ಹಾವೇರಿ: ಕಾರಣಿಕ ಯುಗಪುರುಷ ಹಾನಗಲ್ಲ ಕುಮಾರ ಶಿವಯೋಗಿಗಳ ೧೫೮ನೇ ಜಯಂತ್ಯುತ್ಸವ ಅಂಗವಾಗಿ ನಗರದಲ್ಲಿ ಸೋಮವಾರ ಸಂಜೆ ಕುಮಾರ ಶಿವಯೋಗಿಗಳ ಭಾವಚಿತ್ರ ಮೆರವಣಿಗೆ ನಡೆಯಿತು.ನಗರದ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಮೆರವಣಿಗೆಗೆ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಗೌರಿಮಠದ ಶಿವಯೋಗಿ ಶಿವಾಚಾರ್ಯರು, ಹರಸೂರು ಬಣ್ಣದಮಠದ ಅಭಿನವರುದ್ರ ಚೆನ್ನಮಲ್ಲಿಕಾರ್ಜುನ ಶ್ರೀಗಳು, ಕೂಡಲದ ಗುರುಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಹೇರೂರು ಗುಬ್ಬಿ ನಂಜುಂಡೇಶ್ವರ ಮಠದ ಗುಬ್ಬಿ ನಂಜುಂಡ ಪಂಡಿತರಾಧ್ಯ ಶ್ರೀಗಳು, ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿಯವರು ಚಾಲನೆ ನೀಡಿದರು.ವೀರಭದ್ರೇಶ್ವರ ದೇವಸ್ಥಾನದಿಂದ ಆರಂಭವಾದ ಮೆರವಣಿಗೆಯು ಹಳೆ ಕೋರ್ಟ್, ಎಂ.ಜಿ. ವೃತ್ತ, ಮಹಾತ್ಮ ಗಾಂಧಿ, ದ್ಯಾಮವ್ವನಗುಡಿ ಪಾದಗಟ್ಟಿ ಮಾರ್ಗ ಸೇರಿದಂತೆ ವಿವಿಧೆಡೆ ಸಂಚರಿಸಿ ಹುಕ್ಕೇರಿಮಠವನ್ನು ತಲುಪಿತು.
ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶೋಷಿತರ ಅಭಿವೃದ್ಧಿ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು 110ನೇ ಜನ್ಮದಿನಾಚರಣೆ ಕಾರ್ಯಕ್ರಮ ಆ. 20ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಗುರುಭವನದಲ್ಲಿ ಜರುಗಲಿದೆ.
ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 9 ಗಂಟೆಗೆ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಡಿ. ದೇವರಾಜ ಅರಸು ಭಾವಚಿತ್ರ ಮೆರವಣಿಗೆ ಹೊರಡಲಿದೆ.ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹಾಗೂ ಲೋಕಸಭಾ ಸದಸ್ಯ ಬಸವರಾಜ ಬೊಮ್ಮಾಯಿ ಉಪಸ್ಥಿತರಿರುವರು. ಶಾಸಕರು ಹಾಗೂ ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.