ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ನಿಭಾಯಿಸುವುದು ಸುಲಭವಲ್ಲ

KannadaprabhaNewsNetwork |  
Published : Oct 30, 2026, 02:00 AM IST
28ಸಿಎಚ್‌ಎನ್‌52ಚಾಮರಾಜನಗರ ಜಿಲ್ಲಾ ವೀಕ್ಷಕಿ  ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಪ್ಪಾ ಅಮರನಾಥ್ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಎರಡು ಬ್ಲಾಕ್‌ಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಕೆಪಿಸಿಸಿ ಆದೇಶದ ಮೇರೆಗೆ ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಸಂಬಂಧ ಹಲವು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಪುಷ್ಪಾ ಅಮರನಾಥ್ ಕನ್ನಡಪ್ರಭವಾರ್ತೆ ಚಾಮರಾಜನಗರ

ಜಿಲ್ಲಾ ಕಾಂಗ್ರೆಸ್‌ನಲ್ಲಿ ಎರಡು ಬ್ಲಾಕ್‌ಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಸಂಬಂಧ ಚಾಮರಾಜನಗರ ಜಿಲ್ಲಾ ವೀಕ್ಷಕಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆಕಾಂಕ್ಷಿಗಳ ಕುರಿತು ಅಭಿಪ್ರಾಯ ಸಂಗ್ರಹಿಸಿದರು.

ಇದೇ ವೇಳೆ ಅವರು ಮಾತನಾಡಿ, ಕೆಪಿಸಿಸಿ ಆದೇಶದ ಮೇರೆಗೆ ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಸಂಬಂಧ ಹಲವು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಅಧ್ಯಕ್ಷ ಸ್ಥಾನವನ್ನು ನಿಭಾಯಿಸುವುದು ಸುಲಭದ ಕೆಲಸವಲ್ಲ. ಎಲ್ಲ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಪಕ್ಷದ ಸಂಘಟನೆಗಾಗಿ ಉತ್ತಮವಾಗಿ ಕಾರ್ಯನಿರ್ವಹಿಸುವುದು ಮುಖ್ಯ. ಈ ನಿಟ್ಟಿನಲ್ಲಿ ಮಹಮದ್ ಅಸ್ಗರ್, ಎ.ಎಸ್. ಗುರುಸ್ವಾಮಿ ಇಬ್ಬರೂ ಅಧ್ಯಕ್ಷರು ಉತ್ತಮವಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳ ಕುರಿತು ಕಾರ್ಯಕರ್ತರನ್ನು ಒಬ್ಬೊಬ್ಬರನ್ನಾಗಿ ಕರೆದು ಅಭಿಪ್ರಾಯ ಸಂಗ್ರಹಿಸಲಾಗುವುದು. ಬಳಿಕ ಸಂಗ್ರಹಿಸಿದ ಅಭಿಪ್ರಾಯಗಳ ವರದಿಯನ್ನು ಕೆಪಿಸಿಸಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.ಕಾಡಾ ಅಧ್ಯಕ್ಷ ಪಿ,ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜೆ. ಯೋಗೇಶ್, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕ ಮಹದೇವ, ಆರ್,ಮಹದೇವ, ಗ್ರಾಮಾಂತರ ಅಧ್ಯಕ್ಷ ಎ,ಎಸ್ ಗುರುಸ್ವಾಮಿ, ಕೆಪಿಸಿಸಿ ವೀಕ್ಷಕ ಶಿವನಾಗಪ್ಪ, ಚಾಮುಲ್ ನಿರ್ದೇಶಕ ನಾಗಯ್ಯ, ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿ,ಎನ್ ಮಹೇಶ್ ಕುದರ್, ನಗರಸಭೆ ನಾಮ ನಿರ್ದೇಶಕ ಸ್ವಾಮಿ, ಗ್ಯಾರಂಟಿ ಯೋಜನೆ ಅನುಷ್ಠಾನಸಮಿತಿ ತಾಲೂಕು ಅಧ್ಯಕ್ಷ ಸೋಮೇಶ್ವರ್, ಕುಮಾರ್, ರಾಜು, ರಮೇಶ್, ನಗರಸಭೆ ಮಾಜಿ ಅಧ್ಯಕ್ಷೆ ಚಿನ್ನಮ್ಮ, ಪದ್ಮಾ ಪುರುಷೋತ್ತಮ್, ಗ್ರಾಮಾಂತರ ಮಹಿಳಾ ಅಧ್ಯಕ್ಷೆ ಶಕುಂತಲಾ, ಪೃಥ್ವಿ, ಯುವ ಘಟಕದ ಅಧ್ಯಕ್ಷ ಯೋಗೇಂದ್ರ, ಜಿಪಂ ಕೆಡಿಪಿ ಸದಸ್ಯ ಸಯ್ಯದ್ ಮುಸಾಯದ್, ತಾಪಂ ಕೆಡಿಪಿ ಸದಸ್ಯ ಶ್ರೀನಿವಾಸ್, ಮಾಧ್ಯಮ ಕಾರ್ಯದರ್ಶಿ ಗೌಡಳ್ಳಿ ರಾಜೇಶ್, ಮೋಹನ್‌ ನಗು, ಜಿಪಂ ಮಾಜಿ ಉಪಾಧ್ಯಕ್ಷ ಶಿವಕುಮಾರ್, ರಮೇಶ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ಹಲ್ ಷರೀಪ್, ಇಮ್ರಾನ್ ಅಹಮದ್ ಅಪ್ಸರ್‌ ಅಹಮದ ಸೇರಿ ಪಕ್ಷದ ಮುಖಂಡರು ಕಾರ್ಯಕರ್ತರು ಹಾಜರಿದ್ದರು.----------

28ಸಿಎಚ್‌ಎನ್‌52

ಚಾಮರಾಜನಗರ ಜಿಲ್ಲಾ ವೀಕ್ಷಕಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು