ಕರಡು ಮತದಾರರ ಪಟ್ಟಿ ಹಸ್ತಾಂತರ

KannadaprabhaNewsNetwork |  
Published : Aug 25, 2026, 02:00 AM IST
24ಎಚ್ಎಸ್ಎನ್7 | Kannada Prabha

ಸಾರಾಂಶ

ನೋಟಿಸ್ ಪಡೆದ ಮತದಾರರು ನಿಗದಿತ ಸ್ಥಳ, ಸಮಯ, ದಿನಾಂಕದಂದು ವಿಚಾರಣೆಗೆ ಹಾಜರಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೆ ಸಹಕರಿಸುವಂತೆ ತಿಳಿಸಿ ಎಂದು ಹೇಳಿದರು. ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಸಹ ಅರ್ಜಿ ನಮೂನೆ ೬ ರೊಂದಿಗೆ ಅಗ್ಯತ ದಾಖಲೆಗಳನ್ನು ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿರುತ್ತದೆ. ಅದೇ ರೀತಿ ದಿನಾಂಕ ೦೧-೧೦-೨೦೨೬ಕ್ಕೆ ೧೮ ವರ್ಷ ತುಂಬುವವರು ಕೂಡ ಅರ್ಜಿ ನಮೂನೆ ೬ ಸಲ್ಲಿಸಬಹುದಾಗಿದೆ ಎಂದು ಹೇಳಿದರು.

ಹಾಸನ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನೆಡೆದಿದ್ದು, ಸೋಮವಾರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಇಂದಿನಿಂದ ಸೆ.೨೩ರವರೆಗೆ ಅವಕಾಶವಿದ್ದು, ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಕೆ ಎಸ್ ಲತಾಕುಮಾರಿ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಕರಡು ಮತದಾರರ ಪಟ್ಟಿಯನ್ನು ಹಸ್ತಾಂತರಿಸಿ ಮಾತನಾಡಿದ ಅವರು, ಇಂದಿನಿಂದ ಅಕ್ಟೋಬರ್‌ ೨೨ರವರೆಗೂ ನೋಟಿಸ್ ಅವಧಿ ಹಾಗೂ ವಿಲೇವಾರಿ ಪ್ರಕೀಯೆ ಇರುತ್ತದೆ ಎಂದು ತಿಳಿಸಿದರಲ್ಲದೆ, ಅಕ್ಟೋಬರ್‌ ೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಮಾಡಲಾಗುತ್ತದೆ ಎಂದರು. ನೋಟಿಸ್ ಪಡೆದ ಮತದಾರರು ನಿಗದಿತ ಸ್ಥಳ, ಸಮಯ, ದಿನಾಂಕದಂದು ವಿಚಾರಣೆಗೆ ಹಾಜರಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೆ ಸಹಕರಿಸುವಂತೆ ತಿಳಿಸಿ ಎಂದು ಹೇಳಿದರು. ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಸಹ ಅರ್ಜಿ ನಮೂನೆ ೬ ರೊಂದಿಗೆ ಅಗ್ಯತ ದಾಖಲೆಗಳನ್ನು ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿರುತ್ತದೆ. ಅದೇ ರೀತಿ ದಿನಾಂಕ ೦೧-೧೦-೨೦೨೬ಕ್ಕೆ ೧೮ ವರ್ಷ ತುಂಬುವವರು ಕೂಡ ಅರ್ಜಿ ನಮೂನೆ ೬ ಸಲ್ಲಿಸಬಹುದಾಗಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಚುನಾವಣಾ ಶಾಖೆಯ ತಹಶೀಲ್ದಾರ್ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆದ್ದಾರಿ ಸೇತುವೆ ದುರಸ್ತಿ ಮರೀಚಿಕೆ
ಜನಸಾಮಾನ್ಯರ ಕೆಲಸ ಮಾಡಿಕೊಡಲು ಪಕ್ಷ ಭೇದ ಬೇಡ: ಡಾ.ಕೆ.ಸುಧಾಕರ್