ಹಳ್ಳಿಕಾರ್ ಹಸುಗಳ ಸೌಂದರ್ಯ ಸ್ಪರ್ಧೆ

KannadaprabhaNewsNetwork |  
Published : Sep 07, 2025, 01:00 AM IST
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯಲ್ಲಿ ಹಳ್ಳಿಕಾರ್‌ ರಾಸುಗಳ ಸೌಂದರ್ಯ ಸ್ಪರ್ಧೆ ಕುರಿತ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಸಮೀಪದ ಸಪ್ಪಲಮ್ಮ ದೇವಸ್ಥಾನ ಆವರಣದಲ್ಲಿ ದಸರಾ ಹಬ್ಬದ ಅಂಗವಾಗಿ ಬರುವ ಅಕ್ಟೋಬರ್ 2ರಂದು ನವ ಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ಹಳ್ಳಿಕಾರ್ ಹಸುಗಳ ಸೌಂದರ್ಯ ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಸಮೀಪದ ಸಪ್ಪಲಮ್ಮ ದೇವಸ್ಥಾನ ಆವರಣದಲ್ಲಿ ದಸರಾ ಹಬ್ಬದ ಅಂಗವಾಗಿ ಬರುವ ಅಕ್ಟೋಬರ್ 2ರಂದು ನವ ಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ಹಳ್ಳಿಕಾರ್ ಹಸುಗಳ ಸೌಂದರ್ಯ ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ವೇದಿಕೆ ಅಧ್ಯಕ್ಷ ಹಳ್ಳಿರೈತ ಅಂಬರೀಶ್, ವಿಜಯದಶಮಿ ಅಂಗವಾಗಿ ಹಳ್ಳಿಕಾರ್ ಹಸುಗಳ ಫ್ಯಾಷನ್ ಶೋವನ್ನು ಪ್ರಸ್ತುತಪಡಿಸಲು ಉತ್ಸುಕರಾಗಿದ್ದೇವೆ.ಹಳ್ಳಿಕಾರ್ ತಳಿಯ ಸೌಂದರ್ಯ ಮತ್ತು ಅದರ ಸಾಂಸ್ಕೃತಿಕ ಮಹತ್ವವನ್ನು ಪ್ರಚಾರಗೊಳಿಸುವುದೇ ನಮ್ಮ ಗುರಿಯಾಗಿದ್ದು, ಜೊತೆಗೆ ಸ್ಥಳೀಯ ತಳಿಗಳನ್ನು ಸಂರಕ್ಷಿಸುವ ಕುರಿತು ಜಾಗೃತಿ ಮೂಡಿಸಲು ಈ ಸ್ಪರ್ಧೆ ನೆರವಾಗಲಿದೆ ಎಂದರು.

ವೇದಿಕೆ ಕಾರ್ಯದರ್ಶಿ ಉದಯ ಆರಾಧ್ಯ ಮಾತನಾಡಿ, ಕಳೆದ ವರ್ಷ ಇದೇ ಮಾದರಿಯ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದೆವು. ಬೆಂಗಳೂರು ಗ್ರಾಮಾಂತರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ನೂರಕ್ಕೂ ಹೆಚ್ಚು ಹಳ್ಳಿಕಾರ್ ಹಸುಗಳು ಭಾಗವಹಿಸಿದ್ದವು. ಈ ಯಶಸ್ಸಿನ ಹಿನ್ನೆಲೆಯಲ್ಲಿ ಮತ್ತೊಮ್ಮೆ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ಸ್ಪರ್ಧೆಯ ನಿಯಮಗಳು ಹಾಗೂ ಬಹುಮಾನಗಳ ಆಯ್ಕೆ ವಿಧಾನವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿದರು.

ವೇದಿಕೆಯ ಮಾರ್ಗದರ್ಶಕರಾದ ಅಶ್ವತ್ಥಸ್ವಾಮಿ ಮಾತನಾಡಿ, ನವ ಕರ್ನಾಟಕ ಯುವಶಕ್ತಿ ವೇದಿಕೆ ರೈತರ ಕಲ್ಯಾಣಕ್ಕಾಗಿ ಮತ್ತು ಕನ್ನಡ ಭಾಷೆ-ಸಂಸ್ಕೃತಿಯ ಉತ್ತೇಜನಕ್ಕಾಗಿ ಶ್ರಮಿಸುತ್ತಿರುವ ಯುವ ಸಂಘಟನೆ. ಸಮಾಜಮುಖಿ ಕಾರ್ಯಗಳಲ್ಲಿ ಯುವಕರ ತೊಡಗಿಸಿಕೊಳ್ಳುವಲ್ಲಿ ಇದು ಉತ್ತಮ ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಮುಖಂಡರಾದ ನಾಗರಾಜು, ಆದಿನಾರಾಯಣಪ್ಪ, ಬಾಲಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗೆ ಹಳ್ಳಿ ರೈತ ಅಂಬರೀಶ್ ಮೊ: 7259429132 ಇಲ್ಲಿಗೆ ಸಂಪರ್ಕಿಸಬಹುದು.

ಫೋಟೋ-

6ಕೆಡಿಬಿಪಿ4- ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯಲ್ಲಿ ಹಳ್ಳಿಕಾರ್‌ ರಾಸುಗಳ ಸೌಂದರ್ಯ ಸ್ಪರ್ಧೆ ಕುರಿತ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ