ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ ಮೀಸಲಾತಿ ಜಾಗೃತಿ

KannadaprabhaNewsNetwork |  
Published : Jan 06, 2024, 02:00 AM IST
ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ವಿದ್ಯುತ್ ಮಗ್ಗ ನೇಕಾರರಿಗೆ ಜಾಗೃತಿ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸ್ಥಳೀಯ ದೊಡ್ಡಬಳ್ಳಾಪುರ ಕ್ಷೇತ್ರದ ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ ಮೀಸಲಾತಿ ಅಧಿನಿಯಮ-1985 ರಡಿ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು.

ದೊಡ್ಡಬಳ್ಳಾಪುರ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸ್ಥಳೀಯ ದೊಡ್ಡಬಳ್ಳಾಪುರ ಕ್ಷೇತ್ರದ ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ ಮೀಸಲಾತಿ ಅಧಿನಿಯಮ-1985 ರಡಿ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು.

ಕೇಂದ್ರ ಸರ್ಕಾರವು ಕೈಮಗ್ಗ ಮೀಸಲಾತಿ ಅಧಿನಿಯಮ-1985 ಕಾಯ್ದೆಯನ್ನು ಜಾರಿಗೆ ತಂದಿದ್ದು ಈ ಕಾಯ್ದೆಯಡಿ ವಿದ್ಯುತ್ ಮಗ್ಗದಲ್ಲಿ ರೇಷ್ಮೆ ಸೀರೆ, ದೋತಿ, ಟವಲ್ ಮತ್ತು ಗಮ್ಚ, ಲುಂಗಿ, ಬೆಡ್ ಶೀಟ್, ಬೆಡ್ ಕವರ್, ಚಮಕಲಮ್, ಡ್ರೆಸ್ ಮೇಟಿರೀಯಲ್, ಕಂಬಳಿ, ಶಾಲ್, ಉಲ್ಲನ್ ಟ್ವೀಡ್, ಚಾದರ್ ಈ 11 ವಿವಿಧ ಬಗೆಯ ಉತ್ಪನ್ನಗಳನ್ನು ಉತ್ಪಾದಿಸುವಲ್ಲಿ ಮೀಸಲಾತಿ ಇರುವುದರ ಬಗ್ಗೆ ನೇಕಾರರಿಗೆ ಮಾಹಿತಿ ನೀಡಿದರು.

ದೊಡ್ಡಬಳ್ಳಾಪುರ ತಾಲೂಕು ದಕ್ಷಿಣ ಭಾಗದಲ್ಲಿ ಭೌಗೋಳಿಕವಾಗಿ ಅತಿ ಹೆಚ್ಚು ನೇಕಾರಿಕೆ ಸಾಂದ್ರತೆ ಇರುವ ಪ್ರದೇಶವಾಗಿದ್ದು ಈ ಭಾಗದಲ್ಲಿ ಹೆಚ್ಚಾಗಿ ವಿದ್ಯುತ್ ಮಗ್ಗವನ್ನು ಅವಲಂಬಿಸಿ ನೇಕಾರರು ಜೀವನವನ್ನು ಸುಧಾರಿಸುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಸದರಿ ಮಗ್ಗಗಳಲ್ಲಿ ಮೀಸಲಿರಿಸಿರುವ ಉತ್ಪನ್ನಗಳನ್ನು ಹೊರತುಪಡಿಸಿ ಡೂಪೀಯಾನ್, ಎಲ್ ಟಿ ಪಾಲಿಸ್ಟಾರ್ ನಂತಹ ಇತರೆ ಉತ್ಪನ್ನಗಳನ್ನು ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳಬಹುದೆಂದು ನೇಕಾರರಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪ್ರಾದೇಶಿಕ ಜಾರಿ ನಿರ್ದೇಶನಾಲಯದ ಅಧಿಕಾರಿ ಮನೋಹರ್, ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಎಂ, ಸಹಾಯಕ ನಿರ್ದೇಶಕರಾದ ಸುರೇಶ್ ಕುಮಾರ್ ಎಸ್, ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿ ಷನ್ಮುಗಂ, ನೇಕಾರರು ಉಪಸ್ಥಿತರಿದ್ದರು.6ಕೆಡಿಬಿಪಿ4-

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ವಿದ್ಯುತ್ ಮಗ್ಗ ನೇಕಾರರಿಗೆ ಜಾಗೃತಿ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ಗೆ ವಾರ್ಷಿಕ ಆದಾಯ ₹5 ಲಕ್ಷಕ್ಕೆ ಹೆಚ್ಚಿಸಿ
ರಾಜ್ಯ ಲಕ್ಷಾಂತರ ಅಕ್ರಮ ವಿದೇಶಿ ವಲಸಿಗರ ನೆಲೆ!