀಡಿದ ಕೊಡುಗೆ ಸಾಕಷ್ಟಿದೆ ಎಂದರು.

ಕಸಾಪ ತಾಲೂಕಾಧ್ಯಕ್ಷ ಗುರುರಾಜ ಸಬನೀಸ ಮಾತನಾಡಿ, ಫ.ಗು. ಹಳಕಟ್ಟಿ ಅವರು ವಚನ ಸಾಹಿತ್ಯ ಬೆಳೆಸುವ ಜತೆಗೆ ಕರ್ನಾಟಕ ಏಕೀಕರಣದಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. ಅಂದಿನ ದಿನದಲ್ಲಿ ಅನೇಕ ಗ್ರಂಥಗಳನ್ನು ರಚಿಸಿದ್ದರು ಮತ್ತು ಎರಡು ಪತ್ರಿಕೆ ಪ್ರಾರಂಭಿಸಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ. ಅಂದು ಪತ್ರಿಕಾ ಮಾಧ್ಯಮದ ಮೂಲಕ ಜನರ ಮೇಲಿರುವ ಸಾಮಾಜಿಕ ಜವಾಬ್ದಾರಿ ತಿಳಿಸಿ ಕನ್ನಡ ನೆಲ, ಭಾಷೆ ಉಳಿವಿಗೆ ನಿರಂತರ ಸೇವೆ ಸಲ್ಲಿಸಿ ಪತ್ರಿಕೆ ಮತ್ತು ಸಾಹಿತ್ಯದ ಮೂಲಕ ಸಾಮಾಜಿಕ ಬದಲಾವಣೆ ತರಲು ಪ್ರಯತ್ನಿಸಿದ್ದರು ಎಂದರು.

ಕಾರ್ಯಕ್ರಮದಲ್ಲಿ ಪಪಂ ಮುಖ್ಯಾಧಿಕಾರಿ ಪ್ರಕಾಶ ಮಗದುಮ್, ನಾಗರಾಜ ಗುರ್ಲಹೋಸುರ, ಕಸಾಪ ಕೋಶಾದ್ಯಕ್ಷ ಪ್ರವೀಣ ಪವಾರ, ಪಪಂ ಸದಸ್ಯರಾದ ತಮೀಮಅಹ್ಮದ್‌ ತೇರಗಾಂವ, ರಮೇಶ ಕುನ್ನೂರಕರ, ಜೈಲಾನಿ ಸುದರ್ಜಿ, ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಕೇಶವ ಗುಂಜೀಕರ, ಸುರೇಶ ಜಗಾಪೂರ, ಎಂ.ಎಸ್. ಬಿರಾದಾರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!