ಕನ್ನಡಪ್ರಭ ವಾರ್ತೆ ಹುಣಸಗಿ
ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯ ಬಳಸಿಕೊಂಡು ಕಲಿಕೆಗೆ ಅಗತ್ಯವಾಗಿರುವ ವಸ್ತುಗಳನ್ನು ತಯಾರಿಸುತ್ತಾರೆ. ಅವರಿಗೆ ಕರಕುಶಲ ಕಲೆಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಿದಲ್ಲಿ ಇನ್ನೂ ಹೆಚ್ಚು ಸಕ್ರೀಯವಾಗಿ ಚಟುವಟಿಕೆಗಳಲ್ಲಿ ತೊಡಿಕೊಳ್ಳುತ್ತಾರೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಮುಖ್ಯಸ್ಥ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ, ನಮ್ಮ ಭಾಗದಲ್ಲಿ ನಮ್ಮ ಹಿರಿಯರು ಅಪ್ರತಿಮ ಸಾಧಕರಾಗಿದ್ದಾರೆ. ಈ ಕುರಿತು ವಿದ್ಯಾರ್ಥಿಗಳು ತಿಳಿದುಕೊಂಡು ನಮ್ಮ ಭಾಗದಲ್ಲಿರುವ ಕಲೆ ಮತ್ತು ಸಂಸ್ಕೃತಿ ಉಳಿಸಿಕೊಳ್ಳುವ ಮೂಲಕ ನಮ್ಮ ತನವನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಆರು ವಿವಿಧ ಕರಕುಶಲ ಕಲೆಗಳ ನೇರ ಪ್ರಾತ್ಯಕ್ಷಿಕೆ ನೀಡಲಾಯಿತು. ಕರಕುಶಲ ಕಲಾವಿದರು ತಮ್ಮ ತಮ್ಮ ಕಲೆಯ ವಿಶೇಷತೆ, ತಯಾರಿಕಾ ವಿಧಾನ ಹಾಗೂ ಕಲೆಗಳ ಪರಂಪರೆಯ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.ವಿವಿಧ ಕಲೆಗಳ ಪ್ರಾತ್ಯಕ್ಷಿಕೆ: ಗಾಯತ್ರಿ.ಸಿ. ಅವರು ಕಲ್ಲು ಕೆತ್ತನೆ ಕಲೆಯ ಕುರಿತು, ಶ್ರೀವಿದ್ಯಾ ಗ್ಲಾಸ್ ಪೇಂಟಿಂಗ್ ಕಲೆಯ ಪ್ರಾತ್ಯಕ್ಷಿಕೆ ನೀಡಿದರು. ಪ್ರಶಾಂತ ಶಹಾಪುರ ಅವರು ಮಣ್ಣಿನ ಅಚ್ಚು, ಮಣ್ಣಿನ ಮಾದರಿ ತಯಾರಿಕೆ ಕಲೆಗಳ ಕುರಿತು ತಿಳಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಲಾವಿದರೊಂದಿಗೆ ಸಂವಾದ ನಡೆಸಿ, ಕರಕುಶಲ ವಸ್ತುಗಳ ತಯಾರಿಕೆಯಲ್ಲಿ ಬಳಸುವ ವಿವಿಧ ಸಾಮಗ್ರಿಗಳು, ಉಪಕರಣಗಳು ಮತ್ತು ತಂತ್ರಗಳ ಕುರಿತು ಮಾಹಿತಿ ಪಡೆದರು.