ಕನ್ನಡಪ್ರಭ ವಾರ್ತೆ ಬ್ಯಾಡಗಿ
ತಾಲೂಕಿನ ಚಿಕ್ಕಬಾಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಮುದಾಯದ ಮಹಿಳೆಯಾಗಿದ್ದರೂ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ರಾಜ್ಯದ ಸರ್ಕಾರದ ಪೊಲೀಸ್ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ಇದರಿಂದ ರಾಜ್ಯದ ಜನತೆ ತಲೆ ತಗ್ಗಿಸುವಂತಾಗಿದೆ ಎಂದರು.
ತುಷ್ಟೀಕರಣದ ಮುಂದುವರಿದ ಭಾಗ: ಹಾನಗಲ್ಲನಲ್ಲಿ ಇತ್ತೀಚೆಗೆ ಮೆರವಣಿಗೆ ಸ್ಥಗಿತಗೊಳಿಸಿದ್ದು, ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ (ರಾಮಭಕ್ತನ) ವಿರುದ್ಧ ಪೊಲೀಸ್ ದೌರ್ಜನ್ಯ ಹಾಗೂ ಇಂದಿನ ಗ್ಯಾಂಗ್‌ರೇಪ್ ಪ್ರಕರಣಗಳು ಅಲ್ಪಸಂಖ್ಯಾತರ ತುಷ್ಟೀಕರಣದ ಮುಂದುವರಿದ ಭಾಗವಾಗಿವೆ ಎಂದರು.ಘಟನೆ ನಡೆದು ನಾಲ್ಕೈದು ದಿನಗಳಾದರೂ ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ಆಗಿಲ್ಲ. ವಿಡಿಯೋ ಹೊರಬಂದ ಬಳಿಕವಷ್ಟೇ ಎಫ್‌ಐಆರ್ ಹಾಗೂ ಇತರ ಕೆಲಸ ನಡೆಯುತ್ತಿದ್ದು, ಒಂದು ಸಮುದಾಯದ ಯುವಕರಿಗೆ ನಾವು ಏನು ಮಾಡಿದರೂ ನಮಗೆ ರಕ್ಷಣೆ ಸಿಗಲಿದೆ ಎಂಬ ಮೌಖಿಕ ಸಂದೇಶಗಳು ರವಾನೆಯಾಗುತ್ತಿದೆ. ನಾಳೆಯ ದಿವಸ ಇನ್ನೂ ಏನೇನು ನಡೆಯುತ್ತವೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ ಎಂದರು.
ಸಂತ್ರಸ್ತೆಗೆ ಶಾಸಕ ಬಸವರಾಜ ಶಿವಣ್ಣನವರ ಸಾಂತ್ವನ:
ಶನಿವಾರ ಮಹಿಳಾ ಸಾಂತ್ವನ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಮಹಿಳೆಗೆ ಪರಿಹಾರ ನೀಡುವ ಜತೆಗೆ ಧೈರ್ಯದಿಂದ ಇರುವಂತೆ ಹೇಳಿದ್ದೇವೆ. ಈ ಘಟನೆ ನಡೆದಿರುವುದು ಬಹಳ ನೋವಿನ ಸಂಗತಿಯಾಗಿದೆ. ಸರಿಯಾದ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಪೊಲೀಸರು ಈಗಾಗಲೇ ಕೆಲವರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುತ್ತಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆಯ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಇತರರು ಇದ್ದರು.