ಕನ್ನಡಪ್ರಭ ವಾರ್ತೆ ಮಸ್ಕಿ
ತಾಲೂಕಿನ ಮೆದಕಿನಾಳ ಗ್ರಾಮದಲ್ಲಿ ತಾಲೂಕು ಆಡಳಿತದ ವತಿಯಿಂದ ಪ್ರಜಾಸೇವಾ ಅಭಿಯಾನ, ನೂತನ ಕಂದಾಯ ಗ್ರಾಮಗಳ ಹಕ್ಕುಪತ್ರ ವಿತರಣೆ ಹಾಗೂ ಗ್ಯಾರಂಟಿ ಯೋಜನೆಗಳ ‘ನಡೆ ಗ್ರಾಮ ಪಂಚಾಯತ್ ಕಡೆ’ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಯಾವುದೇ ಬೇಧವಿಲ್ಲದೇ ಗ್ಯಾರಂಟಿ ಯೋಜನೆ ಎಲ್ಲರಿಗೂ ತಲುಪಿಸಿದೆ. ಮಳೆ ಇಲ್ಲದೇ ಬರಗಾಲ ಅವರಿಸಿದ್ದು ಇದರಿಂದ ಗ್ರಾಮೀಣ ಭಾಗದ ರೈತರು ತೊಂದರೆ ಅನುಭವಿ ಸುವಂತಾಗುತ್ತಿದೆ. ಸರ್ಕಾರ ನಿಮ್ಮೊಂದಿಗೆ ಇರುತ್ತದೆ ಯಾವುದೇ ಕಾರಣಕ್ಕೂ ಎದೆಗುಂದಬಾರದು ಎಂದರು.
ನಂತರ ತಹಸೀಲ್ದಾರ್ ಮಂಜುನಾಥ್ ಭೋಗಾವತಿ ಮಾತನಾಡಿ,ಮಸ್ಕಿ ತಾಲೂಕಿನಲ್ಲಿ ಒಟ್ಟು 25 ಗ್ರಾಮಗಳನ್ನು ನೂತನ ಕಂದಾಯ ಗ್ರಾಮಗಳನ್ನಾಗಿ ಮಾಡ ಲಾಗಿದೆ. ಈ ಪೈಕಿ 18 ಗ್ರಾಮಗಳ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಳಿದ ಗ್ರಾಮಗಳ ಹಕ್ಕುಪತ್ರ ವಿತರಣೆಯನ್ನೂ ಮುಂದಿನ ದಿನಗಳಲ್ಲಿ ಶಾಸಕರ ಮುತುವರ್ಜಿಯಿಂದ ಪೂರ್ಣಗೊಳಿಸಲಾಗುವುದು” ಎಂದು ತಿಳಿಸಿದರು.ಎಪಿಎಂಸಿ ಅಧ್ಯಕ್ಷ ಸಿದ್ದನಗೌಡ ಮಾಟೂರು ಮಾತನಾಡಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಮಹಿಬೂಬಸಾಬ್ ಮುದ್ದಾಪುರ, ಎಪಿಎಂಸಿ ಅಧ್ಯಕ್ಷ ಸಿದ್ದನಗೌಡ ಮಾಟೂರ, ತಹಸೀಲ್ದಾರ್ ಮಂಜುನಾಥ್ ಭೋಗಾವತಿ, ತಾಲೂಕು ಪಂಚಾಯಿತಿ ಇಒ ಶಿವಾನಂದ ರೆಡ್ಡಿ, ಸಿಪಿಐ ರಾಮಣ್ಣ ಜಲಗೇರಿ, ಜೆಸ್ಕಾಂ ಅಧಿಕಾರಿ ವೆಂಕಟೇಶ್, ಸೋಮನಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ಯಾರಂಟಿ ಸಮಿತಿ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.