ಕನ್ನಡಪ್ರಭ ವಾರ್ತೆ ಮೂಲ್ಕಿ
ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಸಭಾಭವನದಲ್ಲಿ ಜರುಗಿದ ಸೊಸೈಟಿಯ ಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿದ್ದ ಹಳೆಯಂಗಡಿ ಹೆಬ್ರಾನ್ ಅಸೆಂಬ್ಲಿ ಪೆಂಟ ಕೋಸ್ತಲ್ ಚರ್ಚ್‌ನ ಪಾಸ್ಟರ್ ಐ.ಡಿ. ಪ್ರಸನ್ನ ಮಾತನಾಡಿ ಸೇವಾ ಸಂಸ್ಥೆಗಳು ಪ್ರಾಮಾಣಿಕತೆ ಹಾಗೂ ಕಾರ್ಯದಕ್ಷತೆ ಮೂಲಕ ಗ್ರಾಹಕರ ಭರವಸೆಗಳನ್ನು ಈಡೇರಿಸಿದರೆ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಲು ಸಾಧ್ಯ. ಅಭಿವೃದ್ಧಿಯು ಮೂಲ ಮಂತ್ರವಾಗಬೇಕೆಂದು ಹೇಳಿದರು.ಮೂಲ್ಕಿ ತಾಲೂಕು ಉಪ ತಹಸೀಲ್ದಾರ್ ದಿಲೀಪ್ ರೋಡ್ಕರ್ ಮುಖ್ಯ ಅತಿಥಿಯಾಗಿದ್ದರು. ಸಂಸ್ಥೆಯ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಉಮಾನಾಥ ಜಿ. ಶೆಟ್ಟಿಗಾರ್, ಡಾ. ಗಣೇಶ ಅಮೀನ್ ಸಂಕಮಾರ್, ಗೌತಮ್ ಜೈನ್, ವಿಜಯಕುಮಾರ್ ಸನಿಲ್, ಮಿರ್ಜಾ ಅಹಮದ್, ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು. ಶಾಖಾ ಪ್ರಬಂಧಕಿ ಅಕ್ಷತಾ ನಿರೂಪಿಸಿದರು.