ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಕೈ ಗೆಲುವು: ಎಚ್‌.ಕೆ. ಪಾಟೀಲ

KannadaprabhaNewsNetwork |  
Published : Oct 22, 2023, 01:00 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಹಾವೇರಿಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಶಾಲಿಯಾಗಿದ್ದು, ಹಾವೇರಿ ಸೇರಿ ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಕಾನೂನು ಸಂಸದೀಯ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಜನರ ವಿಶ್ವಾಸಗಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಸರ್ವಾನುಮತದ ಒಗ್ಗಟ್ಟಿನ ಮಂತ್ರ ಪಕ್ಷವನ್ನು ಗೆಲ್ಲಿಸುತ್ತದೆ. ಮೋದಿ ಅವರಿಗೆ ನಮ್ಮ ರಾಜ್ಯದಲ್ಲಿ ಸುಳ್ಳು ಹೇಳಿ ಒಲಿಸಿಕೊಳ್ಳಲು ಸಾಧ್ಯವಾಗಲಿಲ್ಲ, ಮಹಾ ಸುಳ್ಳು ಹೇಳುವ ಮೋದಿ ಅವರನ್ನು ಈ ಸಾರಿ ಚುನಾವಣೆಯಲ್ಲಿ ಜನತೆ ಕೆಳಗಿಳಿಸಲಿದ್ದಾರೆ ಎಂದರು.

ಕನ್ನಡಪ್ರಭ ವಾರ್ತೆ ಹಾವೇರಿ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಶಾಲಿಯಾಗಿದ್ದು, ಹಾವೇರಿ ಸೇರಿ ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಕಾನೂನು ಸಂಸದೀಯ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಜನರ ವಿಶ್ವಾಸಗಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಸರ್ವಾನುಮತದ ಒಗ್ಗಟ್ಟಿನ ಮಂತ್ರ ಪಕ್ಷವನ್ನು ಗೆಲ್ಲಿಸುತ್ತದೆ. ಮೋದಿ ಅವರಿಗೆ ನಮ್ಮ ರಾಜ್ಯದಲ್ಲಿ ಸುಳ್ಳು ಹೇಳಿ ಒಲಿಸಿಕೊಳ್ಳಲು ಸಾಧ್ಯವಾಗಲಿಲ್ಲ, ಮಹಾ ಸುಳ್ಳು ಹೇಳುವ ಮೋದಿ ಅವರನ್ನು ಈ ಸಾರಿ ಚುನಾವಣೆಯಲ್ಲಿ ಜನತೆ ಕೆಳಗಿಳಿಸಲಿದ್ದಾರೆ ಎಂದರು. ಕೇಂದ್ರ ಸರ್ಕಾರ ರಾಜ್ಯದ ನೀರಾವರಿ ಯೋಜನೆಗಳಾದ ಕಾವೇರಿ, ಕೃಷ್ಣಾ, ಮಹದಾಯಿ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿದೆ. ಮುಂಬರುವ ದಿನಗಳಲ್ಲಿ ಬಿಜೆಪಿಗೆ ಭ್ರಮನಿರಸನ ಆಗುವಂತೆ ಜನತೆ ತೀರ್ಮಾನ ಮಾಡುತ್ತಾರೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ಇಂಡಿಯಾ ಆದ ಮೇಲೆ ಬಿಜೆಪಿ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ವಿಪಕ್ಷ ನಾಯಕನನ್ನು ಮಾಡಲು ಬಿಜೆಪಿಗೆ ಆಗುತ್ತಿಲ್ಲ, ಕಾಂಗ್ರೆಸ್ಸಿನಲ್ಲಿ ಬಣವಿಲ್ಲ, ವ್ಯತ್ಯಾಸ ಇಲ್ಲ, ಇದೆಲ್ಲ ಬಿಜೆಪಿ ಸೃಷ್ಟಿ ಎಂದರು. ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮಾತನಾಡಿ, ಹಾವೇರಿ ಲೋಕಸಭಾ ಕ್ಷೇತ್ರದ ಪೂರ್ವಭಾವಿ ಸಭೆ ಮಾಡಲು ಬಂದಿದ್ದೇವೆ. ಜಿಲ್ಲೆಯಲ್ಲಿ ಮೂರು ಬಾರಿ ಕಾಂಗ್ರೆಸ್ ಸೋತಿದೆ. ಹೀಗಾಗಿ ಈ ಸಾರಿ ನನ್ನನ್ನು ವೀಕ್ಷಕರನ್ನಾಗಿ ಹಾಕಿದ್ದಾರೆ. ಈ ಬಾರಿ ಗೆಲ್ಲಬೇಕಾಗಿದೆ. ಅದಕ್ಕಾಗಿ ಪೂರ್ವಭಾವಿ ಸಭೆ ಮಾಡುತ್ತಿದ್ದೇವೆ ಎಂದರು. ಮೋದಿ ಬರೀ ಸುಳ್ಳು ಹೇಳುತ್ತಾ ೧೦ವರ್ಷ ಕಳೆದಿದ್ದಾರೆ. ಸುಳ್ಳು ಹೇಳುವುದರಲ್ಲಿ ಆಸ್ಕರ್ ಅವಾರ್ಡ್ ಕೊಡುವುದಾದರೆ ಅದನ್ನು ಪ್ರಧಾನಿ ಮೋದಿ ಅವರಿಗೆ ನೀಡಬೇಕು. ಜನರ ಖಾತೆಗೆ ₹೧೫ ಲಕ್ಷ ಹಾಕುತ್ತೇವೆ ಎಂದು ಹೇಳಿ ಈವರೆಗೂ ₹೧೫ ರುಪಾಯಿ ಹಾಕಿಲ್ಲ, ಯುವಕರಿಗೆ ಉದ್ಯೋಗ ಕೊಟ್ಟಿಲ್ಲ, ಹಾವೇರಿ ಕ್ಷೇತ್ರದಿಂದ ಯಾರಿಗೇ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುತ್ತೇವೆ. ಬಿಜೆಪಿ ಬಗ್ಗೆ ಜನತೆ ಭ್ರಮನಿರಸನಗೊಂಡಿದ್ದು, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದು ರಾಹುಲ್‌ಗಾಂಧಿ ಪ್ರಧಾನಿ ಆಗಲಿದ್ದಾರೆ. ಸಲೀಂ ಅಹ್ಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲು ಸಾಲು ರಜೆ, ಪ್ರವಾಸಿ ತಾಣ ರಷ್‌
ಭೂಮಿ ಮಾರಿದ ಇನ್ಫಿ ಬಗ್ಗೆ ಕಾರ್ತಿ ತೀವ್ರ ಆಕ್ರೋಶ