ದೇಗುಲಗಳ ಅಭಿವೃದ್ಧಿಗೆ ಧನ ಸಹಾಯದ ಚೆಕ್ ಹಸ್ತಾಂತರ

KannadaprabhaNewsNetwork |  
Published : Oct 26, 2026, 01:30 AM IST
25 ದೇವನಹಳ್ಳಿ 01 | Kannada Prabha

ಸಾರಾಂಶ

ದೇವನಹಳ್ಳಿ: ನಲ್ಲೂರು ಮತ್ತು ಆವತಿ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ದೇವಾಲಯ ಅಭಿವೃದ್ಧಿಗೆ ಧನ ಸಹಾಯ ಮಾಡಿದ್ದೇನೆ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು

ದೇವನಹಳ್ಳಿ: ನಲ್ಲೂರು ಮತ್ತು ಆವತಿ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ದೇವಾಲಯ ಅಭಿವೃದ್ಧಿಗೆ ಧನ ಸಹಾಯ ಮಾಡಿದ್ದೇನೆ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ಮಾಜಿ ಶಾಸಕರ ನಿವಾಸದಲ್ಲಿ ದೇವಾಲಯ ಅಭಿವೃದ್ಧಿಗೆ ಧನ ಸಹಾಯ ಚೆಕ್ ಹಸ್ತಾಂತರಿಸಿ ಮಾತನಾಡಿದ ಅವರು, ದೇವನಹಳ್ಳಿ ತಾಲೂಕು ದಿನೆದಿನೇ ಬೃಹದಾಕಾರವಾಗಿ ಬೆಳೆಯುತ್ತಿದ್ದು ವಿವಿಧ ರಾಜ್ಯಗಳಿಂದ ವಲಸೆ ಬಂದ ಜನ ನೆಲೆಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ೩ ವರ್ಷ ಕಳೆದಿದೆ. ದೇವನಹಳ್ಳಿ ಕ್ಷೇತ್ರದಿಂದ ಗೆದ್ದು ಸಚಿವರಾಗಿರುವ ಕೆ.ಎಚ್.ಮುನಿಯಪ್ಪನವರು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರು ಬಡವರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿರುವುದೇ ಅವರ ಬಹುದೊಡ್ಡ ಸಾಧನೆಯಾಗಿದೆ. ಕಳೆದ ೨.೬ ವರ್ಷದಲ್ಲಿ ಒಂದು ಬಿಪಿಎಲ್ ಕಾರ್ಡ್‌ ನೀಡಿಲ್ಲ, ಶಾಸರಾಗಿ ಗೆದ್ದ ತಾಲೂಕಿನ ಪರಿಸ್ಥಿತಿ ಈ ಪರಿಯಾದರೆ ರಾಜ್ಯದ ಪರಿಸ್ಥಿತಿ ಏನು? ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಆರೋಪಿಸಿದರು.ಕೆಲ ಗ್ರಾಮಸ್ಥರಿಗೆ ಶಾಸಕರು ಯಾರೆಂಬುದೇ ಗೊತ್ತಿಲ್ಲ. ಜನರು ಅವರ ಕಷ್ಟಗಳನ್ನು ಯಾರ ಬಳಿ ಹೇಳಿಕೊಳ್ಳಬೇಕೆಂದೇ ಗೊತ್ತಿಲ್ಲ. ನಾನು ಮಾಜಿ ಶಾಸಕನಾಗಿರುವುದರಿಂದ ಅನೇಕ ಗ್ರಾಮಗಳ ಸಾರ್ವಜನಿಕರು ಈಗಲು ನನಗೆ ಕರೆ ಮಾಡಿ ಅವರ ಕಷ್ಟಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಈಗ ಕೆ.ಎಚ್.ಮುನಿಯಪ್ಪನವರಿಗೆ ಸಮಾಜ ಕಲ್ಯಾಣ ಇಲಾಖೆ ಖಾತೆಯನ್ನು ಸರಕಾರ ನೀಡಿದೆ. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಕ್ಕೆ ಸೇರಬೇಕಿದ್ದ ಸೌಲಭ್ಯವನ್ನು ಎಲ್ಲಾ ವರ್ಗದವರಿಗೂ ನೀಡುತ್ತಿದ್ದಾರೆ. ಸರ್ಕಾರ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಪರವಾಗಿದ್ದೇವೆ ಎಂದು ಹೇಳುತ್ತಾರೆ. ಕೆ.ಎಚ್.ಮುನಿಯಪ್ಪನವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ೬ ತಿಂಗಳು ಕಳೆದಿದ್ದು ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಅಭಿವೃದ್ಧಿಗೆ ಯಾವ ಯೋಜನೆಗಳನ್ನು ತಂದಿದ್ದಾರೆ ಎಂದು ಅವರೆ ಉತ್ತರ ಕೊಡಬೇಕು. ನಾನು ಶಾಸಕನಾಗಿದ್ದಾಗ ಪ್ರತಿ ಹಳ್ಳಿಗೆ ೫೦ ಲಕ್ಷದಿಂದ ೧ ಕೋಟಿ ಅನುದಾನ ನೀಡಿ ಗ್ರಾಮಗಳನ್ನು ಅಭಿವೃದ್ಧಿಪಡಿಸಿದ್ದೆ. ಸಚಿವರು ಯಾವ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಯಾರಿಗೂ ತಿಳಿಯುತ್ತಿಲ್ಲ, ಅಭಿವೃದ್ಧಿ ಕೆಲಸದಲ್ಲಿ ಕಾಂಗ್ರೆಸ್ ಸರ್ಕಾರ ಶೂನ್ಯ ಎಂದು ಟೀಕಿಸಿದರು.

೨೫ ದೇವನಹಳ್ಳಿ ಚಿತ್ರಸುದ್ದಿ:೦೧

ದೇವನಹಳ್ಳಿಯಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ನಿವಾಸದಲ್ಲಿ ದೇವಾಲಯಗಳ ಜೀರ್ಣೊದ್ಧಾರಕ್ಕೆ ಧನ ಸಹಾಯಕದ ಚೆಕ್ ಹಸ್ತಾಂತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಶಾಲೆಗಳ ಬಲವರ್ಧನೆ ನಮ್ಮೆಲ್ಲರ ಜವಾಬ್ದಾರಿ
ಕಾಡಾನೆ ಹಾವಳಿ ತಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ