ಇಂಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯಡಿ ಹೇಮಾವತಿ ಅಮ್ಮನವರ ಕನಸಿನ ಕೂಸು ವಾತ್ಸಲ್ಯ ಮನೆಯನ್ನು ತಾಲೂಕಿನ ಮಿರಗಿ ಗ್ರಾಮದಲ್ಲಿ ಶಕುಂತಲಾ ಭೀಮರಾಯ ಬಡಿಗೇರ ಅವರಿಗೆ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ, ಗ್ರಾಮೀಣ ಭಾಗದಲ್ಲಿ ವಾಸಿಸುವ ಅತ್ಯಂತ ಕಡು ಬಡವರನ್ನು ಗುರುತಿಸಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವಾತ್ಸಲ್ಯ ಮನೆಗಳನ್ನು ನಿರ್ಮಿಸಿ ಸೂರು ಕಲ್ಪಿಸುತ್ತಿದ್ದಾರೆ.
ಕನ್ನಡಪ್ರಭ ವಾರ್ತೆ ಇಂಡಿ:
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯಡಿ ಹೇಮಾವತಿ ಅಮ್ಮನವರ ಕನಸಿನ ಕೂಸು ವಾತ್ಸಲ್ಯ ಮನೆಯನ್ನು ತಾಲೂಕಿನ ಮಿರಗಿ ಗ್ರಾಮದಲ್ಲಿ ಶಕುಂತಲಾ ಭೀಮರಾಯ ಬಡಿಗೇರ ಅವರಿಗೆ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ, ಗ್ರಾಮೀಣ ಭಾಗದಲ್ಲಿ ವಾಸಿಸುವ ಅತ್ಯಂತ ಕಡು ಬಡವರನ್ನು ಗುರುತಿಸಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವಾತ್ಸಲ್ಯ ಮನೆಗಳನ್ನು ನಿರ್ಮಿಸಿ ಸೂರು ಕಲ್ಪಿಸುತ್ತಿದ್ದಾರೆ. ಅಲ್ಲದೆ ಪ್ರತಿ ತಿಂಗಳು ಮಾಸಾಶಸವನ್ನು ನೀಡುತ್ತಿದ್ದಾರೆ ಎಂದು ಹೇಳಿದ ಅವರು, ಅತಿ ಸಣ್ಣ ರೈತರ ಆರ್ಥಿಕ ಸಬಲೀಕರಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಇಂದು ದೇಶದ ಪ್ರಮುಖ ಸ್ವಯಂ ಸೇವಾ ಸಂಸ್ಥೆಯಲ್ಲೊಂದಾಗಿದೆ. ಸುಮಾರು 40 ವರ್ಷಗಳ ಸುದೀರ್ಘ ಪ್ರಯಾಣದಲ್ಲಿ ಹತ್ತು ಹಲವಾರು ಕಾರ್ಯಕ್ರಮ ಆಯೋಜಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಾರ್ಯಕ್ರಮ ಆಯೋಜಿಸುತ್ತ ಬಂದಿದ್ದು, ಮಹಿಳಾ ಸಬಲೀಕರಣದೊಂದಿಗೆ ಸ್ವಾವಲಂಬನೆಯ ಬದುಕು, ಪಾಲುದಾರರ ಕುಟುಂಬಗಳ ಏಳ್ಗೆಗೆ ಕಾರಣವಾಗಿದೆ ಎಂದು ಹೇಳಿದರು.ನ್ಯಾಯವಾದಿ ಸೋಮಶೇಖರ ನಿಂಬರಗಿಮಠ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಹಾಗೂ ನಿರ್ಗತಿಕರಿಗೆ ಸೂರು ಕಲ್ಪಿಸುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯ ಶ್ಲಾಘನೀಯವಾದದ್ದು ಎಂದರು. ಯೋಜನೆಯ ಮೂಲಕ ಸಾಲ ಸೌಲಭ್ಯ ಪಡೆದು ಮಹಿಳೆಯರು ಸಂಘಟಿತರಾಗಿ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದರು.
ಈ ವೇಳೆ ಇಂಡಿ ತಾಲೂಕ ಯೋಜನಾಧಿಕಾರಿ ನಟರಾಜ, ಗ್ರಾಪಂ ಅಧ್ಯಕ್ಷ ಬಸವರಾಜ ಹೊರ್ತಿ, ಜ್ಞಾನ ವಿಕಾಸ ಯೋಜನಾಧಿಕಾರಿ ಶಕುಂತಲಾ, ಕವಿಗ್ರಾ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಅಶೋಕ, ಜ್ಞಾನ ವಿಕಾಸ ತಾಲೂಕ ಸಮನ್ವಯಾಧಿಕಾರಿ ಜಯಶ್ರೀ, ವಲಯದ ಮೇಲ್ವಿಚಾರಕಿ ಗೀತಾ, ಗ್ರಾಪಂ ಸದಸ್ಯ ಶ್ರೀಶೈಲ ಮದರಿ, ರಾಜು ದೇವರಮನಿ, ಬಸವರಾಜ ಖಸ್ಕಿ, ದೇವೆಂದ್ರ ಬರಡೋಲ, ಶರಣಬಸು ಶ್ರೀಗಿರಿ, ಒಕ್ಕೂಟದ ಅಧ್ಯಕ್ಷೆ ನಾಗರತ್ನ ಅತನೂರ, ಗೀತಾ ಶಿವಾನಂದ ಕಲಶೆಟ್ಟಿ, ಶಾಂತಾ ರೋಡಗಿ, ಭಾಗ್ಯಶ್ರೀ ರೋಡಗಿ, ಪ್ರದೀಪ, ಸೇವಾ ಪ್ರತಿನಿಧಿ ರೇಖಾ ಕಲಶೆಟ್ಟಿ ಮೊದಲಾದವರು ಈ ಸಂದರ್ಭದಲ್ಲಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.