ಹಳೆಯಂಗಡಿ: ನೂತನ ದೇವಾಡಿಗ ಭವನ ಉದ್ಘಾಟನೆ

KannadaprabhaNewsNetwork |  
Published : Feb 18, 2025, 12:30 AM IST
ಹಳೆಯಂಗಡಿ ದೇವಾಡಿಗ ಭವನ ಲೋಕಾರ್ಪಣೆ  | Kannada Prabha

ಸಾರಾಂಶ

ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ಹಳೆಯಂಗಡಿಯ ನೇತೃತ್ವದಲ್ಲಿ ನೂತನವಾಗಿ ನಿರ್ಮಿಸಲಾದ ದೇವಾಡಿಗ ಭವನದ ನೆಲ ಅಂತಸ್ತು ಲೋಕಾರ್ಪಣಾ ಸಮಾರಂಭವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಹಿಂದಿನ ಕಾಲದಲ್ಲಿ ಆಯಾ ಕುಲಕಸುಬಿಗೆ ಅನುಗುಣವಾಗಿ ಜಾತಿಗಳನ್ನು ವಿಂಗಡಿಸಲಾಗಿದ್ದು ಅದರಲ್ಲಿ ದೇವರಿಗೆ ಪ್ರಿಯವಾದ ಹತ್ತಿರವಾದ ದೇವಾಡಿಗ ಸಮಾಜ ಕೂಡ ಒಂದು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಂದು ಕೋಟಿ ರು. ಅನುದಾನವನ್ನು ಸಂಘದ ಕಟ್ಟಡಕ್ಕೆ ಘೋಷಿಸಲಾಗಿತ್ತು. ಈಗಿನ ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲದ ಕಾರಣ ಮಂಜೂರಾದ ಹಣ ಬಿಡುಗಡೆಯಾಗದೆ ಸಮಸ್ಯೆಯಾಗಿದೆಯೆಂದು ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದ್ದಾರೆ. ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ಹಳೆಯಂಗಡಿಯ ನೇತೃತ್ವದಲ್ಲಿ ನೂತನವಾಗಿ ನಿರ್ಮಿಸಲಾದ ದೇವಾಡಿಗ ಭವನದ ನೆಲ ಅಂತಸ್ತು ಲೋಕಾರ್ಪಣಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ಶಾಸಕರ ನಿಧಿಯಿಂದ 25 ಲಕ್ಷ ರು. ನೀಡುತ್ತೇನೆ ಮತ್ತು ಸರ್ಕಾರದ ಅನುದಾನ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಹೇಳಿದರು.

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ ರಾಜ್ಯದ ಚುಕ್ಕಾಣಿ ಹಿಡಿದಂತಹ ಒಬ್ಬ ನಾಯಕನನ್ನು ಕೊಟ್ಟ ಸಮಾಜ ಇದ್ದರೆ ಅದು ದೇವಾಡಿಗ ಸಮಾಜ. ದೇಶದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಬಡವರ ಶೋಷಣೆ ನಿರಂತರವಾಗಿ ನಡೆಯುತ್ತಿತ್ತು. ಆದರೆ ಸ್ವಾತಂತ್ರ್ಯ ಸಿಕ್ಕ ಬಳಿಕ ಆದ ಸಾಮಾಜಿಕ ಬದಲಾವಣೆಯಲ್ಲಿ ಒಬ್ಬ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ ವೀರಪ್ಪ ಮೊಯಿಲಿಯಂತ ನಾಯಕರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆಂದು ವಿವರಿಸಿದರು.

ವಿಶ್ವ ದೇವಾಡಿಗ ಮಹಾಮಂಡಲದ ಅಧ್ಯಕ್ಷ ಧರ್ಮಪಾಲ್ ಯು. ದೇವಾಡಿಗ ಶುಭ ಹಾರೈಸಿದರು. ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆಯ ಅಧ್ಯಕ್ಷ ಅಣ್ಣಪ್ಪ ದೇವಾಡಿಗ ಅಧ್ಯಕ್ಷತೆ ವಹಿಸಿದದ್ದರು.

ಕೃಷ್ಣ ಹೆಗ್ಡೆ ಮಿಯಾರು, ವಸಂತ್ ಬೆರ್ನಾರ್ಡ್, ಮುಂಬೈ ದೇವಾಡಿಗ ಸಂಘ ಮಾಜಿ ಅಧ್ಯಕ್ಷ ರವಿ ಎಸ್. ದೇವಾಡಿಗ, ಗ್ರಾಮ ಪಂಚಾಯಿತಿ ಹಳೆಯಂಗಡಿ ಅಧ್ಯಕ್ಷೆ ಪೂರ್ಣಿಮಾ, ನಾಸಿಕ್ ಹೋಟೆಲ್ ಉದ್ಯಮಿ ರವೀಶ್ ಮೂಲ್ಕಿ, ದೇವಾಡಿಗ ಸಂಘ ಮುಂಬೈ ನ ಅಧ್ಯಕ್ಷ ಪ್ರವೀಣ್ ನಾರಾಯಣ್‌, ಮಾಜಿ ಅಧ್ಯಕ್ಷ ವಾಸು ದೇವಾಡಿಗ, ಉದ್ಯಮಿ ನಾಗರಾಜ್ ಪಡುಕೋಣೆ, ಕೊಲ್ಲೂರು ಕ್ಷೇತ್ರದ ವ್ಯವಸ್ಥಾಪನಾ ಮಂಡಳಿ ಸದಸ್ಯ ಆಲೂರು ರಘುರಾಮ ದೇವಾಡಿಗ, ಅಶೋಕ್ ಮೊಯಿಲಿ, ರತ್ನಾಕರ್ ಜಿ.ಎಸ್., ಹಿರಿಯಡ್ಕ ಮೋಹನ್‌ದಾಸ್, ನಿವೃತ್ತ ಪ್ರಾಂಶುಪಾಲ ಬಾಬು ದೇವಾಡಿಗ ಆಂಬ್ಲಮೊಗರು, ಕೆ.ಜೆ.ದೇವಾಡಿಗ, ದೇವಾಡಿಗರ ಸೇವಾ ಸಂಘ ಉಡುಪಿ ಇದರ ಅಧ್ಯಕ್ಷ ಗಣೇಶ್ ದೇವಾಡಿಗ ಅಂಬಲಪಾಡಿ, ಹಳೆಯಂಗಡಿ ಬಿಲ್ಲವ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್, ಮಹಿಳಾ ವೇದಿಕೆ ಅಧ್ಯಕ್ಷೆ ವಿಜಯಲಕ್ಷ್ಮಿ ಜನಾರ್ಧನ್, ಯುವವೇದಿಕೆ ಅಧ್ಯಕ್ಷ ಗಣೇಶ್ ದೇವಾಡಿಗ ಪಂಜ, ಕಟ್ಟಡ ಸಮಿತಿಯ ಪರಮೇಶ್ವರ್, ಮೀರಾ ಬಾಯಿ ಕೆ., ವಿಜಯಲಕ್ಷ್ಮಿ ಜನಾರ್ಧನ್, ರಮೇಶ್ ದೇವಾಡಿಗ ಮತ್ತಿತರರು ಇದ್ದರು.

ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಸಂತಿ ದೇವಾಡಿಗ ಪಡುಮನೆ ಹಾಗೂ ಗಂಗಾ ಡಿ. ದೇವಾಡಿಗ ಪಾವಂಜೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ನೇಹಾ ಯಾದವ ದೇವಾಡಿಗ ಹಳೆಯಂಗಡಿ ಅವರನ್ನು ಸನ್ಮಾನಿಸಲಾಯಿತು.

ಯಾದವ ದೇವಾಡಿಗ ಸ್ವಾಗತಿಸಿದರು. ಜನಾರ್ದನ್ ಪಡುಪಣಂಬೂರು ಪ್ರಾಸ್ತಾವಿಕ ಮಾತನಾಡಿದರು. ಸತೀಶ್ ಇಂದಿರಾನಗರ ವಂದಿಸಿದರು. ರಾಮದಾಸ್ ಪಾವಂಜೆ ಕಾರ್ಯಕ್ರಮ ನಿರೂಪಿಸಿದರು.

ಬೆಳಗ್ಗೆ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಭಾ ಕಾರ್ಯಕ್ರಮದ ಬಳಿಕ ಮಹಾ ಅನ್ನಸಂತರ್ಪಣೆ ಜರುಗಿತು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ