ಬಿಎಸ್ಸೆಸ್‌ಕೆ ಹರಾಜು ಪ್ರಕ್ರಿಯೆ ತಡೆದುಗುತ್ತಿಗೆಗೆ ನೀಡಿ, ಪುನಶ್ಚೇತನಗೊಳಿಸಿ

KannadaprabhaNewsNetwork |  
Published : Aug 20, 2026, 01:30 AM IST
ಚಿತ್ರ 19ಬಿಡಿಆರ್51 | Kannada Prabha

ಸಾರಾಂಶ

ರೈತರ ಜೀವನಾಡಿಯಾಗಿರುವ ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯ ಹರಾಜು ಪ್ರಕ್ರಿಯೆ ತಡೆದು, ಕಾರ್ಖಾನೆಯನ್ನು ಲೀಜ್‌ಗೆ ನೀಡಿ ಪುನಶ್ಚೇತನಗೊಳಿಸುವಂತೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹಾಗೂ ಹುಮನಾಬಾದ್ ಶಾಸಕ ಡಾ.ಸಿದ್ದು ಪಾಟೀಲ್ ಮನವಿ ಮಾಡಿದ್ದಾರೆ.

- ಸಚಿವರಿಗೆ ಡಾ.ಬೆಲ್ದಾಳೆ, ಡಾ.ಸಿದ್ದು ಪಾಟೀಲ್ ಮನವಿಕನ್ನಡಪ್ರಭ ವಾರ್ತೆ ಬೀದರ್

ರೈತರ ಜೀವನಾಡಿಯಾಗಿರುವ ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯ ಹರಾಜು ಪ್ರಕ್ರಿಯೆ ತಡೆದು, ಕಾರ್ಖಾನೆಯನ್ನು ಲೀಜ್‌ಗೆ ನೀಡಿ ಪುನಶ್ಚೇತನಗೊಳಿಸುವಂತೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹಾಗೂ ಹುಮನಾಬಾದ್ ಶಾಸಕ ಡಾ.ಸಿದ್ದು ಪಾಟೀಲ್ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸಕ್ಕರೆ ಮತ್ತು ಜವಳಿ ಇಲಾಖೆಯ ಸಚಿವರಾದ ರುದ್ರಪ್ಪ ಲಮಾಣಿ ಅವರಿಗೆ ಮನವಿ ಸಲ್ಲಿಸಿ, ಬಿಎಸ್‌ಎಸ್‌ಕೆ ಕಾರ್ಖಾನೆ ಹಲವು ವರ್ಷಗಳಿಂದ ಸ್ಥಗಿತಗೊಂಡಿರುವುದರಿಂದ ಈ ಭಾಗದ ಕಬ್ಬು ಬೆಳೆಗಾರರು ತೊಂದರೆ ಅನುಭವಿಸುತ್ತಿದ್ದಾರೆ. ಕಾರ್ಖಾನೆ ಪುನರಾರಂಭಗೊಂಡರೆ ಬೀದರ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಕಬ್ಬು ಬೆಳೆಗಾರರಿಗೆ ಸ್ಥಳೀಯವಾಗಿ ಮಾರುಕಟ್ಟೆ ದೊರೆಯುವುದರ ಜೊತೆಗೆ ಸಾಗಾಣಿಕೆ ವೆಚ್ಚವೂ ಕಡಿಮೆಯಾಗಲಿದೆ. ಅಲ್ಲದೆ, ಕಾರ್ಖಾನೆಯನ್ನು ಅವಲಂಬಿಸಿರುವ ಕಾರ್ಮಿಕರು ಹಾಗೂ ಸಾವಿರಾರು ಕುಟುಂಬಗಳಿಗೆ ಉದ್ಯೋಗ ಮತ್ತು ಜೀವನೋಪಾಯದ ಅವಕಾಶಗಳು ದೊರೆಯಲಿವೆ ಎಂದು ಶಾಸಕರು ಸಚಿವರ ಗಮನಕ್ಕೆ ತಂದರು.

ಬಿಎಸ್‌ಎಸ್‌ಕೆ ಕಾರ್ಖಾನೆಯನ್ನು ಹರಾಜು ಮಾಡುವ ಬದಲು ಸೂಕ್ತ ಸಂಸ್ಥೆಗೆ ಲೀಜ್ ಆಧಾರದ ಮೇಲೆ ನೀಡಿ ವೈಜ್ಞಾನಿಕ ಹಾಗೂ ಆರ್ಥಿಕವಾಗಿ ಪುನಶ್ಚೇತನ ಗೊಳಿಸುವುದು ರೈತರು ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ಸೂಕ್ತ ಕ್ರಮವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ವಿಶೇಷ ಆದ್ಯತೆ ನೀಡಿ ಅಗತ್ಯ ಕ್ರಮ ಕೈಗೊಳ್ಳ ಬೇಕು ಎಂದು ಒತ್ತಾಯಿಸಿದರು.

ಬಿಎಸ್‌ಎಸ್‌ಕೆ ಪುನಶ್ಚೇತನಗೊಂಡರೆ ಕಬ್ಬು ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ಸೌಲಭ್ಯ ದೊರೆಯುವುದರ ಜೊತೆಗೆ ನೇರ ಹಾಗೂ ಪರೋಕ್ಷ ಉದ್ಯೋಗಾವ ಕಾಶಗಳು ಹೆಚ್ಚಾಗಲಿವೆ. ಇದರಿಂದ ಬೀದರ್ ಜಿಲ್ಲೆಯ ವ್ಯಾಪಾರ, ಸಾರಿಗೆ ಹಾಗೂ ಸಣ್ಣ ಕೈಗಾರಿಕೆಗಳು ಸೇರಿದಂತೆ ಒಟ್ಟಾರೆ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.

--

ಚಿತ್ರ 19ಬಿಡಿಆರ್51:

ಬಿಎಸ್‌ಎಸ್‌ಕೆ ಹರಾಜು ಪ್ರಕ್ರಿಯೆ ತಡೆದು ಲೀಜ್‌ಗೆ ನೀಡಿ ಪುನಶ್ಚೇತನಗೊಳಿಸಲು ಶಾಸಕರಿಂದ ಸಚಿವರಿಗೆ ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತರಾಗದಿರಲಿ: ಶಾಸಕ ಸಿ.ಬಿ.ಸುರೇಶ್‌ಬಾಬು
ರಸ್ತೆ ಮಾರ್ಜಿನ್ ನಿಂದ 30 ಅಡಿ ಬಿಟ್ಟು ಮನೆ ಕಟ್ಟಲು ಅನುಮತಿಸಿ: ಖಾತೆದಾರರ ಆಗ್ರಹ